ನರಗುಂದ: ಶಿಕ್ಷಣದ ಉದ್ದೇಶ ಒಳ್ಳೆಯ ಸಂಸ್ಕಾರಯುತ ವ್ಯಕ್ತಿತ್ವ ರೂಪಿಸುವುದು. ತರಗತಿ ಪಠ್ಯಕ್ರಮವನ್ನು ಅಭ್ಯಸಿಸುವುದರ ಜೊತೆಗೆ ಸಾಮಾಜಿಕ ಕಳಕಳಿಯ ಪಠ್ಯೇತರ ಚಟುವಟಿಕೆಗಳು ವಿದ್ಯಾಥಿಗಳನ್ನು ಅನುಭವಶಾಲಿಗರನ್ನಾಗಿ ಸಂಸ್ಕಾರಯುತ ನಾಗರಿಕರನ್ನಾಗಿ ಪರಿವರ್ತಿಸುತ್ತದೆ ಎಂದು ಚನ್ನಮ್ಮನ ಕಿತ್ತೂರಿನ ಎಸ್.ಬಿ.ಎಂ. ಬಾಲಕಿಯರ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಮಹೇಶ.ಎನ್. ಚನ್ನಂಗಿ ಹೇಳಿದರು. ಅವರು ಪಟ್ಟಣದ ಯಡಿಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ವರ್ಷದ ಬಿ.ಇಡಿ.ಪ್ರಶಿಕ್ಷಣಾರ್ಥಿಗಳ ಸ್ವಾಗತ ಹಾಗೂ ವಿದ್ಯಾರ್ಥಿಗಳ ಒಕ್ಕೂಟ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರಜ್ಞೆಯ ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ವಿದ್ಯಾರ್ಥಿಗಳಿಗೆ ಭಾರತ ದೇಶದ ಸಂಸ್ಕೃತಿ, ಇತಿಹಾಸದ ಮತ್ತು ಸ್ವಾತಂತ್ರ್ಯಕ್ಕಾಗಿ ಜೀವವನ್ನೇ ತ್ಯಾಗ ಮಾಡಿದ ವೀರ ವ್ಯಕ್ತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕು. ಅವರಲ್ಲಿಯೂ ರಾಷ್ಟ್ರದ ರಕ್ಷಣೆ ನನ್ನ ಕರ್ತವ್ಯ ಎಂಬ ನಿಜವಾದ ರಾಷ್ಟ್ರಪ್ರೇಮ ಮೂಡಬೇಕು ಎಂದರು.
ಶಿಸ್ತು ಮತ್ತು ಸಮಯದ ಸದುಪಯೋಗ ಪಡಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವದರ ಮೂಲಕ ಜೀವನದಲ್ಲಿ ಯಶಸ್ಸು ಕಾಣಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಂಸ್ಥೆಯ ಅಧ್ಯಕ್ಷ ವೀರನಗೌಡ ಪಾಟೀಲ, ಉಪನ್ಯಾಸಕ ಎಸ್.ಎ.ಬಾರಕೇರ, ಎಂ ಪಿ ಕ್ಯಾತನಗೌಡ್ರ, ಪ್ರಾಚಾರ್ಯರಾದ ಆರ್.ಬಿ.ಪಾಟೀಲ, ನಿರ್ದೇಶಕರಾದ ಈರನಗೌಡ ಪಾಟೀಲ, ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.