ಕನ್ನಡಪ್ರಭ ವಾರ್ತೆ ಮೂಡಲಗಿ
ಸಮೀಪದ ದತ್ತುಗ್ರಾಮ ಬಳೋಬಾಳದಲ್ಲಿ, ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ೨೦೨೫-೨೬ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ರವಿವಾರ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಶ್ರೇಷ್ಠ ಭಾರತ ಎಂಬ ವಿಷಯದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸಮಾಜದ ಕಟ್ಟುಪಾಡುಗಳ ಹೊರತಾಗಿಯೂ ಕೂಡ ಈಗಿನ ಆಧುನಿಕ ದಿನಗಳಲ್ಲಿ ಆಕೆ ಸಾಧನೆಯ ಶಿಖರವನ್ನು ಮುಟ್ಟುತ್ತಿದ್ದಾಳೆ ಎಂದರು.
ಮುಖ್ಯ ಅತಿಥಿ ಚೇತನ ಜೋಗನ್ನವರ ಮಾತನಾಡಿ, ವೈವಿಧ್ಯತೆಯಲ್ಲಿ ಏಕತೆ ಎನ್ನುವುದು ಭಾರತದ ಜೀವಾಳ. ನಮ್ಮ ದೇಶದಲ್ಲಿ ನೂರಾರು ಭಾಷೆಗಳು, ಸಾವಿರಾರು ಆಚಾರ-ವಿಚಾರಗಳು ಮತ್ತು ವೈವಿಧ್ಯಮಯ ಸಂಸ್ಕೃತಿಗಳಿವೆ. ನಾವು ಬೇರೆ ಪ್ರಾಂತ್ಯದ ಆಹಾರ, ಕಲೆ ಮತ್ತು ಭಾಷೆಯನ್ನು ಗೌರವಿಸಿದಾಗ ಮಾತ್ರ ಶ್ರೇಷ್ಠ ಭಾರತ ನಿರ್ಮಾಣವಾಗಲು ಸಾಧ್ಯ. ನಾವೆಲ್ಲರೂ ಭಾರತೀಯರು, ಭಾರತವೇ ನಮ್ಮ ಹೆಮ್ಮೆ ಎಂದು ಹೇಳಿದರು.ಅತಿಥಿ ಈಶ್ವರ ಬೆಳವಿ ಶ್ರೇಷ್ಠಭಾರತದ ವೈಶಿಷ್ಟ್ಯದ ಕುರಿತು ಮಾತನಾಡಿದರು. ಪ್ರಾಚಾರ್ಯ ಡಾ.ಸುರೇಶ ಹನಗಂಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸುಶ್ಮೀತಾ ಹೊರಟ್ಟಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು, ಸೌಜನ್ಯ ಬಂಡ್ರೋಳ್ಳಿ ಹಾಗೂ ಸಂಗಡಿಗರು ಎನ್.ಎಸ್.ಎಸ್. ಗೀತೆ ಹಾಡಿದರು. ಡಾ.ರಾಜಶ್ರೀ ತೋಟಗಿ ನಿರೂಪಿಸಿದರು, ವಿ.ವೈ.ಕಾಳೆ ಸ್ವಾಗತಿಸಿದರು, ಅಕ್ಷತಾ ಮೇದಾರ ವಂದಿಸಿದರು.