ಮಕ್ಕಳ ಬೆಳವಣಿಗೆಯಲ್ಲಿ ತಂದೆ-ತಾಯಿ ಪಾತ್ರ ಮಹತ್ವದ್ದು: ಡಾ. ಚೇತನ ಕಲ್ಕೂರ

KannadaprabhaNewsNetwork |  
Published : Feb 02, 2026, 02:30 AM IST
ಭಟ್ಕಳದ ಮುಠ್ಠಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ತಜ್ಞ ಡಾ. ಚೇತನ್ ಕಲ್ಕೂರ ಉಪನ್ಯಾಸ ನೀಡಿದರು. | Kannada Prabha

ಸಾರಾಂಶ

ಇಲ್ಲಿಯ ಮುಠ್ಠಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಖ್ಯಾತ ಮಕ್ಕಳ ತಜ್ಞ ಡಾ. ಚೇತನ್ ಕಲ್ಕೂರ ಉದ್ಘಾಟಿಸಿದರು.

ಮುಠ್ಠಳ್ಳಿ ಶಾಲೆಯಲ್ಲಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಭಟ್ಕಳ

ಇಲ್ಲಿಯ ಮುಠ್ಠಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಖ್ಯಾತ ಮಕ್ಕಳ ತಜ್ಞ ಡಾ. ಚೇತನ್ ಕಲ್ಕೂರ ಉದ್ಘಾಟಿಸಿದರು.

ಆನಂತರ ಮಾತನಾಡಿದ ಅವರು, ಮಗುವಿನ ಸಮಗ್ರ ಬೆಳವಣಿಗೆಯಲ್ಲಿ ತಂದೆ–ತಾಯಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ತಾಯಿಯಷ್ಟೇ ಜವಾಬ್ದಾರಿ ತಂದೆಗೂ ಇದ್ದು, ಮಗುವಿನ ಲಾಲನೆ–ಪಾಲನೆ ಹಾಗೂ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ತಂದೆಯೂ ಸಕ್ರಿಯವಾಗಿ ಭಾಗವಹಿಸಬೇಕು. ಮಕ್ಕಳು ತಮ್ಮ ಹೆತ್ತವರನ್ನು ಅನುಕರಿಸಿ ಜೀವನ ರೂಪಿಸಿಕೊಳ್ಳುವುದರಿಂದ ಮನೆಯ ವಾತಾವರಣವೇ ಮಕ್ಕಳ ವ್ಯಕ್ತಿತ್ವ ನಿರ್ಮಾಣಕ್ಕೆ ಪ್ರಮುಖವಾಗಿದೆ. ಹೆತ್ತವರ ಭಾಷೆ, ನಡೆನುಡಿ, ಜೀವನಶೈಲಿ ಹಾಗೂ ಮೌಲ್ಯಗಳು ಮಕ್ಕಳ ಮೇಲೆ ಆಳವಾದ ಪ್ರಭಾವ ಬೀರುತ್ತವೆ. ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಪ್ರದಾಯ ಮತ್ತು ಮೌಲ್ಯಗಳ ಜತೆಗೆ ಆರೋಗ್ಯಕರ ಆಹಾರ ಪದ್ಧತಿ ಅಗತ್ಯವಿದೆ. ಜಂಕ್ ಫುಡ್‌ಗಳಿಂದ ದೂರವಿದ್ದು, ಮನೆಮದ್ದೆ ತಯಾರಿಸಿದ ಪೌಷ್ಟಿಕ ಆಹಾರಕ್ಕೆ ಆದ್ಯತೆ ನೀಡಬೇಕು. ಜತೆಗೆ ಮೊಬೈಲ್ ಬಳಕೆಯನ್ನು ನಿಯಂತ್ರಿಸಿ, ಆಟಗಳು ಹಾಗೂ ಪದಬಂಧಗಳಂತಹ ಚಟುವಟಿಕೆಯಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು.

ಬಳಿಕ ಶಾಲಾ ಮಕ್ಕಳಿಗೆ ಸ್ವಚ್ಛತೆ, ಪರಿಸರ ಕಾಳಜಿ, ಜಂಕ್ ಫುಡ್‌ ಹಾಗೂ ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಶಾಲೆಯ ಎಸ್‌ಡಿಎಂಸಿ ವತಿಯಿಂದ ವೈದ್ಯರನ್ನು ಗೌರವಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಅನಂತ ನಾಯ್ಕ, ಉಪಾಧ್ಯಕ್ಷೆ ಶೈಲಾ ನಾಯ್ಕ, ಗ್ರಾಪಂ ಅಧ್ಯಕ್ಷೆ ರಜನಿ ನಾಯ್ಕ, ಸದಸ್ಯ ಶೇಷಗಿರಿ ನಾಯ್ಕ, ಡಯಟ್ ಕುಮಟಾದ ಉಪನ್ಯಾಸಕ ಎಸ್.ಪಿ. ಭಟ್, ಸವಿತಾ ನಾಯ್ಕ, ವೀಣಾ ಭಟ್, ಮುಖ್ಯ ಶಿಕ್ಷಕಿ ಗಂಗಾ ಮೊಗೇರ, ಶಿಕ್ಷಕರಾದ ಜಯಶ್ರೀ ಆಚಾರಿ, ವಿಜಯಕುಮಾರ ನಾರ್ವೇಕರ್, ಲತಾ ಕೆ.ಎಂ., ದೀಪಾ ದೇವಾಡಿಗ, ನೂತನ ನಾಯ್ಕ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ
ರಾಜಕ್ಕೆ ಕೇಂದ್ರ ಬಜೆಟ್ಟಲ್ಲಿ ಚೊಂಬು : ಸಿಎಂ ಸಿಡಿಮಿಡಿ