ಗ್ರಾಮೀಣರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ಸಂಘದ ಪಾತ್ರ ಮಹತ್ವದ್ದು-ಶಾಸಕ ಬಣಕಾರ

KannadaprabhaNewsNetwork |  
Published : Nov 17, 2025, 01:15 AM IST
ಪೊಟೋ : 16 ಎಚ್‌ಕೆಆರ್ 01 | Kannada Prabha

ಸಾರಾಂಶ

ಸಹಕಾರ ಸಂಘಗಳು ಗ್ರಾಮೀಣ ಪ್ರದೇಶದಲ್ಲಿ ಗರಿಷ್ಠ ಪ್ರಮಾಣದಲ್ಲಿ ನೋಂದಣಿಯಾಗಿ, ಗ್ರಾಮೀಣ ಜನರಿಗೆ ಆರ್ಥಿಕ ಸಬಲೀಕರಣಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದ ಶಾಸಕ ಯು.ಬಿ. ಬಣಕಾರ ಹೇಳಿದರು.

ಹಿರೇಕೆರೂರು: ಸಹಕಾರ ಸಂಘಗಳು ಗ್ರಾಮೀಣ ಪ್ರದೇಶದಲ್ಲಿ ಗರಿಷ್ಠ ಪ್ರಮಾಣದಲ್ಲಿ ನೋಂದಣಿಯಾಗಿ, ಗ್ರಾಮೀಣ ಜನರಿಗೆ ಆರ್ಥಿಕ ಸಬಲೀಕರಣಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದ ಶಾಸಕ ಯು.ಬಿ. ಬಣಕಾರ ಹೇಳಿದರು.ಪಟ್ಟಣದ ಸಿಇಎಸ್ ಕಾಲೇಜ್‌ ಆವರಣದ ಎ.ಪಿ.ಜೆ. ಅಬ್ದುಲ್ ಕಲಾಂ ಕಲಾಭವನದಲ್ಲಿ ಸಹಕಾರ ಮಹಾಮಂಡಳ, ಸಹಕಾರ ಯೂನಿಯನ್, ಕೆಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಸಹಕಾರ ಇಲಾಖೆ, ಪಿಎಲ್‌ಡಿ ಬ್ಯಾಂಕ್, ಹಿರೇಕೆರೂರ ಮತ್ತು ರಟ್ಟೀಹಳ್ಳಿ,ಟಿ.ಎ.ಪಿ.ಸಿ.ಎಂ.ಎಸ್.ಹಿರೇಕೆರೂರು ಮತ್ತು ರಟ್ಟೀಹಳ್ಳಿ ಹಾಗೂ ಸಹಕಾರ ಸಂಘಗಳು ಜಂಟಿಯಾಗಿ ಶನಿವಾರ ಆಯೋಜಿಸಿದ್ದ 72ನೇ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದಲ್ಲಿ ಗ್ರಾಮ ಪಂಚಾಯತಿಗಳು ಹಾಗೂ ಸಹಕಾರಿ ಸಂಘಗಳು ಅಭಿವೃದ್ಧಿಯಾದಲ್ಲಿ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂಬ ಗಾಂಧೀಜಿಯವರ ಮಾತಿನಂತೆ ಇಂದು ದೇಶದಲ್ಲಿ ಸಹಕಾರಿ ಸಂಸ್ಥೆಗಳು ಸಾಮಾಜಿಕ ಮತ್ತು ಆರ್ಥಿಕ ರಚನೆಯ ಅವಿಭಾಜ್ಯ ಅಂಗವಾಗಿವೆ. ಭಾರತದ ಸಹಕಾರಿ ವ್ಯವಸ್ಥೆಯು ಇಡೀ ವಿಶ್ವದಲ್ಲಿಯೇ ದೊಡ್ಡದಾಗಿದೆ ಮತ್ತು ಸಹಕಾರ ಸಂಸ್ಥೆಗಳು ಬಡತನವನ್ನು ನಿವಾರಿಸಲು, ಉದ್ಯೋಗವನ್ನು ಸೃಷ್ಟಿಸಲು ಮತ್ತು ಸಮಾನ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಪಕ್ಷಾತೀತವಾಗಿ ಸಹಕಾರಿ ಸಂಘ ಮತ್ತು ಬ್ಯಾಂಕ್‌ಗಳನ್ನು ಕಟ್ಟಿದರೆ ಅವು ಅಭಿವೃದ್ಧಿಯಾಗಲು ಸಾಧ್ಯ ಎಂದರು.ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಮಾತನಾಡಿ, ಸಹಕಾರ ಸಂಸ್ಥೆಗಳು ಬಡತನವನ್ನು ನಿವಾರಿಸಲು, ಉದ್ಯೋಗವನ್ನು ಸೃಷ್ಟಿಸಲು ಮತ್ತು ಸಮಾನ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಸಹಕಾರಿ ಸಂಘಗಳಿಂದ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಿ, ಉದ್ಯೋಗವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ರೈತರಿಗೆ ಕೃಷಿ ಕ್ಷೇತ್ರದಲ್ಲಿ ಪ್ರತಿ ಹಂತದಲ್ಲಿ ಯಾವುದೇ ಕೊರತೆಯಾಗದಂತೆ ಸಹಕಾರಿ ಸಂಘಗಳು ಪಾತ್ರ ವಹಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಳ್ಳಿ, ಸಹಕಾರಿ ಯೂನಿಯನ್ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಸಂಗಾಪೂರ, ಎಸ್.ಬಿ. ತಿಪ್ಪಣ್ಣನವರ, ರವಿಶಂಕರ ಬಾಳಕಾಯಿ, ಎಸ್. ವೀರಭದ್ರಯ್ಯ, ಜೆ,ಬಿ. ತಂಬಾಕದ, ಎ.ಕೆ. ಪಾಟೀಲ,ಬಿ,ಎನ್. ಬಣಕಾರ ಮಹೇಂದ್ರ ಬಡಳ್ಳಿ, ಮಲ್ಲನಗೌಡ ನಾಗಪ್ಪನವರ, ಮಾಲತೇಶ ಗಂಗೋಳ, ಪ್ರಶಾಚಿತ ದ್ಯಾವಕ್ಕಳವರ, ಮಂಗಳಾ ಬಣಕಾರ, ಬಿ.ಜಿ. ಬಣಕಾರ, ಸುನಿತಾ ಹಿರೇಮಠ ಹಾಗೂ ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ