ಸಮಾಜದ ಅಭಿವೃದ್ಧಿಗೆ ಶಿಕ್ಷಣದ ಪಾತ್ರ ಮುಖ್ಯ

KannadaprabhaNewsNetwork |  
Published : Aug 10, 2024, 01:32 AM IST
ಭೂಮಿ ಪೂಜೆ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಅಥಣಿ ಸಮಾಜ ಹಾಗೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಜೀವನದ ಯಶಸ್ಸಿಗೆ ಶಿಕ್ಷಣ ಅಡಿಪಾಯ ಹಾಕುತ್ತದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಸದಾಶಿವ ಬುಟಾಳಿ ಹೇಳಿದರು. ಪಟ್ಟಣ ಹೊರವಲಯದ ಹುದ್ದಾರ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಉಚಿತ ದೊರಕಬೇಕಾದ ಶಿಕ್ಷಣ ಇಂದು ದುಬಾರಿಯಾಗುತ್ತಿದೆ. ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಅತ್ಯಂತ ಕಡಿಮೆ ದರದಲ್ಲಿ ಒಳ್ಳೆಯ ಶಿಕ್ಷಣ ಒದಗಿಸುತ್ತಿರುವ ಹುದ್ದಾರ ಶಿಕ್ಷಣ ಸಂಸ್ಥೆಯ ಕಾಯಕ ಶ್ಲಾಘನೀಯ ಎಂದರು.

ಕನ್ನಡಪ್ರಭ ವಾರ್ತೆ ಅಥಣಿ

ಸಮಾಜ ಹಾಗೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಜೀವನದ ಯಶಸ್ಸಿಗೆ ಶಿಕ್ಷಣ ಅಡಿಪಾಯ ಹಾಕುತ್ತದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಸದಾಶಿವ ಬುಟಾಳಿ ಹೇಳಿದರು.

ಪಟ್ಟಣ ಹೊರವಲಯದ ಹುದ್ದಾರ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಉಚಿತ ದೊರಕಬೇಕಾದ ಶಿಕ್ಷಣ ಇಂದು ದುಬಾರಿಯಾಗುತ್ತಿದೆ. ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಅತ್ಯಂತ ಕಡಿಮೆ ದರದಲ್ಲಿ ಒಳ್ಳೆಯ ಶಿಕ್ಷಣ ಒದಗಿಸುತ್ತಿರುವ ಹುದ್ದಾರ ಶಿಕ್ಷಣ ಸಂಸ್ಥೆಯ ಕಾಯಕ ಶ್ಲಾಘನೀಯ ಎಂದರು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಾವಿದನಾಗಿ ವಿಜಯ ಹುದ್ದಾರ ಕಳೆದ 20 ವರ್ಷಗಳಿಂದ ಬಡ ಮಕ್ಕಳ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆ ಪ್ರಾರಂಭಿಸಿ ಸಾವಿರಾರು ಮಕ್ಕಳ ಬಾಳಿಗೆ ಬೆಳಕಾಗಿದ್ದಾರೆ. ಅವರ ಶಿಕ್ಷಣ ಸಂಸ್ಥೆ ಹೆಮ್ಮರವಾಗಿ ಬೆಳೆಯಲಿ. ಕಟ್ಟಡಕ್ಕೆ ನಾನು ಸಹಕಾರ ನೀಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರೌಢಶಾಲೆ ಮತ್ತು ಕಾಲೇಜು ಆರಂಭಿಸುವ ನಿಟ್ಟಿನಲ್ಲಿ ಸಂಸ್ಥೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಯುವ ಮುಖಂಡ ಚಿದಾನಂದ ಸವದಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ, ಅನಾಥ ಮಕ್ಕಳಿಗೆ ಶಿಕ್ಷಣ, ಅನ್ನದಾಸೋಹ ಮತ್ತು ಆಶ್ರಯ ವ್ಯವಸ್ಥೆ ಮಾಡಿರುವ ಹುದ್ದಾರ ಶಿಕ್ಷಣ ಸಂಸ್ಥೆಯ ಕಾರ್ಯ ಮೆಚ್ಚುವಂತದ್ದು. ಎರಡು ದಶಕಗಳಿಂದ ಸಾವಿರಾರು ಮಕ್ಕಳಿಗೆ ಶಿಕ್ಷಣ ಒದಗಿಸಿರುವ ಈ ಸಂಸ್ಥೆ ಇಂದು ಆಧುನಿಕ ಪದ್ಧತಿಯ ಶಿಕ್ಷಣ ಮತ್ತು ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಂಡು ಮುನ್ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಕ್ಷೇತ್ರದ ಶಾಸಕರಾಗಿರುವ ಲಕ್ಷ್ಮಣ ಸವದಿ ಅವರು ಮತ್ತು ನಾನು ಸಂಸ್ಥೆಯ ಬೆಳವಣಿಗೆಯಲ್ಲಿ ಆಡಳಿತ ಮಂಡಳಿಯ ಸದಸ್ಯನಂತೆ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.

ಪುರಸಭೆ ಸದಸ್ಯ ರಾವಸಾಬ ಐಹೊಳೆ, ರೈತ ಸಂಘದ ಅಧ್ಯಕ್ಷ ಮಹದೇವ ಮಡಿವಾಳ, ಉದ್ಯಮಿ ರವಿ ಪೂಜಾರಿ, ಮುಖಂಡ ಗಿರೀಶ ಬುಟಾಳಿ ಮಾತನಾಡಿದರು. ಸಮಾರಂಭದ ಸಾನಿಧ್ಯ ವಹಿಸಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ, ಅಮೋಘಸಿದ್ದ ಸ್ವಾಮೀಜಿ, ವಿಠಲ ಮಹಾರಾಜರು ಆಶೀರ್ವಚನ ನೀಡಿದರು.

ಮುಖಂಡರಾದ ಅಸ್ಲಂ ನಾಲಬಂದ, ಗಿರೀಶ ಬುಟಾಳಿ,ಗ್ರಾಪಂ ಸದಸ್ಯ ಪರಶುರಾಮ ಸೊಂದಕರ, ರಾಜು ಆಲಬಾಳ, ಶ್ರೀಶೈಲ ಹಳ್ಳದಮಳ, ಯಲ್ಲಪ್ಪ ಮಿರ್ಜಿ, ಐ.ಕೆ.ಕುಂಬಾರ, ಎಸ್.ಎಸ್.ಹೂಟಿ, ಮುದುಕಪ್ಪ ಜಮಖಂಡಿ, ಚಂದ್ರಕಾಂತ ಬಳ್ಳೊಳ್ಳಿ, ರಾಜು ಮರಡಿ, ಸತೀಶ ಪಾಟೀಲ, ಸಂತೋಷ ಕಾಳೇಲಿ, ಅಶೋಕ ಮಾರಾಪುರ ಸೇರಿ ಹಲವರು ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ವಿಜಯ ಹುದ್ದಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ಅಧಿಕಾರಿ ಸಂಜಯ ಕುಲಕರ್ಣಿ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಪೂರ್ಣಿಮಾ ಹುದ್ದಾರ ವಂದಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ