ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದು: ನ್ಯಾಯಾಧೀಶ ಗಂಗಾಧರ ಸಿ.ಎಂ.

KannadaprabhaNewsNetwork |  
Published : Oct 22, 2025, 01:03 AM IST

ಸಾರಾಂಶ

ಪೊಲೀಸ್ ಇಲಾಖೆಯ ಪ್ರತಿ ಹಂತದ ಅಧಿಕಾರಿ ಹಾಗೂ ಸಿಬ್ಬಂದಿ ಹಗಲಿರುಳೆನ್ನದೇ ನಿರಂತರ ಕರ್ತವ್ಯ ನಿರ್ವಹಿಸುವ ಮೂಲಕ ಬಲಿಷ್ಠ ಹಾಗೂ ಶಾಂತಿಯುತ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಗದಗ: ಸಮಾಜದ ಶಾಂತಿ ಮತ್ತು ಭದ್ರತೆ ಪಾಲನೆಯಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ವದ್ದಾಗಿದೆ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಂಗಾಧರ ಸಿ.ಎಂ. ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ತವ್ಯ ಪಾಲನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸ್ ನೆನಪಿಗಾಗಿ ಏರ್ಪಡಿಸಿದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬ ಪೊಲೀಸರಿಗೂ ಇಂದು ವಿಶೇಷ ದಿನವಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ನಾಗರಿಕರ ರಕ್ಷಣೆಗೆ ತಮ್ಮ ಪ್ರಾಣವನ್ನೇ ಲೆಕ್ಕಿಸದೇ ಕರ್ತವ್ಯ ನಿರ್ವಹಿಸಿದ ಪೊಲೀಸರ ಬಲಿದಾನ ಹಾಗೂ ಶೌರ‍್ಯವನ್ನು ಸ್ಮರಿಸುವ ದಿನವಾಗಿದೆ.

ಪೊಲೀಸರ ಧೈರ್ಯ ಹಾಗೂ ಸಾಹಸಗಳು ಮುಂದಿನ ತಲೆಮಾರಿಗೆ ಸ್ಫೂರ್ತಿಯಾಗಲಿ. ಕರ್ತವ್ಯ ನಿರ್ವಹಣೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸರ ಸ್ಮರಣೆ ಮಾಡಲು ಪೊಲೀಸ್ ಹುತಾತ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಪೊಲೀಸ್ ಇಲಾಖೆಯ ಪ್ರತಿ ಹಂತದ ಅಧಿಕಾರಿ ಹಾಗೂ ಸಿಬ್ಬಂದಿ ಹಗಲಿರುಳೆನ್ನದೇ ನಿರಂತರ ಕರ್ತವ್ಯ ನಿರ್ವಹಿಸುವ ಮೂಲಕ ಬಲಿಷ್ಠ ಹಾಗೂ ಶಾಂತಿಯುತ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇದರಿಂದ ಜನರು ನೆಮ್ಮದಿ ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಪ್ರಾಣಾರ್ಪಣೆಗೈದ ಪೊಲೀಸರ ತ್ಯಾಗ, ಸಾಹಸ ಸ್ಮರಣೀಯವಾದದ್ದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಭಾರತ- ಚೀನಾ ಗಡಿಯಲ್ಲಿ 1959ರಂದು ನಡೆದ ದಾಳಿಯಲ್ಲಿ ದೇಶದ ಪೊಲೀಸರು ಹುತಾತ್ಮರಾದ ಸ್ಮರಣಾರ್ಥವಾಗಿ ಪೊಲೀಸ್ ಹುತಾತ್ಮ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ಹುತಾತ್ಮ ಪೊಲೀಸರಿಗೆ ಪುಷ್ಪಗುಚ್ಛ ಅರ್ಪಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ ಸಜ್ಜನರ, ಡಿವೈಎಸ್‌ಪಿಗಳು, ಸಿಪಿಐ, ವಿವಿಧ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌
ನಟ ಯಶ್‌ಗೆ ಜಾರಿಯಾಗಿದ್ದ ಆದಾಯ ತೆರಿಗೆ ನೋಟಿಸ್‌ ರದ್ದು