ಕನ್ನಡಪ್ರಭ ವಾರ್ತೆ ಮಸ್ಕಿ
ಒಕ್ಕೂಟದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಸ್ಕಿ ನಾಗರಾಜ ವಕೀಲ ಮಾತನಾಡಿ, ಜಿಲ್ಲೆಯಲ್ಲಿ ಎರಡುನೂರಕ್ಕೂ ಹೆಚ್ಚು ಆಡಳಿತ ಮಂಡಳಿಗಳು ಸಂಘಟನೆಯಲ್ಲಿ ಇವೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಷ್ಟು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡುತ್ತಿದ್ದಾರೋ ಅಷ್ಟೇ ಸಂಖ್ಯೆಯ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದಾರೆ ಎಂದರಲ್ಲದೆ, ಪಟ್ಟಣ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳ ತೆರಿಗೆ ವಿನಾಯಿತಿ ನೀಡಬೇಕು ಒತ್ತಾಯಿಸಿದರು. ಒಕ್ಕೂಟದ ಗೌರವಾಧ್ಯಕ್ಷ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳು ನೂರಾರು, ಗ್ರಾಮೀಣ ಭಾಗದ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸಲಿ ಎಂದರು.
ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ: ಜಿಲ್ಲೆಯ ವಿವಿಧ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 200 ಶಿಕ್ಷಕರಿಗೆ ಜಿಲ್ಲಾ ಒಕ್ಕೂಟದಿಂದ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಎಸ್. ಎಲ್., ಕೇಶವರಡ್ಡಿ, ಆರ್.ಸಿ.ಪಾಟೀಲ, ಶಾಂತನಗೌಡ, ಪ್ರಕಾಶ ಮಾಲಿ ಪಾಟೀಲ, ಬಿ.ಬಸವರಾಜ, ಶಾಬುದ್ದೀನ ಪೋತ್ನಾಳ, ತಮಾಸ್ ಬೆಂಜಮಿನ್, ತರೂರ್ ಬಸವರಾಜ ಪಾಟೀಲ, ನರೇಂದ್ರ ನಾಥ, ವೈ.ಟಿ.ಬಸವರಾಜ, ಮಂಜುನಾಥ ಸ್ವಾಮಿ, ಶಂಕರಲಿಂಗಯ್ಯ ದೇವದುರ್ಗ, ರವಿ ಕುಮಾರ ಸೇರಿದಂತೆ ಜಿಲ್ಲೆಯ ವಿವಿಧ ಖಾಸಗಿ ಶಾಲಾ ಶಿಕ್ಷಕರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಇದ್ದರು.
ಮಸ್ಕಿ ತಾಲೂಕು ಘಟಕದ ಅಧ್ಯಕ್ಷ ಶಿವುಕುಮಾರ್ ಎನ್. ಸ್ವಾಗತ ಕೋರಿದರು. ಕಾರ್ಯಕ್ರಮದಲ್ಲಿ ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.