ಕೊಡಗು ವಿವಿ ಸಭಾಂಗಣದಲ್ಲಿ ಮಾಧ್ಯಮ ದಿನಾಚರಣೆಕನ್ನಡಪ್ರಭ ವಾರ್ತೆ ಕುಶಾಲನಗರ
ಮಾಧ್ಯಮ ನಮ್ಮ ಜೀವನದಲ್ಲಿ ಒಂದು ಭಾಗವಾಗಿ ಹೋಗಿದೆ. ಮಾಧ್ಯಮಗಳಲ್ಲಿ ಯಾವುದೇ ವಿಚಾರ ಬಂದರೆ ಮಾತ್ರ ನಾವು ನಂಬುತ್ತೇವೆ. ಆದ್ದರಿಂದ ಸುದ್ದಿ ಕೊಡುವ ಭರದಲ್ಲಿ ಅಪೂರ್ಣ ಹಾಗೂ ಅಸತ್ಯವಾದ ಮಾಹಿತಿ ಜನತೆಗೆ ತಲುಪಬಾರದು. ಅದರಿಂದ ಜನರ ಮೇಲಷ್ಟೇ ಅಲ್ಲದೇ ಸಮಾಜದ ಮೇಲೆಯೂ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಸುದ್ದಿಯ ಸತ್ಯಾಸತ್ಯತೆ ಅರಿತು ಪ್ರಕಟಿಸಿದಾಗ ಮಾತ್ರ ಸಮಾಜಕ್ಕೂ ಹಾಗೂ ಮಾಧ್ಯಮಗಳ ವಿಶ್ವಾಸರ್ಹತೆಗೂ ಅನುಕೂಲವಾಗಲಿದೆ ಎಂದರು.
ಸುದ್ದಿಮಾಧ್ಯಮಗಳಲ್ಲಿ ಬರುವ ಯಾವುದೇ ಸುದ್ದಿಗಳನ್ನು ನಾವು ನಕಾರಾತ್ಮಕವಾಗಿ ನೋಡದೆ ಧನಾತ್ಮಕವಾಗಿ ಅವುಗಳನ್ನು ಸ್ವೀಕಾರ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಸುದ್ದಿ ಪೈಪೋಟಿ ನಡುವೆ ಪತ್ರಿಕೆ ಓದುವವರ ಸಂಖ್ಯೆ ಕೂಡ ಕ್ಷೀಣಿಸುತ್ತಿದೆ. ಸಾಮಾಜಿಕ ಜಾಲತಾಣ, ಡಿಜಿಟಲ್ ಮಾಧ್ಯಮ ಭರಾಟೆ ಜೋರಾಗಿ ನಡೆಯುತ್ತಿದೆ. ಇವುಗಳನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕು ಎಂದು ಸಲಹೆ ನೀಡಿದರು.ಕೊಡಗು ವಿವಿ ಉಳಿಸುವ ಕಾರ್ಯವಾಗಲಿ:
ಶಕ್ತಿ ಪತ್ರಿಕೆ ಸಂಪಾದಕ ಜಿ. ಚಿದ್ವಿಲಾಸ್ ಮಾತನಾಡಿ, ಕೊಡಗು ವಿಶ್ವ ವಿದ್ಯಾನಿಲಯ ಕುರಿತು ಸರ್ಕಾರದಿಂದ ಅಧಿಕೃತ ಘೋಷಣೆ ಬಂದಿಲ್ಲ. ಇದರಿಂದ ಅಭಿವೃದ್ಧಿಗೆ ಅಗತ್ಯ ಅನುದಾನ ಪಡೆಯಲು ಸಾಧ್ಯವಾಗಿಲ್ಲ. ಈ ಬಗ್ಗೆ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಕೊಡಗು ವಿವಿ ಉಳಿಸಲು ಕ್ರಮ ವಹಿಸಬೇಕು ಎಂದರು.ವಿಶ್ವಾಸಾರ್ಹತೆಯೇ ಪ್ರಶಸ್ತಿ:
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಶಾಸಕಾಂಗ, ನ್ಯಾಯಾಂಗ ಕಾರ್ಯಾಂಗ, ಪತ್ರಿಕಾರಂಗ ಪರಿಣಾಮಕಾರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಿದಲ್ಲಿ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಆಗುತ್ತದೆ. ಮಾಧ್ಯಮಗಳು ವ್ಯವಸ್ಥೆ ಪ್ರತಿಬಿಂಬವಾಗಲಿಲ್ಲ ಅಂದ್ರೆ ವ್ಯವಸ್ಥೆ ಕುಸಿದು ಹೋಗುತ್ತದೆ. ಪತ್ರಿಕಾರಂಗವನ್ನು ಆಶಾಕಿರಣ ಎಂದು ನಂಬಿದ್ದೇವೆ. ಇದು ಸರಿಯಾಗಿ ಕಾರ್ಯನಿರ್ವಹಸಿದರೆ ಸಮಾಜದ ಅಭಿವೃದ್ಧಿ ಸಾಧ್ಯ. ಪತ್ರಿಕೆ ಹಾಗೂ ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು. ಇದೇ ಅವರಿಗೆ ದೊಡ್ಡ ಪ್ರಶಸ್ತಿ ಎಂದರು.ಕೊಡಗು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಮಾತನಾಡಿ, ಪತ್ರಿಕೆಗಳು ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ಅಂಶಗಳನ್ನು ಒದಗಿಸುವ ಮಾಹಿತಿ ಕಣಜಗಳಾಗಿವೆ. ಬೇರೆ ಬೇರೆ ಭಾಷಾ ವಿಷಯಗಳ ಜ್ಞಾನದೊಂದಿಗೆ ಪತ್ರಕರ್ತರು ಮಾನಸಿಕವಾಗಿ ಬಲಿಷ್ಠರಿದ್ದಾಗ ಮಾತ್ರ ಸಮಾಜ ಕಟ್ಟವ ಕೆಲಸದಲ್ಲಿ ಸಂತೃಪ್ತಿ ಕಾಣಬಹುದು ಎಂದು ಹೇಳಿದರು.
ಸಮಾಜದ ಸ್ವಾಸ್ಥ್ಯ ಎತ್ತಿಹಿಡಿಯುವ ಕಾರ್ಯವಾಗಲಿ:ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಧ್ಯಕ್ಷತೆ ವಹಿಸಿ, ಪತ್ರಿಕಾರಂಗವು ವೈಜ್ಞಾನಿಕ ಹಾಗೂ ವೈಚಾರಿಕವಾಗಿ ವರದಿಗಳನ್ನು ಪ್ರಕಟಿಸುವ ಮೂಲಕ ಸಮಾಜದ ಸ್ವಾಸ್ಥ್ಯ ವನ್ನು ಎತ್ತಿ ಹಿಡಿಯಬೇಕು. ಯಾವುದೇ ವ್ಯಕ್ತಿಯನ್ನು ಟೀಕೆ ಟಿಪ್ಪಣಿ ಮಾಡುವಾಗ ಸತ್ಯಕ್ಕೆ ಹತ್ತಿರವಾದ ಮಾಹಿತಿಯನ್ನು ಹೊಂದಿರಬೇಕು. ಸತ್ಯದ ಆಧಾರ ಮೇಲೆ ವರದಿ ಮಾಡಬೇಕು. ರಚನಾತ್ಮಕವಾದ ಟೀಕೆಗಳನ್ನು ಕೊಡಬೇಕು ಎಂದರು.
ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಕೊಡಗು ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಎಸ್.ವಿ. ಮುರಳಿಧರ್, ಕೊಡಗು ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ.ಎಂ.ಸುರೇಶ್, ಕೊಡಗು ವಿಶ್ವ ವಿದ್ಯಾನಿಲಯದ ಹಿತರಕ್ಷಣಾ ಬಳಗದ ಅಧ್ಯಕ್ಷ ಎಸ್. ಕೃಷ್ಣಗೌಡ ಪಾಲ್ಗೊಂಡಿದ್ದರು.ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಮೋಹನ್ ಸ್ವಾಗತಿಸಿದರು. ಉಪನ್ಯಾಸಕ ಜಮೀರ್ ಅಹಮ್ಮದ್ ನಿರೂಪಿಸಿದರು. ಪತ್ರಕರ್ತ ಕೆ.ಎಸ್. ಮೂರ್ತಿ ವಂದಿಸಿದರು.ಇದೇ ಸಂದರ್ಭ ಪತ್ರಕರ್ತರು ಹಾಗೂ ಅತಿಥಿಗಳನ್ನು ಸನ್ಮಾನಿಸಲಾಯಿತು.