ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಅಪಾರ

KannadaprabhaNewsNetwork |  
Published : Oct 30, 2024, 12:49 AM ISTUpdated : Oct 30, 2024, 12:50 AM IST
ಪೋಟೋ: 29ಎಸ್‌ಎಂಜಿಕೆಪಿ01ಶಿವಮೊಗ್ಗದ ನೆಹರು ಯುವ ಕೇಂದ್ರದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಶ್ರಮದಾನ ಕಾರ್ಯಕ್ರಮಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಚಾಲನೆ ನೀಡಿದರು. | Kannada Prabha

ಸಾರಾಂಶ

ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಮಹತ್ವದ್ದು. ಆದ್ದರಿಂದ ದೇಶದ ಪ್ರಗತಿಗೆ ಯುವಜನತೆ ಕೈಜೋಡಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಮಹತ್ವದ್ದು. ಆದ್ದರಿಂದ ದೇಶದ ಪ್ರಗತಿಗೆ ಯುವಜನತೆ ಕೈಜೋಡಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ಅಭಿಪ್ರಾಯಪಟ್ಟರು.ನಗರದಲ್ಲಿ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ನಿರ್ದೇಶನದಂತೆ ನೆಹರು ಯುವ ಕೇಂದ್ರದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದದರು.

ಯುವಜನರು ಪರಿಸರ ಸಂರಕ್ಷಣೆ ಮಾಡುವ ವಿಶೇಷ ಸಂಕಲ್ಪ ಹೊಂದಬೇಕು. ಕಾಳಜಿ ವಹಿಸುವ ಮೂಲಕ ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕು. ಸ್ವಚ್ಛ ನಗರ ನಿರ್ಮಾಣ ಮಾಡಲು ಸಹಕಾರ ನೀಡಬೇಕು. ನಾವೆಲ್ಲರೂ ಸೇರಿ ಸ್ವಚ್ಛ ಹಾಗೂ ಸುಂದರ ನಗರ ನಿರ್ಮಿಸೋಣ ಎಂದು ತಿಳಿಸಿದರು.

ಸಮಾಜ ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಪ್ರತಿಯೊಬ್ಬರ ಪಾತ್ರವೂ ಮುಖ್ಯ ಆಗಿರುತ್ತದೆ. ಎಲ್ಲೆಂದರಲ್ಲಿ ಕಸ ಎಸೆಯದೆ ಸೂಕ್ತ ಸ್ಥಳಗಳಲ್ಲಿ ವಿಲೇವಾರಿ ಮಾಡಬೇಕು. ಶ್ರಮದಾನ ಮಾಡುವ ಮೂಲಕ ಸಾರ್ವಜನಿಕ ಸ್ಥಳಗಳನ್ನೂ ಸ್ವಚ್ಛವಾಗಿಟ್ಟುಕೊಳ್ಳಲು ನಾವೆಲ್ಲರೂ ಮುಂದಾಗಬೇಕು. ಆರೋಗ್ಯಯುತ ವಾತಾವರಣ ನಿರ್ಮಾಣ ನಮ್ಮ ಗುರಿಯಾಗಬೇಕು. ಹಸಿರು ಪಟಾಕಿಗಳನ್ನು ಬಳಸುವುದರ ಮೂಲಕ ಮಾಲಿನ್ಯ ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.

ಕುವೆಂಪು ವಿಶ್ವವಿದ್ಯಾಲಯ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಶುಭಾ ಮರವಂತೆ ಮಾತನಾಡಿ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷ ಅಭಿಯಾನ ನಡೆಸುತ್ತಿದ್ದು, ಎಲ್ಲರೂ ಶ್ರಮದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಶ್ರಮದಾನ ಕಾರ್ಯಕ್ರಮದಲ್ಲಿ 230ಕ್ಕೂ ಹೆಚ್ಚು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪಾಲ್ಗೊಂಡು ಬಿ.ಹೆಚ್. ರಸ್ತೆ, ಗಾಂಧಿ ಬಜಾರ್ ಹಾಗೂ ವೀರಶೈವ ಕಲ್ಯಾಣ ಮಂದಿರ ರಸ್ತೆ ಸ್ವಚ್ಛ ಮಾಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ. ವಿಜಯಕುಮಾರ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ಎಟಿಎನ್‌ಸಿಸಿ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ. ನಾಗರಾಜ್, ಸಹಪ್ರಾಧ್ಯಾಪಕ ನವೀನ್, ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಎಟಿಎನ್‌ಸಿಸಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ