ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹುಮುಖ್ಯ-ಶಾಸಕ ಬಣಕಾರ

KannadaprabhaNewsNetwork |  
Published : Apr 11, 2026, 02:15 AM IST
ಹಿರೇಕೆರೂರು ತಾಲೂಕಿನ ನೀಡನೇಗಿಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೫-೨೬ನೇ ಸಾಲಿನ ರಾಜ್ಯಸಭಾ ಸದಸ್ಯ ಜಯರಾಮ ರಮೇಶ ಅವರ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಿದ ಶಾಲಾ ಕೊಠಡಿಯನ್ನು  ಶಾಸಕ ಯು.ಬಿ. ಬಣಕಾರ ಉದ್ಘಾಟಿಸಿದರು. | Kannada Prabha

ಸಾರಾಂಶ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹುಮುಖ್ಯವಾಗಿದ್ದು, ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಹತ್ತಾರು ಸೌಲಭ್ಯ ನೀಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಹಿರೇಕೆರೂರು: ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹುಮುಖ್ಯವಾಗಿದ್ದು, ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಹತ್ತಾರು ಸೌಲಭ್ಯ ನೀಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ತಾಲೂಕಿನ ನೀಡನೇಗಿಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೫-೨೬ನೇ ಸಾಲಿನ ರಾಜ್ಯಸಭಾ ಸದಸ್ಯ ಜಯರಾಮ ರಮೇಶ ಅವರ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಿದ ಶಾಲಾ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ಮಕ್ಕಳೇ ದೇಶದ ಭವಿಷ್ಯದ ಭವ್ಯ ಪ್ರಜೆಗಳು. ಅವರ ಭವಿಷ್ಯವನ್ನು ಉಜ್ವಲಗೊಳಿಸಿದಾಗ ದೇಶವು ಕೂಡ ಅಭಿವೃದ್ಧಿ ಪಥದತ್ತ ಸಾಗಲು ಅನಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಕಲಿಕೆ ಪೂರಕವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಿ, ಕಲಿಕೆ ಉತ್ತೇಜನ ನೀಡುವ ಕಾರ್ಯ ಮಾಡುತ್ತಿದೆ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಮಾಡಿಕೊಂಡು ಶಿಕ್ಷಣವಂತರಾಗಿ ಸಮಾಜವನ್ನು ಸರಿದಾರಿಯಲ್ಲಿ ಮುನ್ನಡೆಸುವಂತಹ ಕಾರ್ಯ ಮಾಡಬೇಕು.ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಆದ್ಯತೆ ನೀಡಿ, ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಮಕ್ಕಳ ಕಲಿಕೆಗೆ ಉತ್ತೇಜನ ನೀಡುವ ಕಾರ್ಯ ಮಾಡುತ್ತಿವೆ. ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿ ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು ಎಂದರು.ಬಿಇಒ ಎನ್. ಶ್ರೀಧರ, ಮಾತನಾಡಿ, ಮಕ್ಕಳ ಶೈಕ್ಷಣಿಕ ಚಟುವಟಿಗಳ ಮೇಲೆ ಪಾಲಕರು ಸದಾ ನಿಗಾ ವಹಿಸಿ ಅವರ ಶೈಕ್ಷಣಿಕ ಜೀವನಕ್ಕೆ ಭದ್ರ ಅಡಿಪಾಯ ಹಾಕಬೇಕು. ಸರ್ಕಾರಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚು ಆದ್ಯತೆ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡುತ್ತಿದೆ. ಎಲ್ಲ ಸೌಲಭ್ಯಗಳ ಪ್ರಯೋಜನ ಪಡೆದುಕೊಂಡು ಶಿಕ್ಷಣವಂತರಾಗಿ ಪರಿಪೂರ್ಣ ವ್ಯಕ್ತಿತ್ವ ನಿಮ್ಮದಾಗಿಸಿಕೊಳ್ಳಿ ಎಂದರು.ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ಎಸ್ ಡಿಎಂಸಿ ಅಧ್ಯಕ್ಷ ಮಹೇಶ ಗಿರಿಯಾಳ, ಉಪಾಧ್ಯಕ್ಷೆ ಸುಮಿತ್ರಾ ಲಮಾಣಿ, ಗ್ರಾಪಂ ಮಾಜಿ ಅಧ್ಯಕ್ಷ ಸುರೇಶನಾಯಕ ಲಮಾಣಿ, ಕ್ಷೇತ್ರ ಸಮನ್ವಯಾಧಿಕಾರಿ ಬಸವರಾಜ ತೆವರಿ, ಮುಖ್ಯಶಿಕ್ಷಕ ರಾಘವೇಂದ್ರ ಹಂಚಿನಮನಿ ಮುಖಂಡರಾದ, ಗುರುಬಸಪ್ಪಗೌಡ್ರು, ಮಲ್ಲೇಶನಾಯ್ಕ ಲಮಾಣಿ, ಮಾಲತೇಶ ಲಮಾಣಿ, ರಾಘವೇಂದ್ರ ಬಡಿಗೇರ, ಷಣ್ಮುಖ ತುಮ್ಮಿನಕಟ್ಟಿ,ಬಸವರಾಜ ಹರಿಜನ ಸೇರಿದಂತೆ ಎಸ್‌ಡಿಎಂಸಿ ಪದಾಧಿಕಾರಿಗಳು, ಗ್ರಾಮಸ್ಥರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖರ್ಗೆ ಹೇಳಿಕೆ ವಿರುದ್ಧ ಹಳಿಯಾಳ ಠಾಣೆಯಲ್ಲಿ ಬಿಜೆಪಿ ದೂರು
ನ್ಯಾಷನಲ್ ಪದವಿಪೂರ್ವ ಕಾಲೇಜಿಗೆ ಶೇ. 95 ಫಲಿತಾಂಶ