ಮತದಾನ ಹಕ್ಕು ಪ್ರಜಾಪ್ರಭುತ್ವದ ಪ್ರಮುಖ ಶಕ್ತಿ: ಉಮೇಶ ಮೇಟಿ

KannadaprabhaNewsNetwork |  
Published : Nov 29, 2026, 03:00 AM IST
ಮತ ಉಳಿಸಿ - ದೇಶ ಉಳಿಸಿ ಅಭಿಯಾನದಡಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನಾ ರ್ಯಾಲಿ | Kannada Prabha

ಸಾರಾಂಶ

ಬಾಗಲಕೋಟೆ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಮತ ಉಳಿಸಿ-ದೇಶ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಮತದಾರರ ಹಕ್ಕುಗಳ ರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬಾಗಲಕೋಟೆ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಮತ ಉಳಿಸಿ-ದೇಶ ಉಳಿಸಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಯಿತು.

ಪ್ರತಿಭಟನಾ ರ್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಮತದಾನ ಹಕ್ಕಿನ ಮಹತ್ವ, ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ ಮೇಟಿ, ಮತದಾನ ಹಕ್ಕು ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಶಕ್ತಿಯಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ತನ್ನ ಮತದಾನ ಹಕ್ಕನ್ನು ಚಲಾಯಿಸುವ ಅವಕಾಶ ದೊರೆಯಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿ ಚುನಾವಣೆ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಇರಬೇಕು. ಅರ್ಹ ಮತದಾರರ ಹೆಸರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರ ವಿಶ್ವಾಸ ಉಳಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ದಯಾನಂದ ಪಾಟೀಲ ಮಾತನಾಡಿ, ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ ನಡೆಸುವುದಲ್ಲ, ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಸ್ವಾತಂತ್ರ್ಯ ಗೌರವಿಸುವ ವ್ಯವಸ್ಥೆಯಾಗಿದೆ. ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಚುನಾವಣೆ ವ್ಯವಸ್ಥೆಯ ಪಾರದರ್ಶಕತೆ, ಚುನಾವಣೆ ಆಯೋಗದ ಸ್ವಾಯತ್ತತೆ ಹಾಗೂ ಸಂವಿಧಾನದ ಆಶಯಗಳ ಕುರಿತು ಅನೇಕ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ. ಈ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿಯಾಗಿದೆ. ಮತದಾರರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಶಾಂತಿಯುತ ಮತ್ತು ಸಂವಿಧಾನಾತ್ಮಕವಾಗಿ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.

ಪ್ರಜಾಪ್ರಭುತ್ವದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಮತದಾನದ ಹಕ್ಕಿನ ಮಹತ್ವವನ್ನು ಮನೆಮನೆಗೆ ತಲುಪಿಸುವ ಮೂಲಕ ಜನಜಾಗೃತಿ ಅಭಿಯಾನ ಮುಂದುವರಿಸಲಾಗುವುದು ಎಂದು ಮುಖಂಡರು ತಿಳಿಸಿದರು.

ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ,ಎಸ್ಸಿ ಘಟಕದ ಅಧ್ಯಕ್ಷ ರಾಜು ಮನ್ನಿಕೇರಿ, ಬ್ಲಾಕ್‌ ಅಧ್ಯಕ್ಷರಾದ ಅಕ್ಬರ ಮುಲ್ಲಾ, ಎಸ ಎನ ರಾಂಪೂರ, ಬುಡಾ ಅಧ್ಯಕ್ಷ ಅಬ್ದುಲರಜಾಕ ಬೇಣೂರ, ವಕೀಲ ನಿಂಗಪ್ಪ ಗಸ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹನುಮಂತ ರಾಕುಂಪಿ, ಶ್ರೀನಿವಾಸ ಬಳ್ಳಾರಿ, ಬಸವಂತಪ್ಪ ಮೇಟಿ, ಬಸವಂತಪ್ಪ ಅಂಟರದಾನಿ, ಹಾಜಿಸಾಬ ದಂಡಿನ, ರಂಗಪ್ಪ ಮೆಳ್ಳಿ, ಜಟ್ಟೆಪ್ಪ ಮಾದಾಪೂರ, ರಾಚಪ್ಪ ಪಟ್ಟಣದ, ರೇಣುಕಾ ನ್ಯಾಮಗೌಡ, ರೇಣುಕಾ ನಾರಾಯಣಕರ, ಮಂಜುಳಾ ಭುಸಾರೇ, ಪ್ರೇಮಾ ರಾಠೋಡ, ಮುಮತಾಜ ಸುತಾರ, ಮುತ್ತಪ್ಪ ಹುಗ್ಗಿ, ಸುಧಾ ಪಾಟೀಲ, ವಾ.ಸಿ. ಕಾಂಬಳೆ, ವಿಜಯ ಮುಳ್ಳೂರ, ಸುನೀಲ ಬಾಲಗಾವಿ, ಬಾಳಕ್ಕನ್ನವರ, ಪೀರಾ ಮಲ್ಲು, ಲಮಾಣಿ ಶ್ರವಣ ಖಾತೆದಾರ, ಇಬ್ರಾಹಿಂ ಕಲಾದಗಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಕ್ಕರೆ ಕನಿಷ್ಠ ಮಾರಾಟ ಬೆಲೆ ಕೆ.ಜಿ.ಗೆ ₹60ಕ್ಕೆ ಹೆಚ್ಚಿಸಿ
ಸೈನಿಕ ಶಾಲೆ ಪ್ರವೇಶಾತಿಗೆ ಜ.31ರಂದು ಪರೀಕ್ಷೆ