ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ವತಿಯಿಂದ ಬಿಜಾಪುರದ ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕಿನ ವತಿಯಿಂದ ಸ್ಥಾಪಿಸಿರುವ ವಚನ ಸಾಹಿತ್ಯ ಸಂವರ್ಧಕ ಡಾ.ಫ.ಗು.ಹಳಕಟ್ಟಿ ಅವರ ಜೀವನ ಹಾಗೂ ಸಾಧನೆ ಕುರಿತ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜಪ್ರಭುತ್ವದ ಕಾಲದಲ್ಲಿ ಅಸಮಾನತೆಯಿಂದ ಜನ ಬಳಲಿದ್ದರು.
ವೇದ, ಆಗಮ, ಉಪನಿಷತ್ತುಗಳು ಸಂಸ್ಕ್ರತ ಭಾಷೆಯಲ್ಲಿದ್ದು ಜನಸಾಮಾನ್ಯರಿಗೆ ಅರ್ಥವಾಗುತ್ತಿರಲಿಲ್ಲ.ಅಂತಹ ಕಾಲದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಸರಳ ಭಾಷೆಯ ವಚನಗಳ ಮೂಲಕ ಬಹುದೊಡ್ಡ ಕ್ರಾಂತಿಯನ್ನು ಮಾಡಿದ ಬಸವಾದಿ ಶರಣರು ಸಮಾಜದಲ್ಲಿ ಸಮಾನತೆ ಹಾಗೂ ಮಹಿಳಾ ಸ್ವಾತಂತ್ರ್ಯವನ್ನು ತಂದುಕೊಟ್ಟರು.
ಹೀಗೆ ಶರಣರು ಕಲ್ಯಾಣದಲ್ಲಿ ಮಾಡಿದ ಕ್ರಾಂತಿಯ ಬೀಜಗಳು ವಚನಗಳ ಕಟ್ಟುಗಳಲ್ಲಿದ್ದವು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ ಮಾತನಾಡಿ, ಇಂದಿನ ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನಗಳು ಬೆಳೆದಷ್ಟು ವೇಗವಾಗಿ ನಾವು ಓಡುತ್ತಿದ್ದೇವೆ. ಆದರೆ ಶಾಂತಿ, ಸಮಾಧಾನ, ನೆಮ್ಮದಿಯನ್ನು ಹುಡುಕುತ್ತಿದ್ದೇವೆ.
ಆದ್ದರಿಂದ ವಿಜ್ಞಾನ - ತಂತ್ರಜ್ಞಾನ ಹಾಗೂ ಸಾಮಾಜಿಕ ಮೌಲ್ಯಗಳ ಗಣಿಯಾಗಿರುವ ವಚನ ಸಾಹಿತ್ಯವನ್ನು ಇಂದಿನ ಯುವ ಜನಾಂಗ ಅರಿಯುವ ಅಗತ್ಯವಿದೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ಸಂದೇಶ ನೀಡಿದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಅವರು, ವಚನ ಸಾಹಿತ್ಯದ ಸಂವರ್ಧನೆಯಲ್ಲಿ ಡಾ.ಫಕೀರಪ್ಪ ಗುರಪ್ಪಾ ಹಳಕಟ್ಟಿ ಅವರು ಶ್ರಮಿಸಿದ ದುರ್ಗಮ ಸನ್ನಿವೇಶಗಳನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಅರ್ಥೈಸಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧಿಕಾರಿ ಕೆ.ಪಿ.ಪರಮೇಶ್,
ಪೊನ್ನಂಪೇಟೆ ಮಹಾವಿದ್ಯಾಲಯದ ಆಡಳಿತಾಧಿಕಾರಿ ಎಸ್.ಸಿ.ಹೇಮಂತಕುಮಾರ್, ಪ್ರಾಧ್ಯಾಪಕರಾದ ಡಾ.ಜಡೇಗೌಡ, ಡಾ.ಸುಮನಾ, ಡಾರಮ್ಯಾ, ಡಾ.ಮೋಹನಕುಮಾರ್, ಡಾ.ಮಂಜುಳ, ಡಾ.ರನೀಷಾ, ಡಾ.ನಾಣಯ್ಯ ಇದ್ದರು.
ಪ್ರಾಧ್ಯಾಪಕ ಡಾ.ಬಿ.ಎನ್.ಸತೀಶ್ ಸ್ವಾಗತಿಸಿದರು. ನೇತ್ರಾವತಿ ನಿರೂಪಿಸಿದರು. ಡಾ.ಕೆ.ಎ.ಈಶ್ವರ ವಂದಿಸಿದರು.