ಜೆಡಿಎಸ್ ಸಂಘಟನೆಯಲ್ಲಿ ಯುವಕರ ಪಾತ್ರ ಮಹತ್ವದ್ದು: ಎಂ.ವೈ. ಮುಧೋಳ

KannadaprabhaNewsNetwork |  
Published : Apr 16, 2026, 02:30 AM IST
ಜೆಡಿಎಸ್ ಜಿಲ್ಲಾ ಅಧ್ಯಕ್ಷ ಎಂ.ವೈ. ಮುಧೋಳ ಅವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. | Kannada Prabha

ಸಾರಾಂಶ

ಗ್ರಾಮ ಮಟ್ಟದ ಸಭೆಗಳನ್ನು ನಡೆಸಲಾಗುತ್ತಿದೆ. ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಭೆಗಳನ್ನು ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ತಾಲೂಕಿನಲ್ಲಿ ಜೆಡಿಎಸ್ ಸಮಾವೇಶ ಹಮ್ಮಿಕೊಳ್ಳಲಾಗುವುದು.

ಶಿರಹಟ್ಟಿ: ಜೆಡಿಎಸ್ ಸಂಘಟನೆಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಮಾಡುವ ಉದ್ದೇಶದಿಂದ ಪ್ರತಿ ಬೂತ್‌ಗಳಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಎಂ.ವೈ. ಮುಧೋಳ ತಿಳಿಸಿದರು.ತಾಲೂಕು ಜೆಡಿಎಸ್ ವತಿಯಿಂದ ತಾಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ದಂಡಿ ದುರ್ಗಮ್ಮ ದೇವಿಗೆ ಪೂಜೆ ಸಲ್ಲಿಸಿ ನಂತರ ಡಾ. ಬಿ.ಆರ್. ಅಂಬೇಡ್ಕರ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗ್ರಾಮೀಣರ ಕಡೆಗೆ ಜೆಡಿಎಸ್ ಕಾರ್ಯಕರ್ತರ ನಡಿಗೆಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.

ಗ್ರಾಮ ಮಟ್ಟದ ಸಭೆಗಳನ್ನು ನಡೆಸಲಾಗುತ್ತಿದೆ. ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಭೆಗಳನ್ನು ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ತಾಲೂಕಿನಲ್ಲಿ ಜೆಡಿಎಸ್ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು.ರಾಜ್ಯದಲ್ಲಿ ಈ ಹಿಂದೆ ಜೆಡಿಎಸ್ ಅಧಿಕಾರದಲ್ಲಿದ್ದಾಗ ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೃಷಿ ಸಾಲ ಮನ್ನಾ ಘೋಷಣೆ ಮಾಡಿ ರೈತರ ಸಂಕಷ್ಟಕ್ಕೆ ನೆರವಾಗಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆ ನೀಡಿದ್ದರು. ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಸಹಾಯವಾಗುವ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದರು.ಕಾರ್ಯಕ್ರಮದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಶರಣಪ್ಪ ಹೂಗಾರ ಮಾತನಾಡಿ, ಮುಂಬರುವ ಸ್ಥಳೀಯ ಹಾಗೂ ಎಲ್ಲ ಚುನಾವಣೆಗಳಲ್ಲೂ ಜೆಡಿಎಸ್ ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ತಾಲೂಕಿನಲ್ಲಿ ಅಧಿಕಾರದ ಹೊಸ ಬದಲಾವಣೆ ತರುವ ನಿಟ್ಟಿನಲ್ಲಿ ಪಣ ತೊಟ್ಟು ಸ್ಥಳೀಯ ಮಟ್ಟದಲ್ಲಿ ಸಂಘಟನೆ ಬಲಪಡಿಸಬೇಕು. ಗ್ರಾಮ, ವಾರ್ಡ್ ಮತ್ತು ತಾಲೂಕು ಮಟ್ಟದಲ್ಲಿ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದರು.ಜನರ ಜತೆ ನೇರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳನ್ನು ತಿಳಿದು ಪರಿಹಾರಕ್ಕಾಗಿ ಪ್ರಯತ್ನಿಸಬೇಕು. ಪಕ್ಷದ ವಿಚಾರದಾರೆ ಮತ್ತು ಸಾಧನೆಗಳನ್ನು ಜನರಿಗೆ ತಲುಪಿಸಲು ಡಿಜಿಟಲ್ ಮಾಧ್ಯಮಗಳನ್ನು ಬಳಸಬೇಕು. ಭಿನ್ನಾಬಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡುವುದು ಮುಖ್ಯ. ಸಂಘಟಿತ ಕಾರ್ಯಕರ್ತರ ಬಳಗವೇ ಪಕ್ಷದ ಶಕ್ತಿ. ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಿದರೆ ಪಕ್ಷವು ಮತ್ತೆ ಜನರಲ್ಲಿ ಹೆಚ್ಚಿನ ವಿಶ್ವಾಸವನ್ನು ಗಳಿಸಬಹುದು ಎಂದರು. ಪಕ್ಷದ ಜಿಲ್ಲಾ ಉಪಾಧ್ಯಕ್ಷ ನಿಂಗಪ್ಪ ಪ್ಯಾಟಿ, ಪ್ರಧಾನ ಕಾರ್ಯದರ್ಶಿ ಅಜ್ಜಲಿ ಕೊಪ್ಪಳ, ಫಕ್ಕೀರಪ್ಪ ತುಳಿ, ಹನುಮಂತಪ್ಪ ಮರಿಗೌಡ್ರ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಕಲ್ಲಪ್ಪನವರ, ಜಯರಾಜ ವಾಲಿ, ಶ್ರೀಕಾಂತ ಕಟ್ಟಿಮನಿ, ಮಾಬೂಸಾಬ ಕನಕವಾಡ, ಮುನ್ನಾ ಢಾಲಾಯತ, ಶಿವು ಪಾಟೀಲ, ಮಾಂತೇಶ ಕಳಸಾಪುರ, ಬಸವರಾಜ ಕಲ್ಲಪ್ಪನವರ, ಈರಣ್ಣ ಕಬ್ಬಿಣದ, ಫಿರಸಾಬ ನದಾಫ, ನೀಲಪ್ಪ ಹುಬ್ಬಳ್ಳಿ, ಪುಟ್ಟಪ್ಪ ಗೊಲ್ಲರ, ಚಂದ್ರು ಕಡೆಮನಿ, ಸಂಗಪ್ಪ ಅರಗುಂಚಿ, ಮಾಬೂಸಾಬ ಬನ್ನಿಕೊಪ್ಪ, ತಿರಕಪ್ಪ ಹಾವನೂರ ಸೇರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲೆ, ಸಂಸ್ಕೃತಿ ಉಳಿಸುವ ಜವಾಬ್ದಾರಿ ನಮ್ಮದು: ಚಂದ್ರಶೇಖರ ನರಸಿಂಹ ಹೆಗಡೆ
ಕಾಟಾಚಾರಕ್ಕೆ ಮರುಪರಿಶೀಲನೆ ಪ್ರಕ್ರಿಯೆ: ಡಾ. ನಾಗೇಶ ನಾಯ್ಕ ಕಾಗಾಲ ಆರೋಪ