ಔರಾದ್: ಕೊರೋನಾ ಮತ್ತು ಲಾಕ್‌ಡೌನ್ ವಿಷಮ ಪರಿಸ್ಥಿತಿಯಲ್ಲಿ ಕೋವಿಡ್ ಕುರಿತಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ತಳ ಹಂತದಿಂದ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆ ಅನನ್ಯವಾಗಿದೆ ಎಂದು ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮುಕ್ತೆದಾರ ಹೇಳಿದರು.
ಸಂಜುಕುಮಾರ ಲಾಧ ಮಾತನಾಡಿ, ಸಮಾಜಮುಖಿ ಆಲೋಚನೆ ಮೈಗೂಡಿಸಿಕೊಂಡಿದ್ದ ಪ್ರೊ. ಬಿ.ಕೃಷ್ಣಪ್ಪ ಶೋಷಿತರ ಶ್ರೇಯಸಿಗೆ ಪ್ರತ್ಯೇಕ ಸಂಘಟನೆ ಹುಟ್ಟುಹಾಕಿದ ಸಾಮಾಜಿಕ ಚಿಂತಕ. ಪ್ರೊ.ಬಿ.ಕೃಷ್ಣಪ್ಪನವರ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪೂರೆಯವರು ಕೂಡ ಜಿಲ್ಲೆಯ ಅನೇಕ ಭ್ರಷ್ಟಾಚಾರ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತುವ ಮೂಲಕ ನಿರಂತರವಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗಿ ತಾಲೂಕಿನ ಸಮಾಜ ಸೇವೆಯಲ್ಲಿ ಅವರ ಸೇವೆ ಅನನ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಹಾಗೂ 20 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದಲಿತ ಸಂಘರ್ಷ ಸಮಿತಿಯಿಂದ ಸನ್ಮಾನ ಮಾಡಲಾಯಿತು.ವೈದ್ಯಾಧಿಕಾರಿ ಡಾ.ಅಬ್ದುಲ್ ವಾಜಿದ್, ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪೂರೆ, ಪತ್ರಕರ್ತ ಚನ್ನಬಸವ ಮುಕ್ತೆದಾರ, ಸತೀಶ ವಗ್ಗೆ, ಗಣಪತಿ ವಾಸುದೇವ, ಪ್ರಾಚಾರ್ಯ ನವೀಲಕುಮಾರ ಉತ್ಕಾರ, ಮನೋಹರ ನಿಟ್ಟೂರೆ, ನಾಗಶೆಟ್ಟಿ ಬಿಜಲವಾಡೆ, ಸುದೀರ್, ಪತ್ರಕರ್ತ ಶಿವಕುಮಾರ ಸಾದುರೆ, ಜೈಪ್ರಕಾಶ ಅಷ್ಟೂರೆ, ತುಕಾರಾಮ ಹಸನ್ಮುಖಿ, ನಿತೀಶ್ ಸಕಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.