ದೇಶ ರಕ್ಷಣೆಗೆ ಪೊಲೀಸರ ನಿಸ್ವಾರ್ಥ ಸೇವೆ ಶ್ಲಾಘನೀಯ: ನ್ಯಾಯಾಧೀಶ ಶಿವಕುಮಾರ

KannadaprabhaNewsNetwork |  
Published : Oct 22, 2026, 02:00 AM IST
21ಕೆಜಿಎಫ್‌1 | Kannada Prabha

ಸಾರಾಂಶ

ಪ್ರಸಕ್ತ ಸಾಲಿನಲ್ಲಿ ಕರ್ತವ್ಯ ನಿರತರಾಗಿರುವಾಗಲೇ ರಾಷ್ಟ್ರಾದ್ಯಂತ ೧೫೪ ಮಂದಿ ಪೊಲೀಸರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.ಪೊಲೀಸರ ಜೀವನ ಕಷ್ಟಕರ, ಕೆಲವೊಮ್ಮೆ ಜೀವ ಲೆಕ್ಕಿಸದೆ ರಕ್ಷಣೆ ಮಾಡುವ ಸಂದರ್ಭಗಳು ಒದಗಿಬರುತ್ತವೆ. ವಿವಿಧ ಪ್ರಕರಣಗಳಲ್ಲಿ ಅಪರಾಧಿಗಳನ್ನು ಕರೆತರುವ ಸಂದರ್ಭಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕಾಗಿರುತ್ತದೆ. ಎಂತಹ ಕಷ್ಟಕರ ಪರಿಸ್ಥಿತಿಯಲ್ಲೂ ಪೊಲೀಸರು ಕರ್ತವ್ಯದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಾರೆ. ಪೊಲೀಸರ ಕರ್ತವ್ಯ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ.

ಕನ್ನಡಪ್ರಭ ವಾರ್ತೆ ಕೆಜಿಎಫ್

ದೇಶದ ರಕ್ಷಣೆಯಲ್ಲಿ ಪ್ರಾಣ ತ್ಯಾಗ ಮಾಡುವ ಪೊಲೀಸರು, ರಾಷ್ಟ್ರಾದ್ಯಂತ ಸಾರ್ವಜನಿಕರ ನೆಮ್ಮದಿಗೆ ಯಾವುದೇ ರೀತಿಯಲ್ಲೂ ಧಕ್ಕೆಯಾಗದಂತೆ ಹಗಲಿರುಳು ದುಡಿಯುವ ಪೊಲೀಸರ ನಿಸ್ವಾರ್ಥ ಸೇವೆ ಶ್ಲಾಘನೀಯವೆಂದು ಕೆಜಿಎಫ್‌ನ ೩ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಿವಕುಮಾರ. ಬಿ. ಅವರು ತಿಳಿಸಿದರು.

ಕೆಜಿಎಫ್ ಪೊಲೀಸ್ ಜಿಲ್ಲೆಯ ರಾಬರ್ಟ್ಸನ್‌ಪೇಟೆ ಪೊಲೀಸ್ ವೃತ್ತದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹುತಾತ್ಮರ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿ ಮಾತನಾಡಿದರು. ಪೊಲೀಸರು ದೇಶದ ರಕ್ಷಣೆಯಲ್ಲಿ ಪ್ರಾಣ ತ್ಯಾಗ ಮಾಡಿದ್ದಾರೆ. ಕರ್ತವ್ಯ ನಿರತರಾಗಿದ್ದಾಗಲೇ ಎಷ್ಟೋ ಮಂದಿ ಪೊಲೀಸರು ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿದ್ದಾರೆ. ನಾವೆಲ್ಲಾ ಭಾರತೀಯರು, ಸಮಾನತೆ, ದೇಶ ರಕ್ಷಣೆಗಾಗಿ ಸಮಾಜದ ವಿವಿಧ ಸಮುದಾಯದ ಪೊಲೀಸರು, ಅಧಿಕಾರಿಗಳು ಪ್ರಾಣ ತ್ಯಾಗ ಮಾಡಿದ್ದರ ಜೊತೆಗೆ ಅಂತಹವರ ನೆನಪು ಮಾಡಿಕೊಳ್ಳುವುದು ಸೂಕ್ತವೆಂದರು. ಹುತಾತ್ಮ ಪೊಲೀಸರ ಸಂಸ್ಮರಣೆ ಸರ್ಕಾರ ಮತ್ತು ನಾಗರಿಕರ ಕರ್ತವ್ಯವಾಗಿದೆ. ಆದ್ದರಿಂದ ಪೊಲೀಸ್ ಸಂಸ್ಮರಣಾ ದಿನವನ್ನು ದೇಶವ್ಯಾಪ್ತಿ ಆಚರಿಸಲಾಗುತ್ತಿದೆ. ರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಾಗ, ರಾಷ್ಟ್ರ ರಕ್ಷಣೆ ಮಾಡುವಾಗ ಮತ್ತು ಇತರೆ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಗೌರವ ವಂದನೆ ಸಲ್ಲಿಸಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಕರ್ತವ್ಯ ನಿರತರಾಗಿರುವಾಗಲೇ ರಾಷ್ಟ್ರಾದ್ಯಂತ ೧೫೪ ಮಂದಿ ಪೊಲೀಸರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.ಪೊಲೀಸರ ಜೀವನ ಕಷ್ಟಕರ, ಕೆಲವೊಮ್ಮೆ ಜೀವ ಲೆಕ್ಕಿಸದೆ ರಕ್ಷಣೆ ಮಾಡುವ ಸಂದರ್ಭಗಳು ಒದಗಿಬರುತ್ತವೆ. ವಿವಿಧ ಪ್ರಕರಣಗಳಲ್ಲಿ ಅಪರಾಧಿಗಳನ್ನು ಕರೆತರುವ ಸಂದರ್ಭಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕಾಗಿರುತ್ತದೆ. ಎಂತಹ ಕಷ್ಟಕರ ಪರಿಸ್ಥಿತಿಯಲ್ಲೂ ಪೊಲೀಸರು ಕರ್ತವ್ಯದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಾರೆ. ಪೊಲೀಸರ ಕರ್ತವ್ಯ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಂತರ ದೇಶಾದ್ಯಂತ ಹುತಾತ್ಮರಾದ ಪೊಲೀಸರ ಪಟ್ಟಿಯನ್ನು ಎಸ್ಪಿ ಶಿವಾಂಶು ರಜಪೂತ್ ಅವರು ವಾಚಿಸಿದರು.

ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಪತ್ರಕರ್ತರು, ವಕೀಲರು, ಹಲವಾರು ಸಂಘ ಸಂಸ್ಥೆಗಳು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು. ಡಿ.ಎ.ಆರ್.ನ ಆರ್.ಪಿ.ಐ. ವಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಆಕರ್ಷಕ ಕವಾಯಿತು ನಡೆಯಿತು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಲಕ್ಷ್ಮಯ್ಯ, ಖ್ಯಾತ ವೈದ್ಯರಾದ ಡಾ. ಬಿ.ರಾಜೇಂದ್ರ ಕುಮಾರ್, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತ ಡಾ.ಆರ್.ಪ್ರಭುರಾಂ, ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ರಾಜಗೋಪಾಲಗೌಡ, ಕೆ.ಜಿ.ಎಫ್. ಪತ್ರಕರ್ತರ ಸಂಘದ ಅಧ್ಯಕ್ಷ ತ್ಯಾಗರಾಜ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್.ನರಸಿಂಹಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು. ಸದಾಶಿವ ಮನಗೂಳಿ, ಶರಣಪ್ಪ ಕವಟಗಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಯುವಕ ನಾಪತ್ತೆ
ಕಾರಟಗಿಯಲ್ಲಿ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ರಥೋತ್ಸವ ಸಂಭ್ರಮ