ಅಂಗವಿಕಲ ಮಕ್ಕಳ ಹಕ್ಕುಗಳಿಗೆ ಚ್ಯುತಿ ಬಾರದಿರಲಿ: ಸಿ.ಎಸ್. ಶಿವನಗೌಡ

KannadaprabhaNewsNetwork |  
Published : Nov 26, 2025, 02:15 AM IST
ಕಾರ್ಯಕ್ರಮಕ್ಕೆ ಸಿ.ಎಸ್‌.ಶಿವನಗೌಡ ಚಾಲನೆ ನೀಡಿದರು. | Kannada Prabha

ಸಾರಾಂಶ

ಕ್ರೀಡೆ ಮನುಷ್ಯನ ಅವಿಭಾಜ್ಯ ಅಂಗವಾಗಿದೆ. ಕೌಶಲ್ಯಪೂರ್ಣ ತರಬೇತಿಯಿಂದ ಸ್ವಾಲಂಬಿಗಳಾಗಬೇಕು. ತಂದೆ- ತಾಯಿಯರಿಗೆ ಸಂಪೂರ್ಣವಾಗಿ ಅವಲಂಬಿತವಾಗಬಾರದು.

ಗದಗ: ಅಂಗವಿಕಲ ಮಕ್ಕಳ ಹಕ್ಕುಗಳಿಗೆ ಚ್ಯುತಿ ಬರದಂತೆ ಎಚ್ಚರ ವಹಿಸಿ. ಅಲ್ಲದೇ ಅಂಗವಿಕಲ ಮಕ್ಕಳು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ ತಿಳಿಸಿದರು.

ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ- ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ- 2025ರ ಪ್ರಯುಕ್ತ ಅಂಗವಿಕಲರಿಗಾಗಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿಕಲಚೇತನರ ಕಲ್ಯಾಣಾಧಿಕಾರಿ ಮಾಂತೇಶ ಕೆ. ಮಾತನಾಡಿ, ಸಾಮಾಜಿಕ ಪ್ರಗತಿಯನ್ನು ಸಾಧಿಸಲು ಅಂಗವಿಕಲರನ್ನು ಒಳಗೊಂಡ ಸಮಾಜವನ್ನು ರೂಪಿಸುವುದು ಘೋಷವಾಕ್ಯವಾಗಿದೆ. ಈ ಕ್ರೀಡೆಯಲ್ಲಿ ಪುರುಷ, ಮಹಿಳೆ, ಹಲವಾರು ಶಾಲಾ ಮಕ್ಕಳು ಸ್ವಯಂಸೇವಾ ಸಂಸ್ಥೆಯ ಮಕ್ಕಳು ಸೇರಿದಂತೆ ಒಟ್ಟು 250 ಅಂಗವಿಕಲರ ಮಕ್ಕಳು ಭಾಗಿಯಾಗಿದ್ದಾರೆ ಎಂದರು.ಕ್ರೀಡೆ ಮನುಷ್ಯನ ಅವಿಭಾಜ್ಯ ಅಂಗವಾಗಿದೆ. ಕೌಶಲ್ಯಪೂರ್ಣ ತರಬೇತಿಯಿಂದ ಸ್ವಾಲಂಬಿಗಳಾಗಬೇಕು. ತಂದೆ- ತಾಯಿಯರಿಗೆ ಸಂಪೂರ್ಣವಾಗಿ ಅವಲಂಬಿತವಾಗಬಾರದು ಎಂದರು.

ಈ ವೇಳೆ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!