ಬಲಿಷ್ಟ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಅನ್ನಪೂರ್ಣ ತುಕಾರಾಂ

KannadaprabhaNewsNetwork |  
Published : Sep 19, 2025, 01:00 AM IST
ಚಿತ್ರ: ೧೮ಎಸ್.ಎನ್.ಡಿ.೦೧-ಸಂಡೂರಿನ ಆದರ್ಶ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಗಣ್ಯರು ಸನ್ಮಾನಿಸಿದ ಕ್ಷಣ. | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ಜ್ಞಾನದ ದೀಪ ಬೆಳಗಿಸುವವರು ಶಿಕ್ಷಕರು. ಸದೃಢ ಸಮಾಜ ಹಾಗೂ ಬಲಿಷ್ಟ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ.

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕಿಕನ್ನಡಪ್ರಭ ವಾರ್ತೆ ಸಂಡೂರುವಿದ್ಯಾರ್ಥಿಗಳಲ್ಲಿ ಜ್ಞಾನದ ದೀಪ ಬೆಳಗಿಸುವವರು ಶಿಕ್ಷಕರು. ಸದೃಢ ಸಮಾಜ ಹಾಗೂ ಬಲಿಷ್ಟ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕಿ ಅನ್ನಪೂರ್ಣ ಈ. ತುಕಾರಾಂ ತಿಳಿಸಿದರು.ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆಯನ್ನು ತರುವವರು ಶಿಕ್ಷಕರು. ಮಕ್ಕಳಲ್ಲಿ ತಾರತಮ್ಯ ಮಾಡದೆ, ಎಲ್ಲಾ ಮಕ್ಕಳನ್ನೂ ಸಮಾನವಾಗಿ ಕಾಣಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಬದಲಾಯಿಸಿ, ಉತ್ತಮ ಜ್ಞಾನವಂತರಾಗಲು ಶಿಕ್ಷಕರು ಪ್ರೇರೇಪಿಸಬೇಕಿದೆ. ನಂಜುಂಡಪ್ಪ ವರದಿಯ ಪ್ರಕಾರ ಅತಿ ಹಿಂದುಳಿದ ತಾಲೂಕೆಂಬ ಹಣೆಪಟ್ಟಿಯನ್ನು ಕಿತ್ತೊಗೆಯಲು ಸಂಸದ ಈ. ತುಕಾರಾಂ ಅವರು ೧೫ ವರ್ಷಗಳಿಂದ ಶ್ರಮಿಸುತ್ತಿದ್ದಾರೆ. ನಾನೂ ಕೂಡಾ ಅದೇ ಪ್ರಯತ್ನದಲ್ಲಿದ್ದೇನೆ. ಈ ಕಾರ್ಯದಲ್ಲಿ ಶಿಕ್ಷಕರ ಪಾತ್ರವೂ ಮಹತ್ವದ್ದಾಗಿದೆ ಎಂದರಲ್ಲದೆ, ತಾಲೂಕಿನಲ್ಲಿ ಬಾಲ್ಯ ವಿವಾಹಗಳು ಹೆಚ್ಚುತ್ತಿದ್ದು, ಈ ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.ಉಪನ್ಯಾಸ ನೀಡಿದ ಗದಗದ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಐ.ಬಿ. ಬೆನಕೊಪ್ಪ, ಶಿಕ್ಷಣ ಇಲಾಖೆಯ ಶಕ್ತಿ ಎಂದರೆ ಶಿಕ್ಷಕರೆ. ಮಕ್ಕಳ ಭವಿಷ್ಯ ರೂಪಿಸುವವರು ಶಿಕ್ಷಕರು. ಹೃದಯದ ಅಜ್ಞಾನದ ಕತ್ತಲೆಯನ್ನು ಕಳೆಯುವವರು ಶಿಕ್ಷಕರು. ಶಿಕ್ಷಕರಾದ ನಾವು ಓದಬೇಕು, ಓದಿಸಬೇಕು, ಬರೆಯಬೇಕು, ಬರೆಯುವಂತೆ ಮಾಡಬೇಕು ಮತ್ತು ಮಾತನಾಡಬೇಕು ಹಾಗೂ ಮಾತನಾಡಿಸಬೇಕು. ಗುಣಾತ್ಮಕ ಶಿಕ್ಷಣ ಇಂದಿನ ಅಗತ್ಯವಾಗಿದೆ. ಮಕ್ಕಳು ಕಲಿಕೆಯಲ್ಲಿ ಪ್ರಗತಿಯನ್ನು ಹೊಂದುವಂತೆ ಮಾಡುವುದೇ ಗುಣಾತ್ಮಕ ಶಿಕ್ಷಣವಾಗಿದೆ. ಮಕ್ಕಳಲ್ಲಿ ನೈತಿಕತೆ ಬೆಳೆಸಬೇಕು. ಅವರನ್ನು ಸಮಾಜದ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವುದು ಅಗತ್ಯವಿದೆ ಎಂದರು.ಸಾನ್ನಿಧ್ಯ ವಹಿಸಿದ್ದ ಸಂಡೂರಿನ ಶ್ರೀಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿ ಆಶೀರ್ವಚನ ನೀಡಿ, ಶಿಕ್ಷಕರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮೊಬೈಲ್‌ಗಳಿಗೆ ದಾಸರಾಗುತ್ತಿರುವ ಮಕ್ಕಳಲ್ಲಿ ಹೆಚ್ಚಾಗಿ ದೃಷ್ಟಿದೋಷ ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರ ತರಬೇಕಿದೆ. ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು, ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಆರಂಭದಲ್ಲಿ ಕ್ಷೇತ್ರದಲ್ಲಿನ ಶಿಕ್ಷಣ ಕ್ಷೇತ್ರದಲ್ಲಿನ ಪ್ರಗತಿ ಕುರಿತು ಸಾಕ್ಷಚಿತ್ರ ಪ್ರದರ್ಶಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಶರಣಬಸಪ್ಪ ಕರಿಶೆಟ್ಟಿ ಸ್ವಾಗತಿಸಿದರು. ಬಿಆರ್‌ಪಿ ಮಂಜುನಾಥ ಹಾದಿಮನಿ ಕಾರ್ಯಕ್ರಮ ನಿರೂಪಿಸಿದರು. ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಪಿ. ಶ್ರೀಧರ ಮೂರ್ತಿ ವಂದಿಸಿದರು.ಬಿಕೆಜಿ ಕಂಪನಿಯವರು ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜಿ. ಅನಿಲ್‌ಕುಮಾರ್, ತಾಪಂ ಇಒ ಮಡಗಿನ ಬಸಪ್ಪ, ಬಿಕೆಜಿ ಕಂಪನಿಯ ಜನರಲ್ ಮ್ಯಾನೇಜರ್ ರಾಜಶೇಖರ್ ಬೆಲ್ಲದ್, ಪುರಸಭೆಯ ಮುಖ್ಯಾಧಿಕಾರಿ ಬಿ. ವಿನಯ್‌ಕುಮಾರಗೌಡ, ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿದ್ದಣ್ಣ ಯಳವಾರ್, ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಲ್.ಎಚ್. ತಮ್ಮಪ್ಪ, ಎಚ್. ಕೊಟ್ರೇಶಿ, ಬಿ. ನಾಗರಾಜ, ಬಿ.ಎಂ. ನಾಗರಾಜ, ಬಿ.ಎಂ. ಶಶಿಧರ್, ಕೆ.ಟಿ. ಗುರುಪ್ರಸಾದ್, ಕೆ. ಪ್ರೇಮಾ, ಜಿ.ಸಿ. ಶಿವಕುಮಾರ್, ಕೆ. ಕುಮಾರಸ್ವಾಮಿ, ಬಿ. ದಕ್ಷಿಣಮೂರ್ತಿ, ಟಿ.ಎಂ. ಪುರುಷೋತ್ತಮ, ಎಚ್. ರಮೇಶ್, ಚೌಕಳಿ ಪರಶುರಾಮಪ್ಪ, ರುದ್ರಯ್ಯಸ್ವಾಮಿ, ಕಾಶಿನಾಥಶಾಸ್ತ್ರಿ, ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರಿದ್ದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ