ಪಕ್ಷ ಬಲಿಷ್ಠಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ರೋಸಲಿನಾ ಟಿರ್ಕೆ

KannadaprabhaNewsNetwork |  
Published : Jul 30, 2026, 02:45 AM IST
ಎಐಸಿಸಿ ಕಾರ್ಯದರ್ಶಿ ರೋಸಲಿನಾ ಟಿರ್ಕೆ ಸೋಮವಾರ ಸಂಜೆ ಇಲ್ಲಿಯ ದೈವಜ್ಞ ಸಭಾ ಭವನದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷ ಸಂಘಟನೆ ಕುರಿತು ಅಭಿಪ್ರಾಯ ಸಂಗ್ರಹ ಸಭೆಯನ್ನು ಉದ್ಘಾಟಿಸಿದರು. | Kannada Prabha

ಸಾರಾಂಶ

ಪಕ್ಷದ ಸಂಘಟನೆ ಬಲಪಡಿಸುವ ದೃಷ್ಟಿಯಿಂದ ಪ್ರತಿ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿ ಅರ್ಹರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡುವ ಉದ್ದೇಶ ಪಕ್ಷದ್ದಾಗಿದೆ.

ಜಿಲ್ಲಾ ಕಾಂಗ್ರೆಸ್ ಪಕ್ಷ ಸಂಘಟನೆ ಕುರಿತು ಅಭಿಪ್ರಾಯ ಸಂಗ್ರಹ ಸಭೆ ಉದ್ಘಾಟಿಸಿ ಎಐಸಿಸಿ ಕಾರ್ಯದರ್ಶಿಕನ್ನಡಪ್ರಭ ವಾರ್ತೆ ಮುಂಡಗೋಡ

ಪಕ್ಷದ ಸಂಘಟನೆ ಬಲಪಡಿಸುವ ದೃಷ್ಟಿಯಿಂದ ಪ್ರತಿ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿ ಅರ್ಹರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡುವ ಉದ್ದೇಶ ಪಕ್ಷದ್ದಾಗಿದೆ. ಹಾಗಾಗಿ ಪ್ರತಿಯೊಬ್ಬರು ಇದಕ್ಕೆ ಸಹಕರಿಸಬೇಕು ಎಂದು ಎ.ಐ.ಸಿ.ಸಿ. ಕಾರ್ಯದರ್ಶಿ ರೋಸಲಿನಾ ಟಿರ್ಕೆ ಹೇಳಿದರು

ಸೋಮವಾರ ಸಂಜೆ ಇಲ್ಲಿಯ ದೈವಜ್ಞ ಸಭಾ ಭವನದಲ್ಲಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷ ಸಂಘಟನೆ ಕುರಿತು ಅಭಿಪ್ರಾಯ ಸಂಗ್ರಹ ಸಭೆ ಉದ್ಘಾಟಿಸಿ ಮಾತನಾಡಿದರು.

ಪಕ್ಷ ಬೆಳೆದರೆ ನಾವು ಕೂಡ ಬೆಳೆಯಲು ಸಾಧ್ಯ, ಹಾಗಾಗಿ, ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಬಳಿಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಕುರಿತು ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದರು. ಕೆ.ಪಿ.ಸಿ.ಸಿ. ಸದಸ್ಯ ವಿವೇಕ ಹೆಬ್ಬಾರ, ವೀಕ್ಷಕರಾದ ಡಾ. ರಾಘವೇಂದ್ರ, ನವೀನ ಡಿಸೋಜಾ, ಸ್ವಾತಿ ಮಾಳಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ, ಮಾಜಿ ಶಾಸಕ ವಿ.ಎಸ್. ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎನ್. ದುಂಡಸಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಠೋಡ, ಜಿಲ್ಲಾ ಗ್ರಾರಂಟಿ ಸಮಿತಿ ಅಧ್ಯಕ್ಷ ಸತೀಶ ನಾಯ್ಕ, ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಚ್.ಎಂ ನಾಯ್ಕ, ಧರ್ಮರಾಜ ನಡಗೇರ, ಮಹ್ಮದಗೌಸ್ ಮಖಾಂದಾರ, ಸಲ್ಮಾ ಕಿರಣ ಶೇರಖಾನೆ, ಜ್ಞಾನದೇವ ಗುಡಿಯಾಳ, ದೇವು ಪಾಟೀಲ, ಕೆಂಜೋಡಿ ಗಲಬಿ, ರಾಮಕೃಷ್ಣ ಮೂಲಿಮನಿ, ರಾಜು ಕುಟ್ರಿ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಸಿಹಿತ್ಲು ಭಜನಾ ಮಂದಿರ ಸಮೀಪ ಕಡಲ್ಕೊರೆತ ಆರ್ಭಟ ತೀವ್ರ
ಪಕ್ಷ ಬಲಪಡಿಸಲು ‘ಸಂಘಟನ್ ಸೃಜನ್’ ಅಭಿಯಾನ: ಜಯಂತ್