ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಚಿತ್ರದುರ್ಗ ಸೈನ್ಸ್ ಫೌಂಡೇಷನ್ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆಯು ದೇಶದ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಹೊಸ ವೇಗ ನೀಡುತ್ತಿದೆ. ವಿಕಸಿತ ಭಾರತ ಎಂದರೆ ಆರ್ಥಿಕವಾಗಿ, ತಾಂತ್ರಿಕವಾಗಿ ಮತ್ತು ವೈಜ್ಞಾನಿಕವಾಗಿ ಶಕ್ತಿಶಾಲಿ ರಾಷ್ಟ್ರ ಎಂದರ್ಥ. ದೇಶ ಅಭಿವೃದ್ಧಿಯ ಗುರಿ ಸಾಧಿಸಲು ವಿಜ್ಞಾನದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಅಗತ್ಯ. ಮಹಿಳೆಯರು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಂಶೋಧನೆಗೆ ಹೆಚ್ಚು ಆಸಕ್ತಿ ತೋರಬೇಕು. ವಿಜ್ಞಾನದಿಂದ ಶಕ್ತಿ, ವಿಜ್ಞಾನದಿಂದ ಪ್ರಗತಿ ಸಾಧ್ಯ ಎoದರು.
ಚಳ್ಳಕೆರೆ ಯರ್ರಿಸ್ವಾಮಿ ಉಪನ್ಯಾಸ ನೀಡಿ, ಈ ದಿನ ಭಾರತೀಯ ವಿಜ್ಞಾನ ಕ್ಷೇತ್ರದ ಮಹತ್ವವನ್ನು ಸ್ಮರಿಸುವುದು ಅಷ್ಟೇ ಅಲ್ಲದೇ ಯುವಪೀಳಿಗೆಗೆ ಸಂಶೋಧನಾ ಮನೋಭಾವವನ್ನು ಬೆಳೆಸುವ ಉದ್ದೇಶವೂ ಆಗಿದೆ. ರಾಮನ್ ರ ಆವಿಷ್ಕಾರದಿಂದ ವಿಜ್ಞಾನ ಸಂಶೋಧನೆಗೆ ಹೊಸ ದಿಕ್ಕು ದೊರಕಿತು. ಯುವಕರಲ್ಲಿ ಕುತೂಹಲ, ಸಂಶೋಧನಾ ಮನೋವೃತ್ತಿ ಮತ್ತು ಪ್ರಯೋಗಶೀಲತೆಯನ್ನು ಬೆಳೆಸುವಲ್ಲಿ ವಿಜ್ಞಾನ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಅಭಿವೃದ್ಧಿಗೆ ಇದನ್ನು ನೆನಪಿಸುವ ದಿನವೇ ರಾಷ್ಟ್ರೀಯ ವಿಜ್ಞಾನ ದಿನವಾಗಿದೆ ಎಂದರು.ಪ್ರಾಂಶುಪಾಲ ಪ್ರೊ.ರವಿಕಾಂತ ಮಾತನಾಡಿ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಮೂಲಕ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.