ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಜಿಲ್ಲಾ ಘಟಕ ಬೆಳಗಾವಿ ಆಶ್ರಯದಲ್ಲಿ ಶನಿವಾರ ನಡೆದ 26ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂದೂರ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಕರೆ ನೀಡಿದರು.
ಸೈನಿಕರು ಭಾರತದ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸೇವೆಯಿಂದ ನಿವೃತ್ತರಾದರೂ ಅವರ ಉತ್ಸಾಹ ಮಾತ್ರ ಕುಂದಿಲ್ಲ. ದೇಶದ ಗಡಿಯಲ್ಲಿ ನಿಂತು ವೈರಿಗಳ ಗುಂಡಿಗೆ ಎದೆಕೊಟ್ಟು ಹೋರಾಡಿದ ವೀರ ಯೋಧರ ಬಗ್ಗೆ ಎಷ್ಟು ಹೇಳಿದರೂ ಸಾಲದು.ಕಾರ್ಗಿಲ್ ಯುದ್ದವನ್ನು ಗೆದ್ದಿದ್ದೇವೆ. ಇತ್ತೀಚೆಗೆ ಅಪರೇಷನ್ ಸಿಂದೂರು ಮೂಲಕ ನಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದೇವೆ. ಇದಕ್ಕೆ ಭಾರತದ ದೇಶ ಹೆಚ್ಚು ವೀರರನ್ನು ಹೊಂದಿರುವುದೇ ಸಾಕ್ಷಿ ಎಂದರು.
ಇದೇ ವೇಳೆ ಮಾಜಿ ಸೈನಿಕರನ್ನು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು. ಮಾಜಿ ಸೈನಿಕರ ಸಂಘದ ವತಿಯಿಂದ ಸಚಿವರನ್ನು ಗೌರವಿಸಿ ಸತ್ಕರಿಸಲಾಯಿತು. ಶ್ರೀ ರುದ್ರಯ್ಯ ಹಿರೇಮಠ್ ಸ್ವಾಮಿಗಳು, ಶಾಸಕರಾದ ಆಸಿಫ್ ಸೇಠ್, ಬಸಪ್ಪ ತಳವಾರ, ಯುವರಾಜ್ ಕದಂ, ಮನೋಹರ್ ಬೆಳಗಾಂವ್ಕರ್, ಶಂಕರಗೌಡ ಪಾಟೀಲ್, ಸುನೀಲ್ ದಾಗರ್, ಕಲ್ಲಪ್ಪ ಪಾಟೀಲ್, ಆರ್.ವೈ.ಹಿರೇಮಠ್, ಮಾಜಿ ಸೈನಿಕರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಾಡಿ ಮಲ್ಲಮ್ಮನಂಥ ವೀರರನ್ನು ಈ ನಾಡಿಗೆ ಕೊಟ್ಟಿರುವ ಬೆಳಗಾವಿ ಜಿಲ್ಲೆ, ದೇಶ ಕಾಯಲು ಸಾವಿರಾರು ಸೈನಿಕರನ್ನು ನೀಡಿದೆ. ಕರ್ನಾಟಕದಿಂದ ಅತಿಹೆಚ್ಚು ಯೋಧರು ಇರುವ ಜಿಲ್ಲೆ ಎಂದರೆ ಅದು ನಮ್ಮ ಬೆಳಗಾವಿ. ಇದರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ