ಕನ್ನಡಪ್ರಭ ವಾರ್ತೆ ಗದಗ
ಗದಗ ನಗರದಲ್ಲಿ ಸ್ವಾಭಿಮಾನ ಕರ್ನಾಟಕ ರಕ್ಷಣಾ ವೇದಿಕೆಯ ದಶಮಾನೋತ್ಸವ ಹಾಗೂ 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಗಣ್ಯರ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಗದಗ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮವನ್ನು ಸ್ವಾಭಿಮಾನ ಕರವೇ ರಾಜ್ಯಾಧ್ಯಕ್ಷ ರಾಜೇಶ ರೆಡ್ಡಿ ಉದ್ಘಾಟಿಸಿದರು. ವೇದಿಕೆಯ ಉತ್ತರ ಕರ್ನಾಟಕ ಹಾಗೂ ಗದಗ ಜಿಲ್ಲಾಧ್ಯಕ್ಷ ಎಂ.ಎ. ಕುರ್ತಕೋಟಿ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಮಾಜಿ ಸದಸ್ಯ ಎಂ.ಎಂ. ಮಾಳೆಕೊಪ್ಪ, ನ್ಯಾಷನಲ್ ರಾಜೀವ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಎಂ. ನದ್ದಿಮುಲ್ಲಾ, ಕಾಂಗ್ರೆಸ್ ಮುಖಂಡ ಸೈಯದ್ ಖಾಲಿದ್ ಕೊಪ್ಪಳ, ಚಲನಚಿತ್ರ ನಾಯಕ ನಟ ಹರೀಶ್ ಜಿ. ದೊಡ್ಡಮನಿ, ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಎಸ್.ಎಚ್., ಇಮಾಮ್ ಸಾಬ್ ನಮಾಜಿ, ಫೋರ್ ವೀಲರ್ ಮೆಕ್ಯಾನಿಕ್ ಸಂಘದ ಅಧ್ಯಕ್ಷ ಉಸ್ಮಾನ್ ಮಾಳೆಕೊಪ್ಪ ಹಾಗೂ ಸ್ವಾಭಿಮಾನ ಕರವೇ ಉಪಾಧ್ಯಕ್ಷ ಹನಮಂತ ನಾಗರಳ್ಳಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.