ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅನನ್ಯ

KannadaprabhaNewsNetwork |  
Published : Oct 03, 2024, 01:31 AM IST
ಫೋಟೋ : 2 ಹೆಚ್‌ಎಸ್‌ಕೆ 1 ಹೊಸಕೋಟೆ ನಗರದ ಅಂಬೇಡ್ಕರ್ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಸವಲತ್ತುಗಳ ಕಿಟ್‌ಗಳನ್ನು ಶಾಸಕ ಶರತ್ ಬಚ್ಚೇಗೌಡ, ಬಿಎಂಆರ್‌ಡಿಎ ಸದಸ್ಯ ಡಾ.ಹೆಚ್.ಎಂ.ಸುಬ್ಬರಾಜ್ ವಿತರಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಕಾರ್ಮಿಕ ವರ್ಗದಲ್ಲಿ ಶೇ 20 ಸಂಘಟಿತ, ಶೇ80 ಅಸಂಘಟಿತ ಕಾರ್ಮಿಕರಿದ್ಧಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ಕಾರ್ಮಿಕ ವರ್ಗದಲ್ಲಿ ಶೇ 20 ಸಂಘಟಿತ, ಶೇ80 ಅಸಂಘಟಿತ ಕಾರ್ಮಿಕರಿದ್ಧಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.ನಗರದ ಅಂಬೇಡ್ಕರ್ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳಿಗೆ ಕಿಟ್ ವಿತರಿಸಿ ಮಾತನಾಡಿದರು.ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಗಳು ಕಾರ್ಮಿಕರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಪಿಂಚಣಿ, ಟೂಲ್ ಕಿಟ್‌, ಮಹಿಳೆಯರಿಗೆ ಹೆರಿಗೆ ಸೌಲಭ್ಯ, ವಿವಾಹ ಹಾಗೂ ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ ವೈದ್ಯಕೀಯ ಸಹಾಯಧನ ಅಪಘಾತ ಪರಿಹಾರ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.ಬಿಎಆರ್‌ಡಿಎ ಸದಸ್ಯ ಡಾ.ಎಚ್.ಎಂ.ಸುಬ್ಬರಾಜ್ ಮಾತನಾಡಿ, ಕೇಂದ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ರಾಜ್ಯದಲ್ಲಿ ಬಿ.ಎನ್.ಬಚ್ಚೇಗೌಡರು ಕಾರ್ಮಿಕ ಸಚಿವರಾಗಿದ್ದ ವೇಳೆ ಕಾರ್ಮಿಕ ಇಲಾಖೆಗೆ ಹೊಸ ಕಾಯಕಲ್ಪ ಕೊಟ್ಟರು. ಸಣ್ಣ ಸಣ್ಣ ಕೈಗಾರಿಕಾ ವಲಯದ ಕಾರ್ಮಿಕರ ಅಭ್ಯುದಯಕ್ಕೆ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.ತಾಲೂಕು ಕಾರ್ಮಿಕ ಕಲ್ಯಾಣ ಅಧಿಕಾರಿ ಯತೀಶ್ ಮಾತನಾಡಿ, ತಾಲೂಕಿನಲ್ಲಿ 17 ಸಾವಿರ ಅಸಂಘಟಿತ ಕಾರ್ಮಿಕರು ನೋಂದಣೆ ಮಾಡಿಕೊಂಡಿದ್ದು, ಕಟ್ಟಡ ಕಾರ್ಮಿಕರಿಗೆ120 ಮೆಸಿನ್ ಕಿಟ್, 20 ಎಲೆಕ್ಟ್ರೀಷಿಯನ್ ಕಿಟ್, ರಸ್ತೆ ಕಾಮಗಾರಿ ಕಾರ್ಮಿಕರಿಗೆ 20 ಕಿಟ್, ಕಾರ್ಮಿಕರ ಆರೋಗ್ಯ ಸುಧಾರಣೆಗೆ ಪೌಷ್ಟಿಕಾಂಶಯುಕ್ತ ನ್ಯೂಟ್ರಿಷನ್ ಕಿಟ್ ವಿತರಿಸಲಾಗುತ್ತಿದೆ ಎಂದರು.ವಿತರಕರು, ಪತ್ರಕರ್ತರಿಗೆ ಸೌಲಭ್ಯ: ತಾಲೂಕು ಕಾರ್ಮಿಕ ಕಲ್ಯಾಣ ಅಧಿಕಾರಿ ಯತೀಶ್ ಮಾತನಾಡಿ, ಅಸಂಘಟಿತ ಕಾರ್ಮಿಕ ವಲಯಕ್ಕೆ ಪತ್ರಿಕಾ ವಿತರಕರು, ಪತ್ರಕರ್ತರು, ಡೆಲಿವರಿ ಬಾಯ್‌ಗಳನ್ನು ಸೇರಿಸಲಾಗಿದ್ದು ತಮ್ಮ ಗುರುತಿನ ಚೀಟಿ ನೀಡುವುದರ ಮೂಲಕ ಅಂಘಟಿತ ಕಾರ್ಮಿಕರಾಗಿ ನೋಂದಣೆ ಮಾಡಿಕೊಂಡು ಕಾರ್ಮಿಕ ಇಲಾಖೆಯ ಸೌಲಭ್ಯ ಪಡೆಯಬಹುದಾಗಿದೆ ಎಂದು ತಿಳಿಸಿದರು.

ತಹಸೀಲ್ದಾರ್ ಸೋಮಶೇಖರ್, ತಾಪಂ ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಬಿಎಂಆರ್‌ಡಿಎ ಮಾಜಿ ಅದ್ಯಕ್ಷ ವಿಜಯ್ ಕುಮಾರ್, ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದ ಅಧ್ಯಕ್ಷ ಕೃಷ್ಣಪ್ಪ, ವಕ್ತ್ ಬೋರ್ಡ್ ಮಾಜಿ ಅದ್ಯಕ್ಷ ನಿಸಾರ್ ಅಹಮದ್, ಜೈ ಮಾರುತಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗೊಟ್ಟಿಪುರ ಚಂದ್ರು, ಮುಖಂಡರಾದ ಬಚ್ಚಣ್ಣ, ನವಾಜ್, ಆರ್‌ಟಿಸಿ ಗೋವಿಂದರಾಜ್, ಹಲಸಹಳ್ಳಿ ರವಿರಾಜ್ ಹಾಜರಿದ್ದರು.

PREV

Recommended Stories

ಸೆಂಚುರಿ ಕ್ಲಬ್‌ ಸೇರಿಯೇ ಬಿಟ್ಟಿತು ಸು ಫ್ರಂ ಸೋ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ