ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಯುವಕರು ಮಾದಕ ವಸ್ತುಗಳ ಸೇವನೆಯ ಚಟಕ್ಕೆ ದಾಸರಾಗುತ್ತಿರುವುದು ವಿಷಾದಕರ ಸಂಗತಿಯಾಗಿದೆ ಎಂದು ಡಿವೈಎಸ್‌ಪಿ ಡಾ. ಗಿರೀಶ ಭೋಜಣ್ಣನವರ ಹೇಳಿದರು.
ರಾಣಿಬೆನ್ನೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಯುವಕರು ಮಾದಕ ವಸ್ತುಗಳ ಸೇವನೆಯ ಚಟಕ್ಕೆ ದಾಸರಾಗುತ್ತಿರುವುದು ವಿಷಾದಕರ ಸಂಗತಿಯಾಗಿದೆ ಎಂದು ಡಿವೈಎಸ್‌ಪಿ ಡಾ. ಗಿರೀಶ ಭೋಜಣ್ಣನವರ ಹೇಳಿದರು. ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಹಲಗೇರಿ ಪೊಲೀಸ್ ಠಾಣೆಯ ವತಿಯಿಂದ ಆಯೋಜಿಸಿದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಡ್ರಗ್ಸ್ ಸೇವನೆಯಿಂದ ಅನೇಕ ಯುವಕರು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕ ಆರೋಗ್ಯವನ್ನೂ ಹದಗೆಡಿಸಿಕೊಳ್ಳುತ್ತಿದ್ದಾರೆ ಹಾಗೂ ಕೆಲವರು ಪ್ರಾಣವನ್ನೂ ಕಳೆದುಕೊಳ್ಳುತ್ತಿದ್ದಾರೆ. ಸಮಾಜದಲ್ಲಿ ಡ್ರಗ್ಸ್ ಹಾವಳಿಯು ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ ಎಂದರು. ಕುಮಾರಪಟ್ಟಣಂ ಸಿಪಿಐ ಸಿದ್ಧೇಶ್ ಎಂ.ಡಿ. ಮಾತನಾಡಿ, ಗುಟ್ಕಾ ಅಗೆಯುವುದರಿಂದ ಅನೇಕ ರೋಗಗಳು ಹರಡುತ್ತವೆ. ಗಾಂಜಾ ಬೆಳೆಯನ್ನು ಬೆಳೆಯುವುದು ಹಾಗೂ ಸೇವನೆ ಮಾಡುವ ವ್ಯಕ್ತಿಗಳಿಗೆ ಸುಮಾರು 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇಂತಹವರು ಕಂಡುಬಂದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದರು. ಪ್ರಾ. ಪಿ.ಮುನಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಹಲಗೇರಿ ಪೊಲೀಸ್ ಠಾಣೆಯ ಪಿಎಸ್‌ಐ ಪರಶುರಾಮ ಲಮಾಣಿ, ಯೋಜನಾಧಿಕಾರಿ ಎಚ್. ಶಿವಾನಂದ್, ಉಪನ್ಯಾಸಕರಾದ ಸಂತೊಷ ಅಂಗಡಿ, ಅಶೋಕ ಲಮಾಣಿ, ಪೂರ್ಣಿಮಾ ಮಾಗನೂರು, ಶಿಕ್ಷಕರಾದ ಶಿವಮೂರ್ತಯ್ಯ ಎಚ್.ಎಂ., ರವಿ ಕೆ.ಎಸ್., ಚಂದ್ರಶೇಖರ ಎಚ್.ಎಂ., ಜೈಪ್ರಕಾಶ್ ಸಿ., ಪ್ರಕಾಶ ಸಿ., ಕವಿತ ಪುಟ್ಟನಗೌಡ್ರ ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.