ಸಚ್ಚಿದಾನಂದಪುರ ಶ್ರೀ ಜಯಭಾರತೀ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ
ಶಿಕ್ಷಣ, ಸಂಸ್ಕೃತಿ ಇಲ್ಲದ ಮನುಷ್ಯನಿಗೆ ಸಮಾಜದಲ್ಲಿ ಬೆಲೆಯಿಲ್ಲ. ಆದ್ದರಿಂದ ಇಂದು ಪ್ರತಿಯೊಬ್ಬರಿಗೂ ಶಿಕ್ಷಣ ಅನಿವಾರ್ಯ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರು, ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಶ್ರೀ ಶಾರದಾ ಪೀಠದ ಜಗದ್ಗುರುಗಳ ಆಪ್ತ ಸಹಾಯಕ ಶಂ.ನ.ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ಸಚ್ಚಿದಾನಂದಪುರ ಶ್ರೀ ಜಯಭಾರತೀ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ಮುಂದುವರೆದ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಶಿಕ್ಷಣ ಅನಿವಾರ್ಯವಾಗಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿಯೂ ಶಿಕ್ಷಣ ಪಡೆದವರಿಗೆ ಮಾತ್ರ ಆದ್ಯತೆಯಿದೆ. ವಿದ್ಯಾರ್ಥಿಗಳು ಕಲಿಕೆಯ ದಿನಗಳಲ್ಲಿ ಹೆಚ್ಚಿನ ಸಮಯವನ್ನು ಅಧ್ಯಯನಕ್ಕೆ ಉಪಯೋಗಿಸಿಕೊಳ್ಳಬೇಕು ಎಂದರು.ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರೀಮಠದಿಂದ ಆರ್ಥಿಕ ಸಹಕಾರ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಶೈಕ್ಷಣಿಕ ಸಾಧನೆಗಾಗಿ ಬಳಸಿಕೊಂಡು ಸಾಧನೆ ಮಾಡಬೇಕು. ಇಂದು ಶಿಕ್ಷಣಕ್ಕಾಗಿ ಅಧಿಕ ವೆಚ್ಚ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿಯೊಬ್ಬ ಪೋಷಕರಿಗೂ ತಮ್ಮ ಮಕ್ಕಳು ಶೈಕ್ಷಣಿಕವಾಗಿ ಉನ್ನತ ಸಾಧನೆ ಮಾಡಬೇಕು ಎನ್ನು ಆಸೆ ಆಕಾಂಕ್ಷೆಗಳಿರುತ್ತದೆ. ಆದ್ದರಿಂದ ಈ ಹಿನ್ನೆಲೆಯಲ್ಲಿ ಆರ್ಥಿಕ ಸಹಕಾರ ನೀಡುತ್ತಿದೆ ಎಂದರು.
6 ಶ್ರೀ ಚಿತ್ರ 1-