ವಿಜಯಪುರ: ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ, ಗ್ರಾಮ ಪಂಚಾಯಿತಿಗಳ ಪಾತ್ರ ಮಹತ್ತರವಾದದು. ಈ ನಿಟ್ಟಿನಲ್ಲಿ ಗ್ರಾಪಂ ಆಡಳಿತಗಾರರು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ೬೦ ಲಕ್ಷ ರುಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಸುಮಾರು ೨೫೦೦ ನಿವೇಶನಗಳು ಹಂಚಿಕೆ ಮಾಡಲು ಯೋಜನೆ ರೂಪಿಸಿದ್ದೇವೆ. ಈ ನಿಟ್ಟಿನಲ್ಲಿ ತಾಪಂ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಪಂಚಾಯಿತಿಗಳ ಪಿಡಿಒಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಭೂಮಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿ, ತಾಪಂ ಸಲ್ಲಿಸಿ, ಈಗಾಗಲೇ ತಾಲೂಕಿನಲ್ಲಿ ನಿವೇಶನಗಳ ಹಂಚಿಕೆ ಮುಕ್ತಾಯವಾಗಬೇಕಾಗಿತ್ತು. ತ್ವರಿತವಾಗಿ ನಿವೇಶನಗಳ ಹಂಚಿಕೆಗೆ ವ್ಯವಸ್ಥೆ ಮಾಡುವಂತೆ ತಾಪಂ ಇಒ ಶ್ರೀನಾಥ್‌ಗೌಡ ಅವರಿಗೆ ಸೂಚನೆ ನೀಡಿದರು.ಹಾರೋಹಳ್ಳಿ ಗ್ರಾಮದ ಮುಖಂಡ ರಘು ಅಭಿನಂದನೆ ಸ್ವೀಕರಿಸಿ ಮಾತನಾಡಿ, ಹಾರೋಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣ ನಿರ್ಮಾಣ ಮಾಡಲಾಗಿದೆ. ಶಾಸಕರ ಅನುದಾನ, ವಿಧಾನ ಪರಿಷತ್ ಸದಸ್ಯರಿಂದ ೫ ಲಕ್ಷ, ಎಂ.ಆರ್.ಸೀತಾರಾಮಯ್ಯ ಅವರಿಂದ ೫ ಲಕ್ಷ, ಗ್ರಾಪಂ ನರೇಗಾ ಯೋಜನೆಯಡಿ ೭ ಲಕ್ಷ ಸೇರಿದಂತೆ ಹಲವಾರು ದಾನಿಗಳ ಸಹಕಾರದಿಂದ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದರ ಜೊತೆಗೆ ಗ್ರಾಮದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಲಾಗಿದೆ. ಸಿ.ಸಿ.ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಒಳಚರಂಡಿಗಳನ್ನು ನಿರ್ಮಾಣ ಮಾಡಿದ್ದೇವೆ. ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿಯೊಂದು ಮನೆಗೂ ವೈಯಕ್ತಿಕ ಕೊಳಾಯಿಗಳನ್ನು ಅಳವಡಿಸಲಾಗಿದೆ. ಹಾರೋಹಳ್ಳಿ ಗ್ರಾಮದಲ್ಲಿ ೧೯೨ ಮಂದಿ ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನಗಳ ಹಂಚಿಕೆಗಾಗಿ ಸುಮಾರು ೭ ಎಕರೆ ಭೂಮಿ ಮಂಜೂರು ಮಾಡಿಸಲಾಗಿದೆ ಎಂದು ವಿವರಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾದೇವಿ ಮಂಜುನಾಥ್ ಮಾತನಾಡಿ, ಆದಾಯದ ಮೂಲಗಳಿಲ್ಲದಿದ್ದರೂ, ಗ್ರಾಮ ಪಂಚಾಯಿತಿ ಸದಸ್ಯರ ಸಂಪೂರ್ಣ ಸಹಕಾರದಿಂದ ಹೊರಗಿನಿಂದ ದೇಣಿಗೆ ತಂದು, ನಮಗೆ ಲಭ್ಯವಿರುವ ಸಂಪನ್ಮೂಲಗಳನ್ನು ಕ್ರೋಢೀಕರಣ ಮಾಡಿಕೊಂಡು ನೂತನ ಕಟ್ಟಡ ನಿರ್ಮಾಣ ಮಾಡಿದ್ದೇವೆ. ನೂತನ ಕಟ್ಟಡ ಅಭಿವೃದ್ಧಿಯ ಮುನ್ಸೂಚನೆಯಾಗಿದೆ. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನರಸಮ್ಮಪೂಜಪ್ಪ, ತಾಪಂ ಇಒ ಶ್ರೀನಾಥ್ ಗೌಡ, ಪಿಡಿಒ ಇಸಾಕ್, ಬಯಾಪ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಬಮೂಲ್ ನಿರ್ದೇಶಕ ಎಸ್.ಪಿ.ಮುನಿರಾಜುಗೌಡ, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ಜಯರಾಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಸಿ.ಮಂಜುನಾಥ್, ದಿನ್ನೂರು ವೆಂಕಟೇಶ್, ಬಿಜ್ಜವಾರ ಗ್ರಾಪಂ ಅಧ್ಯಕ್ಷ ಮುನೇಗೌಡ, ಕೋರಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಮಾಜಿ ತಾಪಂ ಸದಸ್ಯೆ ಅನ್ನಪೂರ್ಣಮ್ಮ, ಚಂದ್ರಪ್ಪ, ಬಯಪಾ ನಿರ್ದೇಶಕ ವಿ.ರಾಮಚಂದ್ರಪ್ಪ, ಗ್ಯಾಸ್ ಶ್ರೀನಿವಾಸ್, ಮಂಡಿಬೆಲೆ ದೇವರಾಜಪ್ಪ, ಚಿಕ್ಕನಹಳ್ಳಿ ವೆಂಕಟೇಶ್, ಪಾಪರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.
ಕೋಟ್...........ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರಿ ಅನುದಾನಗಳನ್ನು ಪಂಚಾಯತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಹಾಗೆಯೇ ಅವರೊಂದಿಗೆ ಗ್ರಾಮಸ್ಥರು ಕೈಜೋಡಿಸಬೇಕು. ನಮ್ಮ ಗ್ರಾಮ ನಮ್ಮ ಹೆಮ್ಮೆ ಎಂಬ ಭಾವನೆ ಗ್ರಾಮೀಣರಲ್ಲಿ ಉಂಟಾದಾಗ ಅಭಿವೃದ್ಧಿ ಸಾಧ್ಯ.
-ಕೆ.ಎಚ್.ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ(ಫೋಟೊ ಕ್ಯಾಫ್ಷನ್)
ವಿಜಯಪುರ ಹೋಬಳಿ ಹಾರೋಹಳ್ಳಿಯಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ, ಹಾರೋಹಳ್ಳಿ ಗ್ರಾಮ ಮುಖಂಡ ರಘು ಹಾಗೂ ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ ಅವರನ್ನು ಅಭಿನಂದಿಸಿದರು.