ಜಿಲ್ಲೆಯಲ್ಲಿಯೇ ಅಥಣಿ ಸಾರ್ವಜನಿಕ ಆಸ್ಪತ್ರೆಯ ಸೇವೆಗಳು ಮಾದರಿ

KannadaprabhaNewsNetwork |  
Published : Feb 17, 2025, 01:30 AM IST
ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅವರ ಹುಟ್ಟು ಹಬ್ಬದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಯುವಮುಖಂಡ ಚಿದಾನಂದ ಸವದಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಅಥಣಿ ತಾಲೂಕಿನ ಅನೇಕ ಬಡವರಿಗೆ ಮತ್ತು ನಿರ್ಗತಿಕರ ಬಾಳಿಗೆ ಬೆಳಕಾಗಿರುವ ಅಥಣಿ ಸಾರ್ವಜನಿಕ ಆಸ್ಪತ್ರೆಯ ಸೇವೆಗಳು ಬೆಳಗಾವಿ ಜಿಲ್ಲೆಯಲ್ಲಿಯೇ ಮಾದರಿಯಾಗಿವೆ ಎಂದು ಯುವ ಮುಖಂಡ ಚಿದಾನಂದ ಲಕ್ಷ್ಮಣ ಸವದಿ ಪ್ರಸಂಶೆ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ತಾಲೂಕಿನ ಅನೇಕ ಬಡವರಿಗೆ ಮತ್ತು ನಿರ್ಗತಿಕರ ಬಾಳಿಗೆ ಬೆಳಕಾಗಿರುವ ಅಥಣಿ ಸಾರ್ವಜನಿಕ ಆಸ್ಪತ್ರೆಯ ಸೇವೆಗಳು ಬೆಳಗಾವಿ ಜಿಲ್ಲೆಯಲ್ಲಿಯೇ ಮಾದರಿಯಾಗಿವೆ ಎಂದು ಯುವ ಮುಖಂಡ ಚಿದಾನಂದ ಲಕ್ಷ್ಮಣ ಸವದಿ ಪ್ರಸಂಶೆ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ಶಾಸಕ ಲಕ್ಷ್ಮಣ ಸವದಿ ಅವರ 65ನೇ ಹುಟ್ಟುಹಬ್ಬದ ನಿಮಿತ್ತ ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಆಸ್ಪತ್ರೆ ಅಥಣಿ, ಟಿಕೆ ಐ ಕ್ಲಿನಿಕ್ ಸಾಂಗ್ಲಿ, ಶ್ರೀ ಲಕ್ಷ್ಮಣ ಸವದಿ ಫೌಂಡೇಶನ್ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ತಂದೆ ಲಕ್ಷ್ಮಣ ಸವದಿ ಅವರು ಅಥಣಿ ಮತ ಕ್ಷೇತ್ರದ ಶಾಸಕರಾದ ಬಳಿಕ ಕಳೆದ 20 ವರ್ಷಗಳಲ್ಲಿ ಅಥಣಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಿ ಇಲ್ಲಿ ಅನೇಕ ಆರೋಗ್ಯ ಸೇವೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವ ಮೂಲಕ ಬಡ ರೋಗಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ. 100 ಹಾಸಿಗೆ ಸೌಲಭ್ಯವುಳ್ಳ ಈ ಆಸ್ಪತ್ರೆಯಲ್ಲಿ ಐಸಿಯು ಘಟಕ, ಹೈಟೆಕ್ ಲ್ಯಾಬ್ ಮತ್ತು , ಶಸ್ತ್ರಚಿಕಿತ್ಸಾ ವಿಭಾಗ ಹೊಂದಿರುವುದರಿಂದ ತಾಲೂಕಿನ ಸಾವಿರಾರು ಬಡ ಕುಟುಂಬಗಳಿಗೆ ಅನುಕೂಲವಾಗಿದ್ದು, ಆಸ್ಪತ್ರೆಗೆ ಬೇಕಾಗುವ ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನನ್ನ ತಂದೆ ಹಾಗೂ ಮತಕ್ಷೇತ್ರದ ಶಾಸಕರಾದ ಲಕ್ಷ್ಮಣ ಸವದಿ ಅವರು ಕೂಡ ಈ ಸಾರ್ವಜನಿಕ ಆಸ್ಪತ್ರೆಗೆ ಇನ್ನಷ್ಟು ಹೊಸ ಆರೋಗ್ಯ ಸೇವೆಗಳನ್ನು ಕೊಡುವ ನಿಟ್ಟಿನಲ್ಲಿ ಕನಸು ಹೊಂದಿದ್ದಾರೆ. ಶೀಘ್ರದಲ್ಲಿಯೇ ಹಳೆಯ ತಹಸೀಲ್ದಾರ್ ಕಾರ್ಯಾಲಯದ ಸ್ಥಳದಲ್ಲಿ ಶೀಘ್ರದಲ್ಲಿಯೇ ತಾಯಿ ಮಕ್ಕಳು ಹೈಟೆಕ್ ಮಾದರಿಯ ಆಸ್ಪತ್ರೆ ಕಟ್ಟಡ ಪ್ರಾರಂಭವಾಗಲಿದ್ದು, ಮುಂಬರುವ ದಿನಗಳಲ್ಲಿ ತಾಲೂಕಿನ ಬಡ ಜನತೆಗೆ ಇದರಿಂದ ಬಹಳಷ್ಟು ಸಹಕಾರಿಯಾಗಲಿದೆ ಎಂದರು.

ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಮನುಷ್ಯನಿಗೆ ಪ್ರತಿಯೊಂದು ಅಂಗಗಳು ಬಹಳ ಮುಖ್ಯ. ನಮ್ಮ ಕಣ್ಣುಗಳು ಸರಿಯಾಗಿದ್ದರೇ ನಮ್ಮ ಸುತ್ತ-ಮುತ್ತಲಿನ ಪರಿಸರದ ಜತೆಗೆ ಇಡೀ ಜಗತ್ತನ್ನೇ ನೋಡಬಹುದು. ಕಣ್ಣು ಬಹಳ ಸೂಕ್ಷ್ಮವಾದ ಅಂಗ. ಪ್ರತಿಯೊಬ್ಬರು ತಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. 40 ವರ್ಷ ಮೇಲ್ಪಟ್ಟವರಲ್ಲಿ ಮೋತಿ ಬಿಂದು ಸಮಸ್ಯೆ ಇದ್ದವರಿಗೆ ಸರ್ಕಾರದಿಂದ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಈ ಶಿಬಿರದಲ್ಲಿ 300ಕ್ಕೂ ಅಧಿಕ ರೋಗಿಗಳಿಗೆ ನೇತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಶಾಸಕರ ಹುಟ್ಟುಹಬ್ಬದ ನಿಮಿತ್ತ ಕಳೆದ ನಾಲ್ಕು ವರ್ಷಗಳಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತಿದ್ದು, ಇದರಿಂದ ಇಲ್ಲಿಯವರೆಗೆ 2,000ಕ್ಕೂ ಅಧಿಕ ಜನರಿಗೆ ಮೋತಿ ಬಿಂದು ಮತ್ತು ಕಣ್ಣಿನ ಸಮಸ್ಯೆಗಳಿಗೆ ಸಂಬಂಧಿಸಿದ ಇನ್ನಿತರ ಚಿಕಿತ್ಸೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೈಟೆಕ್ ಮಾದರಿಯ ಆರೋಗ್ಯ ಸೇವೆಗಳನ್ನು ಹೊಂದಿದ್ದು, ಇಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿದ್ದಾರೆ. ತಾಲೂಕಿನ ಬಡ ರೋಗಿಗಳು ಆರೋಗ್ಯ ಇಲಾಖೆಯ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ನೇತ್ರ ತಜ್ಞ ಡಾ.ಪ್ರದೀಪ ಸೌದತ್ತಿ , ಡಾ.ರಮೇಶ ಹುಲಕುಂದ, ಪ್ರಕಾಶ ಪಾಣಿಕರ, ಆರ್.ಬಿ.ಸಜ್ಜನ, ಪ್ರಕಾಶಚಂದ್ರ ನರಟ್ಟಿ, ಎ.ಬಿ.ಗೂಳಿಧರ ಸೇರಿದಂತೆ ಆರೋಗ್ಯ ಇಲಾಖೆಯ ಪದ್ಮಿ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಇಂದು ನಮ್ಮ ತಂದೆ ಶಾಸಕ ಲಕ್ಷ್ಮಣ ಸವದಿಯವರ 65ನೇ ಹುಟ್ಟು ಹಬ್ಬದ ನಿಮಿತ್ತ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಂಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಆರೋಗ್ಯ ಇಲಾಖೆಯಿಂದ ಮುಂಬರುವ ದಿನಗಳಲ್ಲಿ ಯಾವುದೇ ವಿಭಾಗದ ತಪಾಸಣಾ ಸೇವೆಗಳನ್ನು ಆಯೋಜಿಸಿದರೇ ಅದಕ್ಕೆ ಬೇಕಾಗುವ ಅಗತ್ಯ ಸಹಾಯ ಸಹಕಾರ ನೀಡಲಾಗುವುದು.

-ಚಿದಾನಂದ ಲಕ್ಷ್ಮಣ ಸವದಿ, ಯುವ ಮುಖಂಡ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ ರೆಡ್ ಕ್ರಾಸ್‌ನಿಂದ ವಿಶ್ವ ಮಾನವ ಹಕ್ಕು ದಿನಾಚರಣೆ
26ರಿಂದ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ