ಕನ್ನಡಪ್ರಭ ವಾರ್ತೆ ಹೊಸದುರ್ಗ
ಪಟ್ಟಣದಲ್ಲಿ ನಡೆದ ಬಿಜೆಪಿ ಪಕ್ಷದ ನೂತನ ಕಚೇರಿಯ ಉದ್ಘಾಟನೆ ಹಾಗೂ ಮಂಡಲದ ನೂತನ ಅಧ್ಯಕ್ಷ ಅಣ್ಣಪ್ಪ ಸ್ವಾಮಿಯ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನರೇಂದ್ರ ಮೋದಿಯವರು ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆ ಮಾಡಿದ ಪರಿಣಾಮವಾಗಿ ಅಟಲ್ ಬಿಹಾರಿ ವಾಜಪೇಯಿ ಅವರು ಒಮ್ಮೆ ಶಾಸಕರಾದ ಅವರನ್ನು ಪ್ರಪ್ರಥಮ ಬಾರಿಗೆ ಗುಜರಾತ್ ರಾಜ್ಯದ ಮುಖ್ಯಮಂತ್ರಿ ಜವಾಬ್ದಾರಿ ನೀಡಿ ಗೌರವಿಸಿದ ಪರಿಣಾಮವಾಗಿ ಭಾರತ ಇಂದು ಜಗತ್ತಿನ ಅತ್ಯಂತ ಪ್ರಭಾವಶಾಲಿ ರಾಷ್ಟ್ರವಾಗಿ ಬೆಳೆಯಲು ಕಾರಣವಾಗಿದೆ ಎಂದು ತಿಳಿಸಿದರು.ತಾಲೂಕಿನಲ್ಲಿರುವ ಪಕ್ಷದ ಎಲ್ಲಾ ಕಾರ್ಯಕರ್ತರನ್ನು ಮತ್ತು ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿ ಪಕ್ಷವನ್ನ ಮುನ್ನಡೆಸುವ ಜವಾಬ್ದಾರಿಯನ್ನು ಮಂಡಲ ಅಧ್ಯಕ್ಷ ಅಣ್ಣಪ್ಪ ತೆಗೆದುಕೊಳ್ಳಬೇಕು ಎಂದರು.
ಮಂಡಲ ನೂತನ ಅಧ್ಯಕ್ಷ ಅಣ್ಣಪ್ಪಸ್ವಾಮಿ ಮಾತನಾಡಿ, ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಲಾಗುವುದು. ಪ್ರತಿನಿತ್ಯ ಬಿಜೆಪಿ ನೂತನ ಕಚೇರಿ ತನ್ನ ಕಾರ್ಯ ನಿರ್ವಹಿಸಲಿದ್ದು ಪಕ್ಷದ ಕಾರ್ಯಕರ್ತರು ತಮ್ಮ ಯಾವುದೇ ಸಮಸ್ಯೆ ಇದ್ದರೂ ಕಚೇರಿಗೆ ಬಂದು ತಿಳಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಪಕ್ಷ ಸದಾ ಸಿದ್ಧವಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್, ಮಂಡಲ ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್, ಯುವ ಉದ್ಯಮಿ ಡಿ.ಎಸ್.ಪ್ರದೀಪ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್.ಬಿ.ರವಿಕುಮಾರ್, ಕೊಂಡಾಪುರ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಎನ್.ಆರ್.ಜಗದೀಶ್ ರಾಮಯ್ಯ, ಬಿಜೆಪಿ ಮುಖಂಡರಾದ ಹೋಬ ಚಿದಾನಂದಪ್ಪ ಹೆಬ್ಬಳ್ಳಿ ಮಲ್ಲಿಕಾರ್ಜುನ್ ಕೋಡಿಹಳ್ಳಿ ತಮ್ಮಣ್ಣ ಬಿ.ಎಸ್.ದ್ಯಾಮಪ್ಪ, ಗುರುಸ್ವಾಮಿ, ಗೂಳಿಹಟ್ಟಿ ಕೃಷ್ಣಮೂರ್ತಿ ,ಶೆಟ್ಟಿಹಳ್ಳಿ ನಾಗಭೂಷಣ್, ರಮೇಶ್ ರಂಗೇಶ್, ಹೆಗ್ಗೆರೆ ಶಂಕ್ರಪ್ಪ, ದೇವಿಗೆರೆ ಮಲ್ಲಿಕಾರ್ಜುನ್, ಪುರಸಭಾ ಮಾಜಿ ಸದಸ್ಯರಾದ ದಾಳಿಂಬೆ ಗಿರೀಶ್ ದೊಡ್ಡಯ್ಯ, ಡಾಕ್ಟರ್ ಸ್ವಾತಿ ಪ್ರದೀಪ್, ಸರೋಜಮ್ಮ, ರಾಜೇಶ್ವರಿ ಆನಂದ್, ಮಹಿಳಾ ಮೋರ್ಚಾ ಅಧ್ಯಕ್ಷೆ ಅನುಸೂಯಮ್ಮ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ್ ಸಿದ್ದಪ್ಪ ಪನ್ನಗ ರಾಯ್ಕರ್, ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.