ಕನ್ನಡದ ಅಸ್ಮಿತೆ ಉಳಿಸುವ ಹೊಣೆ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ

KannadaprabhaNewsNetwork |  
Published : Nov 19, 2026, 01:30 AM IST
ಕನ್ನಡದ ಅಸ್ಮಿತೆ ಉಳಿಸುವ ಹೊಣೆ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಜಯಪ್ರಕಾಶ್ ಗುರೂಜಿ | Kannada Prabha

ಸಾರಾಂಶ

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ಕೇವಲ ಸಂಘಟನೆಗಳ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕನ್ನಡಿಗನೂ ತನ್ನ ದೈನಂದಿನ ಬದುಕಿನಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಮೂಲಕ ಭಾಷೆಯ ಅಸ್ಮಿತೆಯನ್ನು ಕಾಪಾಡಬೇಕು ಎಂದು ರುದ್ರಾಕ್ಷ ಫೌಂಡೇಶನ್ ಸಂಸ್ಥಾಪಕ ಜಯಪ್ರಕಾಶ್ ಗುರೂಜಿ ಅಭಿಪ್ರಾಯಪಟ್ಟರು. ಗಡಿ ಭಾಗಗಳಲ್ಲಿ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ನದಿ ನೀರು ಹಂಚಿಕೆಯಲ್ಲಿ ಉಂಟಾಗುತ್ತಿರುವ ತಾರತಮ್ಯಕ್ಕೆ ಸೂಕ್ತ ಪರಿಹಾರ ದೊರೆಯಬೇಕು ಎಂದು ಒತ್ತಾಯಿಸಿದರು.

ಅರಸೀಕೆರೆ:ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ಕೇವಲ ಸಂಘಟನೆಗಳ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕನ್ನಡಿಗನೂ ತನ್ನ ದೈನಂದಿನ ಬದುಕಿನಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಮೂಲಕ ಭಾಷೆಯ ಅಸ್ಮಿತೆಯನ್ನು ಕಾಪಾಡಬೇಕು ಎಂದು ರುದ್ರಾಕ್ಷ ಫೌಂಡೇಶನ್ ಸಂಸ್ಥಾಪಕ ಜಯಪ್ರಕಾಶ್ ಗುರೂಜಿ ಅಭಿಪ್ರಾಯಪಟ್ಟರು.ನಗರದ ರುದ್ರಾಕ್ಷ ಫೌಂಡೇಶನ್ ಆವರಣದಲ್ಲಿ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಭಾಷೆ, ಗಡಿ ಹಾಗೂ ನದಿ ನೀರಿನ ಹಂಚಿಕೆ ವಿಚಾರವಾಗಿ ರಾಜ್ಯಗಳ ನಡುವೆ ಸಂಘರ್ಷಗಳು ಮುಂದುವರಿಯುತ್ತಿರುವುದು ವಿಷಾದನೀಯ. ಗಡಿ ಭಾಗಗಳಲ್ಲಿ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ನದಿ ನೀರು ಹಂಚಿಕೆಯಲ್ಲಿ ಉಂಟಾಗುತ್ತಿರುವ ತಾರತಮ್ಯಕ್ಕೆ ಸೂಕ್ತ ಪರಿಹಾರ ದೊರೆಯಬೇಕು ಎಂದು ಒತ್ತಾಯಿಸಿದರು.ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಮಾತನಾಡಿ, ಅನೇಕ ಮಹನೀಯರ ತ್ಯಾಗ, ಹೋರಾಟ ಮತ್ತು ಪರಿಶ್ರಮದಿಂದ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ವಾಸ್ತುಶಿಲ್ಪ ಕ್ಷೇತ್ರಗಳಲ್ಲಿ ರಾಜ್ಯವು ವಿಶಿಷ್ಟ ಸ್ಥಾನ ಪಡೆದಿದೆ. ಇಂತಹ ಶ್ರೀಮಂತ ಪರಂಪರೆಯ ಭಾಷೆಯ ಮೇಲೆ ಅನ್ಯಭಾಷೆಗಳ ಪ್ರಭಾವ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕನ್ನಡಿಗರು ತಮ್ಮ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ಕನ್ನಡದ ಮಹತ್ವವನ್ನು ಪರಿಚಯಿಸಬೇಕು ಎಂದು ತಿಳಿಸಿದರು.ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್‌ ಮಾತನಾಡಿ, ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಮತ್ತು ವೈಭವದ ಪರಂಪರೆಯಿದೆ. ಕನ್ನಡ ಮಾತನಾಡುವುದರಿಂದ ಗೌರವ ಕಡಿಮೆಯಾಗುವುದಿಲ್ಲ, ಬದಲಾಗಿ ನಮ್ಮ ಭಾಷೆಯ ಮೇಲಿನ ಅಭಿಮಾನ ಹೆಚ್ಚುತ್ತದೆ ಎಂಬ ಅರಿವನ್ನು ಮಕ್ಕಳಲ್ಲಿ ಮೂಡಿಸಬೇಕು. ಆಂಗ್ಲಭಾಷೆಯ ವ್ಯಾಮೋಹಕ್ಕೆ ಒಳಗಾಗದೆ, ಅಗತ್ಯಕ್ಕೆ ತಕ್ಕಂತೆ ಇತರ ಭಾಷೆಗಳನ್ನು ಬಳಸುವುದರ ಜೊತೆಗೆ ಕನ್ನಡದ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಡಾ. ನಾರಾಯಣಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಗರಸಭೆ ಮಾಜಿ ಅಧ್ಯಕ್ಷ ಬಿ. ಎನ್. ವಿದ್ಯಾಧರ್, ಕನ್ನಡ ಸಾಹಿತ್ಯ ಪರಿಷತ್ತಿನ ದಿವಾಕರ್‌ ಬಾಬು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ