ಕನ್ನಡಪ್ರಭ ವಾರ್ತೆ ಬೆಳಗಾವಿ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ ನೇರ ಪಾವತಿ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಆರೋಗ್ಯ ವಿಮಾ ಕಾರ್ಡ್ ವಿತರಣೆಯಲ್ಲಿ ಅವರು ಮಾತನಾಡಿದರು.
ಪೌರಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ₹5 ಲಕ್ಷದವರೆಗೆ ನಗದು ರಹಿತ ಆರೋಗ್ಯ ವಿಮಾ ಸೌಲಭ್ಯವನ್ನು ಸರ್ಕಾರ ಪೌರ ಕಾರ್ಮಿಕರಿಗೆ ನೀಡುತ್ತಿದೆ. ನಿವೃತ್ತಿಯವರೆಗೂ ಕಾರ್ಡ್ ಬಳಸಿ ಆರೋಗ್ಯ ಚಿಕಿತ್ಸೆ ಪಡೆಯಬಹುದು. ಸಾಲಪ್ಪ ವರದಿಯಂತೆ 56 ಅಂಶಗಳಲ್ಲಿ 34 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದು, ಪೌರಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಸದಾ ಬಧ್ಧವಾಗಿದೆ ಎಂದು ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೀತಿ ಕಾಮಕರ ಅವರು, ನಗರದ ಜನತೆಯ ಆರೋಗ್ಯ ಕಾಪಾಡುವ ಕಾರ್ಮಿಕರ ಆರೋಗ್ಯ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸರ್ಕಾರದ ವಿಮಾ ಯೋಜನೆಯ ಜೊತೆಗೆ ಪಾಲಿಕೆಯಿಂದಲೂ ಎಲ್ಲ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.
ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಮಾತನಾಡಿ, ವಿಮಾ ಯೋಜನೆಯಿಂದ ಪೌರಕಾರ್ಮಿಕರಿಗೆ ಪ್ರಯೋಜನವಾಗಲಿದೆ. ಪಾಲಿಕೆಯಿಂದಲೂ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ನಗರಸೇವಕ ಬಾಬಾಜಾನ್ ಮುತವಾಲೆ, ನಿಗಮದ ಪದಾಧಿಕಾರಿಗಳಾದ ರಾಜು ಸಾಖೆ, ಎ.ಎ.ಯರಝರವಿ ಇದ್ದರು. ಮಹಾನಗರ ಪಾಲಿಕೆಯ 155 ಪೌರ ಕಾರ್ಮಿಕರಿಗೆ ಅತಿಥಿಗಳು ವಿಮಾ ಕಾರ್ಡ್ ವಿತರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಪಣೆ ಮಾಡಲಾಯಿತು. ಇದಕ್ಕೂ ಮೊದಲು ನಡೆದ ಶಿಬಿರದಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಅಭಿಯಂತರ ಹಣಮಂತ ಕಲಾದಗಿ ಸ್ವಾಗತಿಸಿ, ನಿರೂಪಿಸಿದರು.-----------