ಕನ್ನಡಪ್ರಭ ವಾರ್ತೆ ಶಿರಹಟ್ಟಿ
ಬುಧವಾರ ಪಟ್ಟಣದ ಎಸ್.ಎಂ. ಡಬಾಲಿ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕುಗಳ ಬಾಲಕ, ಬಾಲಕಿಯರ ತಾಲೂಕುಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡಾಕೂಟದಲ್ಲಿ ಪ್ರತಿಯೊಬ್ಬ ಕ್ರೀಡಾಪಟುವಿಗೂ ಸಮಾನ ಅವಕಾಶ ದೊರೆಯುವಂತೆ ನಿರ್ಣಾಯಕರು ಕಾರ್ಯನಿರ್ವಹಿಸಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜತೆಗೆ ಯಾವುದೇ ಒತ್ತಡ, ಪಕ್ಷಪಾತಕ್ಕೆ ಒಳಗಾಗದೆ ನ್ಯಾಯಯುತ ತೀರ್ಪು ನೀಡಬೇಕು ಎಂದು ಹೇಳಿದರು.
ನಿರ್ಣಾಯಕರ ತೀರ್ಪು ಕ್ರೀಡಾಪಟುಗಳ ಆತ್ಮವಿಶ್ವಾಸ ಮತ್ತು ಕ್ರೀಡಾ ಮನೋಭಾವದ ಮೇಲೆ ಪರಿಣಾಮ ಬೀರುವುದರಿಂದ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದ ಅವರು, ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ನಾಯಕತ್ವ, ಸಹಕಾರ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸುತ್ತದೆ. ಹೀಗಾಗಿ ಶಾಲಾ-ಕಾಲೇಜು ಮಟ್ಟದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಅಗತ್ಯ ಮಾರ್ಗದರ್ಶನ ಹಾಗೂ ಉತ್ತಮ ತರಬೇತಿ ಒದಗಿಸುವ ಮೂಲಕ ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡುವಂತೆ ಉತ್ತೇಜಿಸಬೇಕು. ಕ್ರೀಡಾಕೂಟದ ಯಶಸ್ಸಿಗೆ ಸಂಘಟಕರು, ಶಿಕ್ಷಕರು, ನಿರ್ಣಾಯಕರು ಹಾಗೂ ಕ್ರೀಡಾಪಟುಗಳ ಸಮನ್ವಯ ಅಗತ್ಯ. ಕ್ರೀಡಾ ನಿಯಮಗಳ ಬಗ್ಗೆ ನಿರ್ಣಾಯಕರು ಸ್ಪಷ್ಟ ಜ್ಞಾನ ಹೊಂದಿರುವುದರ ಜತೆಗೆ ತೀರ್ಪು ನೀಡುವಾಗ ಸಂಯಮ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.
ಕ್ರೀಡೆ ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ, ಶಿಸ್ತು, ಆತ್ಮವಿಶ್ವಾಸ, ಸಮಯಪಾಲನೆ ಹಾಗೂ ತಂಡದ ಮನೋಭಾವ ಬೆಳೆಸುತ್ತದೆ. ಗೆಲುವು ಸಾಧಿಸಿದವರು ಅಹಂಕಾರ ಪಡದೆ, ಸೋತವರನ್ನು ಗೌರವಿಸಬೇಕು. ಸೋತವರು ಗೆದ್ದವರನ್ನು ಅಭಿನಂದಿಸಿ, ಮುಂದಿನ ಬಾರಿ ಗೆಲುವು ಸಾಧಿಸುವ ಛಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.