ಪತ್ರಿಕೆ ವಿತರಕರ ಸೇವೆ ಶ್ಲಾಘನೀಯ: ಕೆ.ವಿ.ಪ್ರಭಾಕರ್

KannadaprabhaNewsNetwork |  
Published : Jul 02, 2026, 02:00 AM IST
Paper 1 | Kannada Prabha

ಸಾರಾಂಶ

‘ಪತ್ರಿಕಾ ವಿತರಕರು ಮಾಧ್ಯಮ ಸಂಸ್ಥೆಗಳ ನರನಾಡಿಗಳಿಗೆ ಆಮ್ಲಜನಕ ಇದ್ದಂತೆ. ಪ್ರತಿನಿತ್ಯ ಯಾವುದೇ ಹವಾಮಾನ ಲೆಕ್ಕಿಸದೆ ಪತ್ರಿಕೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಅವರ ಸೇವೆ ಶ್ಲಾಘನೀಯ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು

ಕನ್ನಡಪ್ರಭ ವಾರ್ತೆ ಬೆಂಗಳೂರು

‘ಪತ್ರಿಕಾ ವಿತರಕರು ಮಾಧ್ಯಮ ಸಂಸ್ಥೆಗಳ ನರನಾಡಿಗಳಿಗೆ ಆಮ್ಲಜನಕ ಇದ್ದಂತೆ. ಪ್ರತಿನಿತ್ಯ ಯಾವುದೇ ಹವಾಮಾನ ಲೆಕ್ಕಿಸದೆ ಪತ್ರಿಕೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಅವರ ಸೇವೆ ಶ್ಲಾಘನೀಯ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಬುಧವಾರ ಗಾಂಧಿನಗರದ ಪತ್ರಿಕಾ ವಿತರಣಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಗಾಂಧಿನಗರ ಪತ್ರಿಕಾ ವಿತರಕರ ಸಂಘದ ಸಹಯೋಗದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದೇ ವೇಳೆ ‘ನ್ಯೂಸ್ ಪೇಪರ್ ಡಿಸ್ಟ್ರಿಬ್ಯೂಟರ್ಸ್ ಚಾರಿಟಬಲ್ ಟ್ರಸ್ಟ್’ ಅನ್ನು ಉದ್ಘಾಟಿಸಿದರು.

ಪತ್ರಿಕೆ ವಿತರಿಸುವ ಮೂಲಕವೇ ತಾವು ಪತ್ರಿಕೋದ್ಯಮಕ್ಕೆ ಕಾಲಿಟ್ಟದ್ದನ್ನು ಹಾಗೂ ಸಿದ್ದರಾಮಯ್ಯ ಅವರು ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ನೀಡಿದ ನೆರವನ್ನು ಅವರು ಸ್ಮರಿಸಿದರು. ‘ಕನ್ನಡಪ್ರಭ’ದ ಪ್ರಧಾನ ಸಂಪಾದಕ ಹಾಗೂ ‘ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಂಸ್ಥೆಗಳ ಸಮೂಹ ಸಂಪಾದಕೀಯ ನಿರ್ದೇಶಕರಾದ ರವಿ ಹೆಗಡೆ ಮಾತನಾಡಿ, ‘ಚಳಿ, ಮಳೆ, ಬಿಸಿಲೆನ್ನದೆ ದುಡಿಯುವ ಪತ್ರಿಕಾ ವಿತರಕರು ಮಾಧ್ಯಮ ಕ್ಷೇತ್ರದ ಬೆನ್ನೆಲುಬು. ಅವರ ಸೇವೆಯನ್ನು ಸಮಾಜ ಸದಾ ಗೌರವಿಸಬೇಕು. ಇಂದು ಪತ್ರಿಕಾ ವಿತರಕರಿಗೆ ಗೌರವ ಸಲ್ಲಿಸಬೇಕಾದ ದಿನ. ಆದರೆ ಪತ್ರಿಕಾ ವಿತರಕರೇ ಮಾಧ್ಯಮದವರಿಗೆ ಗೌರವ ಸಲ್ಲಿಸುತ್ತಿರುವುದು ವಿಶೇಷ’ ಎಂದು ಅಭಿಪ್ರಾಯಪಟ್ಟರು.

ಇಂಡಿಯನ್ ಫೆಡರೇಷನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್‌ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಪತ್ರಿಕಾ ವಿತರಕರಿಲ್ಲದೆ ಪತ್ರಿಕೆಗಳೇ ಇಲ್ಲ. ಪತ್ರಿಕಾ ವಿತರಕರು ಮಾಧ್ಯಮ ವ್ಯವಸ್ಥೆಯ ಅವಿಭಾಜ್ಯ ಅಂಗ ಎಂದು ಹೇಳಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪತ್ರಿಕಾ ವಿತರಕರ ಒಕ್ಕೂಟದ ಉಪಾಧ್ಯಕ್ಷ ಪ್ರಶಾಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸುರೇಶ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಲಪತಿ ನೇಮಕಾತಿ ಶೋಧನಾ ಸಮಿತಿ ರದ್ದುಗೊಳಿಸಲು ಆಗ್ರಹ
ವರದಕ್ಷಿಣೆ ಕಿರುಕುಳ, ದಪ್ಪವಾಗಿದ್ದೀಯಾ ಎಂದು ಹಂಗಿಸಿ ಪತ್ನಿ ಹತ್ಯೆಗೈದ ಪತಿ