ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಅವರು ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಡುಪಿಯಲ್ಲಿ ಜು.೧೧ರಂದು ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಆದಿಶಂಕರರು ಹಿಂದೂ ಧರ್ಮದ ಪುನರುತ್ಥಾನಕ್ಕೆ ಕಾರಣೀಭೂತರಾಗಿದ್ದು ದೇಶದ ನಾಲ್ಕು ಕಡೆ ಪೀಠ ಸ್ಥಾಪಿಸುವ ಮೂಲಕ ಸಾಂಸ್ಕೃತಿಕ ಹಾಗು ಧಾರ್ಮಿಕ ಏಕತೆ, ಅಖಂಡತೆಯನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅಂತಹ ಮೇರು ವ್ಯಕ್ತಿಯ ಕುರಿತು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕ್ಷುಲ್ಲಕವಾಗಿ ಮಾತನಾಡುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸಂಘಟಿಕರು ಎಚ್ಚರ ವಹಿಸಬೇಕೆಂದರು.
ಉಡುಪಿಯ ಅಷ್ಟ ಮಠಾಧೀಶರು ಶಂಕರರ ನಿಂದನೆಯ ವಿಚಾರವಾಗಿ ಬೇಷರತ್ ಕ್ಷಮೆ ಯಾಚಿಸಬೇಕು. ಪೇಜಾವರ ಶ್ರೀಗಳು ಮೌನ ಮುರಿದು ಘಟನೆಯನ್ನು ಖಂಡಿಸಬೇಕು. ಈ ಘಟನೆಯ ನೇರ ಹೊಣೆಯನ್ನು ಶಿರೂರು ಮಠವೇ ಹೊರಬೇಕು ಎಂದರು.ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮಹೇಶ್ ದತ್ತ, ಗೌರವಾಧ್ಯಕ್ಷ ವೆಂಕಟೇಶ್ ಮೂರ್ತಿ, ನಿರ್ದೇಶಕ ಮಂಜುನಾಥ್ ಕೋಡಿಹಳ್ಳಿ ಮತ್ತಿತರರಿದ್ದರು.