ನ್ಯಾಯ ಒದಗಿಸುವಲ್ಲಿ ವಕೀಲರ ಕಾರ್ಯ ಮಹತ್ವದ್ದು

KannadaprabhaNewsNetwork |  
Published : Nov 01, 2025, 02:30 AM IST
31ಕೆಪಿಎಲ್22 ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿರುವ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ಸಾರ್ವಜನಿಕ ಆಡಳಿತ ಮತ್ತು ಲೋಕಾಯುಕ್ತ ಕಾಯ್ದೆ-1988 ರಡಿಯಲ್ಲಿ ವಕೀಲರ ಪಾತ್ರದ ಕುರಿತು ಉಪನ್ಯಾಸ” ಕಾರ್ಯಕ್ರಮ | Kannada Prabha

ಸಾರಾಂಶ

ನ್ಯಾಯಾಲಯದಲ್ಲಿ ಯಾವುದೇ ಧರ್ಮ, ಜಾತಿ ಬೇಧವಿಲ್ಲ. ಇದು ನ್ಯಾಯ ಮಂದಿರವಾಗಿದ್ದು

ಕೊಪ್ಪಳ: ಸಾಮಾಜಿಕ ಜೀವನದಲ್ಲಿ ತೊಂದರೆಗೊಳಗಾದ ಸಾರ್ವಜನಿಕರಿಗೆ ನ್ಯಾಯ ಒದಗಿಸುವಲ್ಲಿ ವಕೀಲರ ಕಾರ್ಯ ಮಹತ್ವದ್ದಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು.

ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿರುವ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಕೊಪ್ಪಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಆಡಳಿತ ಮತ್ತು ಲೋಕಾಯುಕ್ತ ಕಾಯ್ದೆ-1988 ರಡಿಯಲ್ಲಿ ವಕೀಲರ ಪಾತ್ರದ ಕುರಿತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನ್ಯಾಯಾಲಯದಲ್ಲಿ ಯಾವುದೇ ಧರ್ಮ, ಜಾತಿ ಬೇಧವಿಲ್ಲ. ಇದು ನ್ಯಾಯ ಮಂದಿರವಾಗಿದ್ದು, ಇಡೀ ಪ್ರಪಂಚದಲ್ಲಿ ಪವಿತ್ರವಾದ ಮಂದಿರ ನ್ಯಾಯ ಮಂದಿರವಾಗಿದೆ. ನ್ಯಾಯ ಎಂದರೇ ಎಲ್ಲರೂ ತಲೆ ಬಾಗಿಸಲೇಬೇಕು. ಈ ದಿಶೇಯಲ್ಲಿ ಜನರು ತಮಗೆ ನ್ಯಾಯ ಸಿಗುತ್ತದೆ ಎಂಬ ಆಶಯವನ್ನಿಟ್ಟುಕೊಂಡು ನ್ಯಾಯಾಲಯಕ್ಕೆ ಬರುತ್ತಾರೆ. ನ್ಯಾಯಾಧೀಶರು, ನ್ಯಾಯವಾದಿಗಳು, ಸಿಬ್ಬಂದಿಗಳು ಮತ್ತು ನ್ಯಾಯಾಲಯದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರ ಸಂಕಲ್ಪ ನ್ಯಾಯ ಒದಗಿಸುವುದಾಗಿದೆ. ಇದರಲ್ಲಿ ವಕೀಲರ ಪಾತ್ರವೂ ಅಮೋಘವಾಗಿದೆ. ನ್ಯಾಯಾಲಯದಲ್ಲಿ ಯಾವುದೇ ಒಂದು ಪ್ರಕರಣ ಇತ್ಯರ್ಥಪಡಿಸಬೇಕಾದರೆ ವಕೀಲರ ಪಾತ್ರ ಅಷ್ಟೇ ಅಲ್ಲದೇ ನ್ಯಾಯಾಧೀಶರ ಮತ್ತು ನ್ಯಾಯಾಂಗ ಇಲಾಖೆಯ ಎಲ್ಲ ಅಧಿಕಾರಿ ಸಿಬ್ಬಂದಿಗಳ ಪಾತ್ರವು ಬಹು ಮುಖ್ಯವಾಗಿದೆ. ಎಲ್ಲರೂ ಕಾಯ, ವಾಚ ಮತ್ತು ಮನಸ್ಸಿನಿಂದ ಕೆಲಸ ಮಾಡಿದರೆ ಎಲ್ಲ ಪ್ರಕರಣಗಳನ್ನು ಬೇಗ, ಬೇಗ ಇತ್ಯರ್ಥಪಡಿಸಲು ಅವಕಾಶವಾಗುತ್ತದೆ ಎಂದರು.

ನಿಮ್ಮ ಸಮವಸ್ತ್ರವೇ ನಿಮ್ಮ ಹೋರಾಟದ ಅಸ್ತ್ರವಾಗಿದೆ. ಹಾಸ್ಟೆಲ್, ಎಪಿಎಂಸಿ ಹಾಗೂ ಕಾರಾಗೃಹಗಳಿಗೆ ಆಗಾಗ ಭೇಟಿ ನೀಡಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದರೆ ಮತ್ತು ಕೆರೆ ಒತ್ತವರಿಯಂತಹ ಇತರೆ ಯಾವುದೇ ಸಾರ್ವಜನಿಕ ಪ್ರಕರಣಗಳ ಬಗ್ಗೆ ವಕೀಲರು ಧ್ವನಿ ಎತ್ತಬೇಕು ಮತ್ತು ಸ್ವಯಂ ದೂರು ದಾಖಲಿಸಬೇಕು. ಫಾಲ್ಸ್ ಕೇಸ್‌ಗಳಿಗೆ ಯಾವುದೇ ರೀತಿಯ ಅವಕಾಶ ಕೊಡಬಾರದು. ಸಾರ್ವಜನಿಕ ಆಡಳಿತ ಮತ್ತು ಲೋಕಾಯುಕ್ತ ಕಾಯ್ದೆ-1988 ರಡಿಯಲ್ಲಿ ವಕೀಲರ ಪಾತ್ರದ ಕುರಿತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತಸ ತಂದಿದೆ. ಈ ವಿಷಯವಾಗಿ ಮಾತನಾಡಲು ಒಂದು ದಿನ ಪೂರ್ತಿಯಾಗಿದ್ದರು ಸಾಲದು ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಚಂದ್ರಶೇಖರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ ಕಣವಿ, ಕರ್ನಾಟಕ ಲೋಕಾಯುಕ್ತದ ವಿಚಾರಣೆ ಅಪರ ನಿಬಂಧಕ ಡಾ. ಕಸನಪ್ಪ ನಾಯ್ಕ, ರಮಾಕಾಂತ್ ಚವ್ಹಾಣ ಹಾಗೂ ಅರವಿಂದ ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್. ದರಗದ, ರಾಯಚೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸತೀಶ್ ಎಸ್. ಚಿಟಾಗುಬ್ಬಿ, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಬಿ.ವಿ. ಸಜ್ಜನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ನ್ಯಾಯಾಧೀಶರುಗಳಾದ ಸರಸ್ವತಿ, ಕುಮಾರ್ ಡಿ.ಕೆ. ಹಾಗೂ ಮಲಕರಿ ರಾಮಮಪ್ಪ ಒಡಿಯರ್, ಹಿರಿಯ ವಕೀಲ ಆಸೀಫ್ ಅಲಿ, ವಿ.ಎಂ ಬೋಸನೂರಮಠ ಸೇರಿದಂತೆ ಮತ್ತಿತರೆ ವಕೀಲರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ
ಹಸೆಮಣೆ ಏರಬೇಕಿದ್ದ ಬಾಲ್ಯದ ಗೆಳತಿಯರು ಬೆಂಕಿಯಲ್ಲಿ ಭಸ್ಮ!