ಭವಿಷ್ಯ ರೂಪಿಸಿಕೊಳ್ಳುವ ಹೊಣೆ ವಿದ್ಯಾರ್ಥಿಗಳ ಕೈಯಲ್ಲಿದೆ: ಸಚಿವ

KannadaprabhaNewsNetwork |  
Published : Nov 16, 2026, 02:00 AM IST
ಬಾಟಂ | Kannada Prabha

ಸಾರಾಂಶ

The responsibility of shaping the future lies in the hands of students: Minister

-ಎಚ್‌ಪಿಪಿಸಿ ಕಾಲೇಜಿನಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಚಾಲನೆಕನ್ನಡಪ್ರಭ ವಾರ್ತೆ ಚಳ್ಳಕೆರೆ

ಗುಣಮಟ್ಟದ ಶಿಕ್ಷಣ ಪಡೆದು ಭವಿಷ್ಯದ ಬದುಕಿಗೆ ಭದ್ರ ಬುನಾದಿ ಹಾಕಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರಮುಖ ಗುರಿಯಾಗಬೇಕು. ಈ ಗುರಿ ಸಾಧನೆಗೆ ವಿದ್ಯಾರ್ಥಿಗಳ ಪರಿಶ್ರಮದ ಜೊತೆಗೆ ಬೋಧಕವರ್ಗದ ಮಾರ್ಗದರ್ಶನ ಮತ್ತು ಸಹಕಾರವೂ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು.

ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಐಕ್ಯೂಎಸಿ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2, ಎನ್‌ಸಿಸಿ, ಯುವ ರೆಡ್‌ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಎಲ್ಲರ ಪರಿಶ್ರಮ ಮತ್ತು ಸಹಕಾರದ ಫಲವಾಗಿ ಎಚ್‌ಪಿಪಿಸಿ ಕಾಲೇಜು ಮಹಾವಿದ್ಯಾಲಯವಾಗಿ ಬೆಳೆದು ನಿಂತಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಫಲಿತಾಂಶ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಧನೆಯನ್ನು ಕಾಲೇಜು ಮಾಡಬೇಕು. ಈ ನಿಟ್ಟಿನಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾಲೇಜಿನ ಅಭಿವೃದ್ಧಿ ಎಂಬುದು ಒಬ್ಬರ ಜವಾಬ್ದಾರಿಯಲ್ಲ, ಅದು ಎಲ್ಲರ ಸಾಮೂಹಿಕ ಹೊಣೆಗಾರಿಕೆ. ಅಭಿವೃದ್ಧಿಗೆ ಸಂಬಂಧಿಸಿದ ಸಲಹೆ, ಸಮಸ್ಯೆ ಹಾಗೂ ಹೊಸ ಆಲೋಚನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕು. ಶಿಕ್ಷಣ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ತಾರಿಣಿ ಶುಭದಾಯಿನಿ ಮಾತನಾಡಿ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯಲು ಶಿಕ್ಷಣವೇ ಅತ್ಯಂತ ಶಕ್ತಿಶಾಲಿ ಸಾಧನವಾಗಿದೆ. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪೂರಕವಾದ ವಾತಾವರಣ ರೂಪಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಇಂತಹ ಕಾಲೇಜುಗಳು ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಮರ್ಥ್ಯವನ್ನು ಗುರುತಿಸಿಕೊಂಡು ನಿರಂತರ ಅಧ್ಯಯನ, ಶಿಸ್ತು ಮತ್ತು ಪರಿಶ್ರಮದ ಮೂಲಕ ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಬೇಕು ಎಂದು ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಕೆ. ದೇವಪ್ಪ ಮಾತನಾಡಿ, ವಿದ್ಯಾರ್ಥಿಗಳು ಆಲಸ್ಯ ಮತ್ತು ಸೋಮಾರಿತನಕ್ಕೆ ಅವಕಾಶ ನೀಡದೆ ಜ್ಞಾನಾರ್ಜನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಜೊತೆಗೆ ಶಿಸ್ತು, ಸಂಸ್ಕಾರ, ನಾಯಕತ್ವ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಂಡಾಗ ಮಾತ್ರ ಸಮಗ್ರ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ರೈತ ಮುಖಂಡ ಕೆ.ಪಿ.ಭೂತಯ್ಯ, ಕೆ. ಸೂರನಾಯಕ, ಜಯವೀರಚಾರಿ, ನಿವೃತ್ತ ಪ್ರಾಂಶುಪಾಲ ಎಂ.ಶಿವಲಿಂಗಪ್ಪ, ಡಾ.ಜಿ.ವಿ. ರಾಜಣ್ಣ, ಡಾ.ಆರ್.ಎಸ್. ಚನ್ನಕೇಶವ, ಡಾ.ಕೆಂಚಪ್ಪ, ರಾಘವೇಂದ್ರ, ಡಾ.ಎಸ್.ಆರ್. ಲೇಪಾಕ್ಷಿ, ಡಾ.ಎಚ್.ಬಸವರಾಜು, ಎಲ್. ಗಂಗಾನಾಯ್ಕ, ಡಾ.ರಾಜಕುಮಾರ್, ಪೈರೋಜ್, ಡಾ.ಟಿ. ಗಂಗಾಧರ, ವಿ. ನಾಗರಾಜ, ಸಚಿನ್ ಸೇರಿದಂತೆ ಉಪನ್ಯಾಸಕರು, ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಫೋಟೋ

ಚಳ್ಳಕೆರೆ ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಟಿ.ರಘುಮೂರ್ತಿ ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಆರ್.ತಾರಿಣಿ ಶುಭದಾಯಿನಿ ಅವರನ್ನು ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಸಂಪರ್ಕ ಹೆಚ್ಚಳದಿಂದ ಅಭಿವೃದ್ಧಿಗೆ ಪೂರಕ: ಶಾಸಕ ದಿನಕರ ಶೆಟ್ಟಿ
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಕೆ.ರುದ್ರಪ್ಪ ಆಯ್ಕೆ