ಕನ್ನಡಪ್ರಭ ವಾರ್ತೆ ಮಂಡ್ಯ
ನಗರಸಭೆ ಆವರಣದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಯಂಗ್ ಗಣೇಶ’ ವಿನೂತನ ಪರಿಕಲ್ಪನೆಯಡಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಸಾಂಕೇತಿಕವಾಗಿ ಚುನಾವಣಾ ಗುರುತಿನ ಚೀಟಿ ವಿತರಿಸಿ ಮಾತನಾಡಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಸುಮಾರು ೧.೬೦ ಲಕ್ಷ ಮೃತಪಟ್ಟವರು ಹಾಗೂ ನಕಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದೀಗ ಹೊಸ ಮತದಾರರ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿವೆ. ಅರ್ಹರಾದ ಯಾವುದೇ ಯುವ ಮತದಾರರು ನೋಂದಣಿಯಿಂದ ಹೊರಗುಳಿಯದಂತೆ ಕ್ರಮ ವಹಿಸುವುದು. ಆರೋಗ್ಯಕರ ಮತ್ತು ಶುದ್ಧ ಮತದಾರರ ಪಟ್ಟಿಯನ್ನು ರೂಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸುವುದು ಪ್ರತಿಯೊಬ್ಬರ ಕರ್ತವ್ಯ. ಮಣ್ಣಿನ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪತಿ ಮೂರ್ತಿಗಳ ಬಳಕೆಯನ್ನು ತ್ಯಜಿಸಬೇಕು ಎಂದು ಮನವಿ ಮಾಡಿದರು.
ಇತ್ತೀಚೆಗೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ೧೮ ವರ್ಷ ಮೇಲ್ಪಟ್ಟ ಅರ್ಹ ಯುವ ಮತದಾರರನ್ನು ಒಳಗೊಂಡು ಹಾಡುಗಾರಿಕೆ ಸ್ಪರ್ಧೆ ಆಯೋಜಿಸಲಾಗಿತ್ತು. ಇದರಲ್ಲಿ ವಿಶೇಷಚೇತನ ವಿದ್ಯಾರ್ಥಿಯೊಬ್ಬರು ಎಸ್‌ಐಆರ್ ಪ್ರಕ್ರಿಯೆ ಕುರಿತು ಸ್ವತಃ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿ, ಗೆಳೆಯರೊಂದಿಗೆ ಹಾಡು ಪ್ರಸ್ತುತಪಡಿಸಿದ್ದರು. ಆ ಹಾಡನ್ನು ಜಿಲ್ಲಾ ಸ್ವೀಪ್ ಜಾಗೃತಿ ಗೀತೆಯಾಗಿ ಅಳವಡಿಸಿಕೊಳ್ಳಲಾಗಿದೆ ಎಂದರು.
ಇದೇ ವೇಳೆ ಎಸ್‌ಐಆರ್-೨೦೨೬ ಕುರಿತು ಜಾಗೃತಿ ಮೂಡಿಸುವ ರಂಗೋಲಿ ಹಾಗೂ ವಿವಿಧ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಯು.ಪಿ.ಪಂಪಾಶ್ರೀ, ಪರಿಸರ ಅಭಿಯಂತರ ರುದ್ರೇಗೌಡ, ನಗರಸಭೆ ಅಧಿಕಾರಿಗಳು, ವಿದ್ಯಾರ್ಥಿಗಳು, ಯುವ ಮತದಾರರು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.