ಖರ್ಗೆ ಭಾಷಣ ಮಾಡಿದ ಜಾಗ ಶುದ್ಧೀಕರಣ ಕ್ರಮ ಖಂಡನೀಯ

KannadaprabhaNewsNetwork |  
Published : Sep 18, 2026, 01:30 AM IST
16ಎಚ್.ಎಲ್.ಐ1  ರಾಷ್ಟ್ರೀಯ ನಾಯಕಮಲ್ಲಿಕಾರ್ಜುನ್ ಖರ್ಗೆ ಭಾಷಣ ಮಾಡಿದ ಜಾಗ ಶುದ್ಧೀಕರಣ, ಹಾಗೂ ಸಚಿವ ಸತೀಸ್ ಜಾರಕಿಹೊಳಿ ಸೇರಿದಂತೆ ಕಾಂಗ್ರೇಸ್ ನಾಯಕರನ್ನು ಗುರಿಯಾಗಿ ಇಡಿ.ಇಡಿ ದಾಳಿ ಖಂಡಿಸಿ ಬಯಲು ಸೀಮೆ ಪ್ರದೇಶಾಭಿವೃದ್ಧಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿದರು. | Kannada Prabha

ಸಾರಾಂಶ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭಾಷಣ ಮಾಡಿದ ಜಾಗವನ್ನು ಆರ್‌ಎಸ್‌ಎಸ್ ಹಾಗೂ ಬಜರಂಗ ದಳ ಮತ್ತು ಬಿಜೆಪಿಯವರು ಶುದ್ಧೀಕರಣ ಮಾಡಿದ ಕ್ರಮ ಅತ್ಯಂತ ಖಂಡನೀಯ ಎಂದು ಬಯಲುಸೀಮೆ ಪ್ರದೇಶ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದ್ದಾರೆ.

- ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ಸಲ್ಲದು: ಮಂಜಪ್ಪ । ಹೊನ್ನಾಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭಾಷಣ ಮಾಡಿದ ಜಾಗವನ್ನು ಆರ್‌ಎಸ್‌ಎಸ್ ಹಾಗೂ ಬಜರಂಗ ದಳ ಮತ್ತು ಬಿಜೆಪಿಯವರು ಶುದ್ಧೀಕರಣ ಮಾಡಿದ ಕ್ರಮ ಅತ್ಯಂತ ಖಂಡನೀಯ ಎಂದು ಬಯಲುಸೀಮೆ ಪ್ರದೇಶ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು.

ಬುಧವಾರ ಕನಕದಾಸ ವೃತ್ತದಿಂದ ತಾಲೂಕು ಕಚೇರಿವರೆಗೂ ಬಿಜೆಪಿ ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ಮೋದಿಯವರೇ ಇದೇನಾ ನಿಮ್ಮ ಸಬ್ ಕಾ ಸಾಥ್, ಸಬ್ ಕಾ ವಿಕಾಸ್? ಖರ್ಗೆಯವರು ದಲಿತ ಕುಟುಂಬದಿಂದ ಬಂದ ವ್ಯಕ್ತಿ. ಅಂತಹ ಮೇರು ನಾಯಕರು ನಿಂತ ಜಾಗವನ್ನೇ ಬಿಜೆಪಿಯವರು ಶುದ್ಧೀಕರಣ ಮಾಡಿದ ಮೇಲೆ ಇನ್ನೂ ಜನಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದರು.

ಜಾಗ ಶುದ್ಧೀಕರಣ ಮಾಡಿದವರ ಮೇಲೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ದೂರು ದಾಖಲಿಸಿ ಎಂದು ಪ್ರತಿಭಟಿಸಿದರೆ ಅವರ ಮೇಲೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಡೆ ಉಗ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದರು.

ಬಿಜೆಪಿಯವರೇ ನೇಮಕ ಮಾಡಿದ ಕೆಪಿಎಸ್‌ಸಿ ಅಧ್ಯಕ್ಷರ ಅಕ್ರಮದ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿಲ್ಲ. ಆದರೆ ನಿಷ್ಕಳಂಕ ವ್ಯಕ್ತಿತ್ವದ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಕೇಂದ್ರ ಸರ್ಕಾರ ತನ್ನ ತನಿಖಾ ಸಂಸ್ಥೆಗಳನ್ನು ಬಳಸಿ ಕಾಂಗ್ರೆಸ್‌ನ ಮುಂಚೂಣಿ ನಾಯಕರ ಮೇಲೆ ಸಿಬಿಐ, ಇ.ಡಿ.ಗಳ ಮೂಲಕ ದಾಳಿ ಮಾಡಿಸಿದೆ ಎಂದು ದೂರಿದರು.

ದೇಶದ ಯುವಕರು ನೀಟ್ ಅಕ್ರಮ ಖಂಡಿಸಿ ಪ್ರತಿಭಟನೆ ಮಾಡಿದಾಗ ಅವರ ಮೇಲೆ ಲಾಠಿ ಚಾರ್ಜ್ ಮಾಡಿಸಿದರು. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವುಕಂಡರು. ಈ ಬಗ್ಗೆ ಬಿಜೆಪಿಯವರು ಎಲ್ಲೂ ಪ್ರತಿಭಟಿಸಲಿಲ್ಲ. ಕೇಂದ್ರ ಬಿಜೆಪಿ ಸರ್ಕಾರ ಈ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ಕೆಲಸವನ್ನೂ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯದ ಉದ್ದಗಲಕ್ಕೂ ಬಿಜೆಪಿಯಲ್ಲಿ ಭ್ರಷ್ಟರು ಇದ್ದಾರೆ. ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಬಿಜೆಪಿ ಮುಖಂಡರ ಮೇಲೂ ಇ.ಡಿ. ದಾಳಿ ಮಾಡಬೇಕು ಎಂದು ಮಂಜಪ್ಪ ಒತ್ತಾಯಿಸಿದರು.

ಪ್ರತಿಭಟನೆ ಸರಿಯೇ?:

ನಮ್ಮ ಉಸ್ತುವಾರಿ ಸಚಿವರು ಇನ್ನೊಂದೆರಡು ದಿನಗಳಲ್ಲಿ ಭದ್ರಾ ಜಲಾಶಯದಿಂದ ನೀರು ಬಿಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಮುನ್ಸೂಚನೆ ಸಿಕ್ಕ ಮೇಲೂ ಮಾಜಿ ಸಚಿವರು ಪ್ರತಿಭಟನೆ ಮಾಡುತ್ತಿದ್ದಾರೆ. ಇದು ಸರಿಯೇ? ಪ್ರತಿದಿನ ಮಾಡುವ ಪ್ರತಿಭಟನೆಯನ್ನು ಜನತೆ ನೋಡಿ ನೋಡಿ ಸಾಕಾಗಿದ್ದಾರೆ ಎಂದರು.

ಕನಕದಾಸ ವೃತ್ತದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಚ್.ಎ. ಉಮಾಪತಿ, ಆರ್.ನಾಗಪ್ಪ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಮಧುಗೌಡ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಚೀಲೂರು ವಾಜೀದ್, ಎಚ್.ಎ. ಗದ್ದಿಗೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ, ಆಶಾ ಇತರರು ಮಾತನಾಡಿದರು.

ಪ್ರತಿಭಟನೆಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರಾಘವೇಂದ್ರ, ವಾಲ್ಮೀಕಿ ಸಮಾಜದ ಅಧ್ಯಕ್ಷ ಹನುಮಂತಪ್ಪ, ಮಾಜಿ ಅಧ್ಯಕ್ಷ ಶಿವಾನಂದಪ್ಪ, ಹರಳಹಳ್ಳಿ ಬೆನಕಪ್ಪ, ಎಚ್.ಡಿ. ವಿಜೇಂದ್ರಪ್ಪ, ಎಚ್.ಬಿ. ಅಣ್ಣಪ್ಪ, ಚಂದ್ರಶೇಖರ್, ದಿಡಗೂರು ಪ್ರಕಾಶ್, ನೂರಾರು ಜನರು ಭಾಗವಹಿಸಿದ್ದರು.

- - -

-16ಎಚ್.ಎಲ್.ಐ1: ಪ್ರತಿಭಟನೆಯಲ್ಲಿ ಬಯಲುಸೀಮೆ ಪ್ರದೇಶ ಅಭಿವೃದ್ಧಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನುಗ್ಗೇಹಳ್ಳಿ ಸೊಸೈಟಿಗೆ ಅಧ್ಯಕ್ಷರಾಗಿ ಕಾರೇಕೆರೆ ಪ್ರಕಾಶ್‌ ಆಯ್ಕೆ
ಪ್ರವಾಸೋದ್ಯಮ ಅಭಿವೃದ್ಧಿಯಿಂದ ಜಿಲ್ಲೆಯ ಸೌಕರ್ಯ ಮೇಲ್ದರ್ಜೆಗೆ: ಸಾಗರ ಖಂಡ್ರೆ