ಉಕ ಸಮಸ್ಯೆ ಚರ್ಚಿಸಲೆಂದೇ ಅಧಿವೇಶನ

KannadaprabhaNewsNetwork |  
Published : Dec 17, 2025, 03:00 AM IST
ಉಕ್ರೇನ್‌ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನ ಕರೆದಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನ ಕರೆದಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ ಜಿಎಸ್ ಟಿ ಪರಿಷ್ಕರಣೆ ಮೂಲಕ ರಾಜ್ಯದ ಆದಾಯ ಕಡಿಮೆ ಮಾಡಿದೆ. ವಾರ್ಷಿಕ ₹ 10-15 ಸಾವಿರ ಕೋಟಿ ಕೊರತೆಯಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ಒಂದೆರಡು ತಿಂಗಳು ಹೆಚ್ಚು ಕಮ್ಮಿಯಾಗಲಿದೆ. ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ. ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗೆ ಘೋಷಿಸಿದ ಅನುದಾನ ಇಲ್ಲಿಯವರೆಗೂ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ₹ 5300 ಕೋಟಿ ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ?. ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ಕಾನೂನು ತರಲಾಗುತ್ತಿದೆ. ಇದರಿಂದ ರಾಜ್ಯ ಹಾಗೂ ಸಮಾಜಕ್ಕೆ ಒಳ್ಳೆಯದಾಗಲಿದೆ ಎಂದರು.

ದೆಹಲಿ ಪ್ರತಿಭಟನೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು. ಮತಕಳ್ಳತನದಿಂದ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ನಮ್ಮ ಯಶಸ್ವಿ. ನಾವು ಅನೇಕರಿಗೆ ಅಧಿಕಾರವನ್ನೇ ಕೊಟ್ಟಿಲ್ಲ. ಆದರೂ ಸಾವಿರಾರು ರೂಪಾಯಿ ಖರ್ಚು ಮಾಡಿಕೊಂಡು ದೆಹಲಿಗೆ ಬಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದಾರೆ ಎಂದು ಉತ್ತರಿಸಿದರು.

ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಬೇಕು ಎಂದು ಪ್ರಿಯಾಂಕ ಗಾಂಧಿ ಅವರು ಸಂದೇಶ ನೀಡಿದ್ದಾರೆ. ಪ್ರತಿಭಟನೆ ಯಶಸ್ವಿಯಾಯಿತು. ಕರ್ನಾಟಕದ ಮೂಲೆ,‌ ಮೂಲೆಯಿಂದ ಬಂದ ಕಾರ್ಯಕರ್ತರು, ಮುಖಂಡರಿಗೆ ಪಕ್ಷದ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದೀರಾ ಎಂದು ಕೇಳಿದಾಗ, ಭೇಟಿಯಾಗಿದ್ದನ್ನು, ಕುಶಲೋಪರಿ ವಿಚಾರಿಸುವುದನ್ನು ಫೋಟೋಗಳಲ್ಲಿ ನೀವು ನೋಡಿದ್ದೀರಲ್ಲ ಎಂದರು.---------

ಕೋಟ್‌...

ಮತಕಳ್ಳತನದಿಂದ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ನಮ್ಮ ಯಶಸ್ವಿ. ನಾವು ಅನೇಕರಿಗೆ ಅಧಿಕಾರವನ್ನೇ ಕೊಟ್ಟಿಲ್ಲ. ಆದರೂ ಸಾವಿರಾರು ರೂಪಾಯಿ ಖರ್ಚು ಮಾಡಿಕೊಂಡು ದೆಹಲಿಗೆ ಬಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದಾರೆ.

- ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!