ಕಾಂಗ್ರೆಸ್‌ ಸರ್ಕಾರಕ್ಕೆ ಯಶಸ್ಸು, ಕೀರ್ತಿ ತಂದ ಶಕ್ತಿ ಯೋಜನೆ: ಶ್ರೀನಿವಾಸ್‌

KannadaprabhaNewsNetwork |  
Published : Jul 15, 2025, 01:00 AM IST
14 ಎಚ್‍ಆರ್‍ಆರ್ 01ಹರಿಹರದಲ್ಲಿ ಕಾಂಗ್ರೆಸ್ ಹಾಗೂ ಗ್ಯಾರಂಟಿ ಯೋಜನೆ ಅನಷ್ಠಾನ ಸಮಿತಿಯಿಂದ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕೆ ₹500 ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರು ಸಂಚರಿಸಿ 500 ಕೋಟಿ ಟಿಕೆಟ್‌ ದಾಟಿರುವುದು ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಇತಿಹಾಸ ಸೃಷ್ಠಿಯಾಗಿದೆ ಎಂದು ಹರಿಹರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ ಹೇಳಿದ್ದಾರೆ.

- ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಂಭ್ರಮಾಚರಣೆ

- - -

ಕನ್ನಡಪ್ರಭ ವಾರ್ತೆ ಹರಿಹರ ರಾಜ್ಯ ಕಾಂಗ್ರೆಸ್ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರು ಸಂಚರಿಸಿ 500 ಕೋಟಿ ಟಿಕೆಟ್‌ ದಾಟಿರುವುದು ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಇತಿಹಾಸ ಸೃಷ್ಠಿಯಾಗಿದೆ ಎಂದು ಹರಿಹರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ ಹೇಳಿದರು.

ನಗರದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಸಂಭ್ರಮಾಚರಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳಾ ಸಬಲೀಕರಣ ಮಹತ್ವಾಕಾಂಕ್ಷೆಯಿಂದ ಪ್ರಾರಂಭಿಸಲಾದ ಶಕ್ತಿ ಯೋಜನೆ ದಾಖಲೆ ಬರೆದಿದೆ. ಶಕ್ತಿ ಯೋಜನೆ ಸರ್ಕಾರಕ್ಕೆ ಉತ್ತಮ ಹೆಸರು ಮತ್ತು ಕೀರ್ತಿ ತಂದಿರುವ ಯಶಸ್ವಿನ ಯೋಜನೆಯಾಗಿದೆ ಎಂದರು.

ಯೋಜನೆ ಪರಿಣಾಮ ರಾಜ್ಯದ ಬಹುತೇಕ ಪ್ರವಾಸಿ ತಾಣಗಳು, ದೇಗುಲಗಳು, ಸುಕ್ಷೇತ್ರಗಳು, ಐತಿಹಾಸಿಕ ಸ್ಥಳಗಳು ಮಹಿಳೆಯರಿಂದಲೇ ತುಂಬಿ ತುಳುಕುತ್ತಿವೆ. ದೇಗುಲಗಳು ನಿರೀಕ್ಷೆ ಮೀರಿ ಆದಾಯ ಗಳಿಸಿವೆ. ಆದ್ದರಿಂದ ರಾಜ್ಯ ಸರ್ಕಾರ ಪಂಚ ಗಾರಂಟಿಗಳಲ್ಲಿ ಒಂದಾದ ಶ್ರೀ ಶಕ್ತಿ ಯೋಜನೆಯ ಸಂಭ್ರಮಾಚರಣೆಯನ್ನು ರಾಜ್ಯದ 4 ಸಾರಿಗೆ ನಿಗಮಗಳ ಘಟಕಗಳ ವ್ಯಾಪ್ತಿಯಲ್ಲೂ ಹಮ್ಮಿಕೊಳ್ಳಲಾಗಿದೆ ಎಂದರು.

ಡಿಪೋ ಮ್ಯಾನೇಜರ್ ಮಹೇಶ್ವರಪ್ಪ, ಪೌರಾಯುಕ್ತ ಪಿ.ಎಂ. ನಾಗಣ್ಣ, ನಗರಸಭೆ ಸದಸ್ಯ ಕೆ.ಜಿ. ಸಿದ್ದೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಗ್ರಾಮಾಂತರ ಅಧ್ಯಕ್ಷ ಎಂ.ಬಿ. ಅಬಿದಲ್ಲಿ, ಮುಖಂಡ ಸಂತೋಷ್ ನೋಟದವರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಇತರರಿದ್ದರು.

- - -

-14ಎಚ್‍ಆರ್‍ಆರ್01.ಜೆಪಿಜಿ:

ಹರಿಹರ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯಿಂದ ಶಕ್ತಿ ಯೋಜನೆ ಸಂಭ್ರಮಾಚರಣೆ ನಡೆಯಿತು.

PREV

Latest Stories

ಡಿಕೆಶಿ ಪರ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಸೇವೆ
ಬೆಂಗಳೂರು-ತುಮಕೂರುಪ್ರಯಾಣ, ಜನ ಹೈರಾಣ
ಸ್ಮಾರ್ಟ್‌ ಮೀಟರ್‌ ವಿವಾದ: ಸಚಿವಜಾರ್ಜ್ ವಿರುದ್ಧ ಬಿಜೆಪಿ ದೂರು