ಅಭಿವೃದ್ಧಿಯಲ್ಲಿ ಹೆದ್ದಾರಿಗಳ ಪಾತ್ರ ಬಹುಮುಖ್ಯ: ಶಾಸಕ ಶರತ್ ಬಚ್ಚೇಗೌಡ

KannadaprabhaNewsNetwork |  
Published : Oct 07, 2025, 01:02 AM IST
6ಕೆಬಿಪಿಟಿ.1.ಬಂಗಾರಪೇಟೆ ಸಮೀಪದ ಕಲ್ಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪ್ರಯಾಣಿಕರ ವಿಶ್ರಾಂತಿ ಪಡೆಯುವ ಕಾಮಗಾರಿಗೆ ವೈ ಸ್ಪೇಸ್ ಸಂಸ್ಥೆಯಿಂದ ಭೂಮಿ ಪೂಜೆಯ ಕಾರ್ಯಕ್ರಮದಲ್ಲಿ ಶಾಸಕ ಶರಥ್ ಬಚ್ಚೇಗೌಡ ಮಾತನಾಡಿದರು. | Kannada Prabha

ಸಾರಾಂಶ

ಹೆದ್ದಾರಿಗಳ ನಿರ್ಮಾಣ ಕಾರ್ಯದಲ್ಲಿ ರಾಜ್ಯ ಸರ್ಕಾರ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತದೆ, ಚೆನ್ನೈನಿಂದ ಬೆಂಗಳೂರು ನಡುವಿನ ಪ್ರಯಾಣವನ್ನು ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇವಲ ಮೂರು ಗಂಟೆಗಳಲ್ಲಿ ಕ್ರಮಿಸಬಹುದು,

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ರಾಷ್ಟ್ರ ಮತ್ತು ರಾಜ್ಯ ಅಭಿವೃದ್ಧಿಯಾಗಲು ಹೆದ್ದಾರಿಗಳ ಪಾತ್ರ ಬಹಳ ಪ್ರಮುಖವಾದುದು, ದೇಹಕ್ಕೆ ನರನಾಡಿಗಳಂತೆ ಅಭಿವೃದ್ಧಿಗೆ ರಸ್ತೆಗಳೇ ನರನಾಡಿಗಳಾಗಿವೆ, ಅಭಿವೃದ್ಧಿಯಲ್ಲಿ ಮುಂಚೂಣಿ ಸ್ಥಾನದಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅಭಿಪ್ರಾಯಪಟ್ಟರು.

ತಾಲೂಕಿನ ಕಾರಹಳ್ಳಿ ಗ್ರಾಮ ಪಂಚಾಯ್ತಿಯ ಕಲ್ಕೆರೆ ಗ್ರಾಮದ ಬೆಂಗಳೂರು- ಚೆನ್ನೈ ಹೆದ್ದಾರಿ ಬದಿಯಲ್ಲಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸುವ ವಿಶ್ರಾಂತಿ ಕೊಠಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಹೆದ್ದಾರಿಗಳ ನಿರ್ಮಾಣ ಕಾರ್ಯದಲ್ಲಿ ರಾಜ್ಯ ಸರ್ಕಾರ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತದೆ, ಚೆನ್ನೈನಿಂದ ಬೆಂಗಳೂರು ನಡುವಿನ ಪ್ರಯಾಣವನ್ನು ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇವಲ ಮೂರು ಗಂಟೆಗಳಲ್ಲಿ ಕ್ರಮಿಸಬಹುದು, ಈ ಕೀರ್ತಿ ರಾಜ್ಯ ಮತ್ತು ಕೇಂದ್ರಕ್ಕೆ ಸಲ್ಲಬೇಕು. ಈ ರಸ್ತೆಯಿಂದ ಪ್ರತ್ಯೇಕವಾಗಿ ಮತ್ತು ಪರೋಕ್ಷವಾಗಿ ಇಪ್ಪತ್ತು ಲಕ್ಷ ಜನರಿಗೆ ಉದ್ಯೋಗ ಅವಕಾಶ ದೊರೆಯುತ್ತದೆ, ಮೊದಲ ಬಾರಿಗೆ 2 ಸಾವಿರ ಕೋಟಿ ರು.ಗಳ ವೆಚ್ಚದಲ್ಲಿ ಈ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರಲ್ಲದೆ, ಈ ವಿಶ್ರಾಂತಿ ಸ್ಥಳದಲ್ಲಿ 150 ಅಡಿ ಎತ್ತರದ ಅಭಯ ಆಂಜನೇಯ ಸ್ವಾಮಿ ವಿಗ್ರಹ ಸ್ಥಾಪಿಸುವ ಮೂಲಕ ಬೃಹತ್ ಆಧ್ಯಾತ್ಮಿಕ ಕೇಂದ್ರವಾಗಿಯೂ ಸಹ ರೂಪುಗೊಳ್ಳಲಿದೆ ಎಂದು ತಿಳಿಸಿದರು.

ವೈ ಸ್ಪೇಸ್ ಸಂಸ್ಥೆಯ ಸಿಇಒ ರತ್ನಕುಮಾರ್ , ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯವಸ್ಥಾಪಕ ಪ್ರಭಾಕರ್ , ಅರ್ಚನಾ, ರಾಮನಾಥ್, ಸೋಮಶೇಖರ್, ಮಲ್ಲಿಕಾರ್ಜುನ್, ಸೋಮಶೇಖರ್ ರೆಡ್ಡಿ, ದಯಾಕರ್, ರಾಮನಾಥ್, ಶ್ರೀನಿವಾಸ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಲೆಟ್‌ನಲ್ಲಿ ಮತದಾನ ನಡೆಸಿದರೆ ತಪ್ಪೇನು? ರಾಜ್ಯ ಚುನಾವಣಾ ಆಯುಕ್ತ
ಜಾಗತಿಕ ಸವಾಲಿಗೆ ನವೋದ್ಯಮ ಉತ್ತರ : ರಾಧಾಕೃಷ್ಣನ್‌