ಅಂತರ್ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಗಳ ದಿನಾಚರಣೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಕನ್ನಡಪ್ರಭ ವಾರ್ತೆ ಹಾವೇರಿ
ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಪೆವಾರ್ಡ ಕರ್ನಾಟಕ ಹಾಗೂ ಹಾವೇರಿ ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ವತಿಯಿಂದ ಏರ್ಪಡಿಸಿದ್ದ ಅಂತರ್ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಯೋಜನೆಗಳನ್ನು ತಳಮಟ್ಟದ ಸಮುದಾಯಕ್ಕೆ, ಜನರಿಗೆ ತಲುಪಿಸುವಲ್ಲಿ ಸಂಸ್ಥೆಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿವೆ. ಸ್ವಯಂ ಸೇವಾ ಸಂಸ್ಥೆಗಳ ಕಾರ್ಯದಿಂದ ದೇಶದ ಪ್ರಗತಿ ಕಾಣಬಹುದು. ಸರ್ಕಾರದ ಜತೆಗೆ ನುರಿತ ಸ್ವಯಂ ಸೇವಾ ಸಂಸ್ಥೆಗಳು ಕೈ ಜೋಡಿಸಿದಾಗ ಅಭಿವೃದ್ದಿ ಕಾರ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಅರ್ಹ ಸಂಸ್ಥೆಗಳನ್ನು ವಿವಿಧ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಶ್ರೀ ಕರೆಗೌಡ್ರ (ಆರೋಗ್ಯ ಕ್ಷೇತ್ರ), ಚನ್ನಬಸಪ್ಪ ಕೊಂಬಳಿ (ಕೃಷಿ ಕ್ಷೇತ್ರ), ಹಸಿನಾ ಹೆಡಿಯಾಳ, ಕರಿಬಸಪ್ಪ ಕಾಗಿನೆಲಿ (ಪರಿಸರ ಮತ್ತು ಅರಣ್ಯ ಸಂರಕ್ಷಣೆ), ಗುತ್ತೆಮ್ಮ (ಮಹಿಳಾ ಸಬಲೀಕರಣ) ಅವರನ್ನು ಸನ್ಮಾನಿಸಲಾಯಿತು.
ರೆಡ್‌ಕ್ರಾಸ್ ಸಂಸ್ಥೆಯ ಗೌರವಾಧ್ಯಕ್ಷ ಸಂಜೀವ ನೀರಲಗಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸುರೇಶ ಹುಗ್ಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಕಲ್ಯಾಣಾಧಿಕಾರಿ ವಿಜಯಲಕ್ಷ್ಮೀ ಪಾಟೀಲ, ಪವಿತ್ರಾ ಹರಿಜನ, ಜನವಿಕಾಸ ಫೌಂಡೇಶನ್‌ನ ಗೀತಾ ಪಾಟೀಲ, ಮುತ್ತುರಾಜ ಮಾದರ, ಎಂ.ಎನ್. ಹೊನಕೇರಿ ಹಾಗೂ ಜಿಲ್ಲೆಯ ವಿವಿಧ ಸಂಘ- ಸಂಸ್ಥೆಗಳ ಸುಮಾರು 180 ಜನ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.