ದೇಶದ ಅಭಿವೃದ್ಧಿಯಲ್ಲಿ ಯುವ ಸಮೂಹದ ಪಾತ್ರ ದೊಡ್ಡದು-ಮುತಾಲಿಕದೇಸಾಯಿ

KannadaprabhaNewsNetwork |  
Published : Jan 15, 2025, 12:47 AM IST
13ಎಚ್‌ವಿಆರ್5- | Kannada Prabha

ಸಾರಾಂಶ

ನಮ್ಮ ದೇಶ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಮುಂದುವರೆಯಲು ಯುವ ಸಮೂಹದ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್. ಮುತಾಲಿಕದೇಸಾಯಿ ಹೇಳಿದರು.

ಹಾವೇರಿ:ನಮ್ಮ ದೇಶ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಮುಂದುವರೆಯಲು ಯುವ ಸಮೂಹದ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್. ಮುತಾಲಿಕದೇಸಾಯಿ ಹೇಳಿದರು.ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಯುವ ಸಮೂಹ ರಾಷ್ಟ್ರೀಯ ಯುವ ದಿನಾಚರಣೆ ಕೇಂದ್ರಬಿಂದುವಾಗಿದ್ದು, ಇಂದಿನ ಯುವ ಜನಾಂಗ ನಮ್ಮ ದೇಶದ ಮುಂದಿನ ಭವಿಷ್ಯವಾಗಿದ್ದಾರೆ. ಯುವ ಸಮೂಹ ಮುಂದಾಳತ್ವ ವಸಹಿಸಿಕೊಂಡಲ್ಲಿ ಮಾತ್ರ ಸಮಾಜ ಮತ್ತು ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.ಎಲ್‌ಎಡಿಎಸ್‌ನ ಉಪ ಕಾನೂನು ನೆರವು ಅಭಿರಕ್ಷಕ ಎಂ.ಸಿ. ಭರಮಣ್ಣನವರ ಅವರು ಮೂಲಭೂತ ಕರ್ತವ್ಯಗಳು ಹಾಗೂ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ನಾಗರಾಜ ಹಕ್ಕೇರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ, ಉಪನ್ಯಾಸಕರಾದ ಶೇಖರ ಭಜಂತ್ರಿ, ಎಸ್.ಸಿ.ಮರಡಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ಸಲ್ಲಿ ಯತೀಂದ್ರ ಕಿಚ್ಚು : '5 ವರ್ಷವೂ ನಮ್ಮ ತಂದೆ ಸಿಎಂ, ಇದು ಈಗ ಸೆಟಲ್ಡ್‌ ವಿಚಾರ'