ಉಪ ಪಂಗಡ ಬದಿಗೊತ್ತಿ ಕುರುಬ ಎಂದೇ ನಮೂದಿಸಬೇಕು: ಎ.ಎನ್‌. ಮಹೇಶ್‌

KannadaprabhaNewsNetwork |  
Published : Sep 15, 2025, 01:00 AM IST
ಚಿಕ್ಕಮಗಳೂರಿನ  ಕನಕ ಸಮುದಾಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಎ.ವಿ. ಗಾಯತ್ರಿ ಶಾಂತೇಗೌಡ ಅವರು ಉದ್ಘಾಟಿಸಿದರು. ಎ.ಎನ್‌. ಮಹೇಶ್‌, ಪುಟ್ಟೇಗೌಡ, ಕೆ.ಎಂ. ಮಂಜುನಾಥ್‌, ವಿನಯ್‌ಕುಮಾರ್‌ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರುಸದ್ಯದಲ್ಲೇ ನಡೆಯಲಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಕುರುಬ ಸಮುದಾಯದವರು ತಮ್ಮ ಉಪ ಪಂಗಡಗಳನ್ನು ಬದಿಗೊತ್ತಿ ಕುರುಬ ಎಂದೇ ನಮೂದಿಸಬೇಕು ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಮನವಿ ಮಾಡಿದರು.

- ಕನಕ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸದ್ಯದಲ್ಲೇ ನಡೆಯಲಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಕುರುಬ ಸಮುದಾಯದವರು ತಮ್ಮ ಉಪ ಪಂಗಡಗಳನ್ನು ಬದಿಗೊತ್ತಿ ಕುರುಬ ಎಂದೇ ನಮೂದಿಸಬೇಕು ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಮನವಿ ಮಾಡಿದರು.ಜಿಲ್ಲಾ ಕುರುಬರ ಸಂಘ, ಜಿಲ್ಲಾ ಕನಕ ನೌಕರರ ಸಂಘ ಮತ್ತು ಕನಕಶ್ರೀ ಮಹಿಳಾ ಸಂಘ ನಗರದ ಕನಕ ಸಮುದಾಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದಲ್ಲಿ ಅವರು ಮಾತನಾಡಿದರು. ಮುಂಬರುವ ಜಾತಿ ಗಣತಿ ಸಮೀಕ್ಷೆ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ದಿಕ್ಸೂಚಿಯಾಗಲಿದೆ. ಜಾತಿಗಣತಿಯಲ್ಲಿ ಕುರುಬ ಸಮಾಜದವರೆಲ್ಲರೂ ಕುರುಬ ಎಂದೇ ನಮೂದಿಸಿದಲ್ಲಿ ರಾಜ್ಯದಲ್ಲಿ ಕುರುಬ ಸಮುದಾಯ ಅತಿ ಹೆಚ್ಚಿನ ಸಂಖ್ಯೆ ಯಲ್ಲಿರುವುದು ಸರ್ಕಾರಕ್ಕೆ ಮನವರಿಕೆಯಾಗುತ್ತದೆ. ಅದು ಸಮಾಜದ ಅಭಿವೃದ್ಧಿಗೆ ಸಹಕಾರಿ ಎಂದು ಕಿವಿ ಮಾತು ಹೇಳಿದರು.ಕುರುಬ ಸಮುದಾಯ ಅಭಿವೃದ್ಧಿಯಾಗಬೇಕಾದರೆ ಸಮಾಜದ ಮಕ್ಕಳು ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯಬೇಕು. ಉನ್ನತ ಅಧಿಕಾರಿಗಳಾಗಿ ಹೊರ ಹೊಮ್ಮಬೇಕು, ಕುರುಬ ಸಮುದಾಯ ರಾಜಕೀಯವಾಗಿ ಬೆಳೆಯಬೇಕು ಎಂದರು.

ಕುರುಬ ಸಮುದಾಯ ದೇಶದಲ್ಲಿ ಶೇ. 10 ರಷ್ಟಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಅದು ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಸಮುದಾಯದ ಮಕ್ಕಳು ವಿದ್ಯಾವಂತರಾಗಬೇಕು. ಆ ನಿಟ್ಟಿನಲ್ಲಿ ಆತ್ಮವಿಶ್ವಾಸ, ಛಲ ಬೆಳೆಸಿಕೊಳ್ಳಬೇಕು, ಹೆತ್ತವರು ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಬೇಕು ಎಂದು ಸಲಹೆ ಮಾಡಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಸಮುದಾ ಯದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ 2 ಕೋಟಿ ಅನುದಾನ ನೀಡಿದ್ದರಿಂದ ನಗರದಲ್ಲಿ ಕುರುಬ ಸಮುದಾಯಕ್ಕೆ ಕಾರ್ಯಕ್ರಮ ನಡೆಸಲು ತನ್ನದೇಯಾದ ಕನಕ ಸಮುದಾಯ ಭವನ ನಿರ್ಮಿಸಿಕೊಳ್ಳಲು ಸಾಧ್ಯವಾಯಿತು ಎಂದರು.ಕುರುಬ ಸಮಾಜಕ್ಕೆ ಹಿಂದೆ ಶಿಕ್ಷಣ ಮರೀಚಿಕೆಯಾಗಿತ್ತು, ವಿದ್ಯಾರ್ಜನೆಗೆ ಯಾವುದೇ ಸೌಲಭ್ಯ, ಸವಲತ್ತು ಇರಲಿಲ್ಲ. ಆದರೆ, ಇಂದು ಸರ್ಕಾರಗಳು ಹಾಸ್ಟೆಲ್ ಸೇರಿದಂತೆ ಎಲ್ಲ ರೀತಿಯ ಸೌಲಭ್ಯ, ಸವಲತ್ತು ಒದಗಿಸಿವೆ ಎಂದ ಅವರು, ಕುರುಬ ಸಮುದಾಯದ ಮಕ್ಕಳು ಇದನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾವಂತರಾಗಿ ಹೊರಹೊಮ್ಮಬೇಕು. ಹೆತ್ತವರನ್ನು ವೃದ್ಧಾಶ್ರಮಗಳಿಗೆ ಅಟ್ಟದೆ ಸಾಕಿ ಸಲಹಿ. ಸಮುದಾಯದ ಹೆತ್ತವರು ತಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿ, ಗುರು ಹಿರಿಯರಿಗೆ ಗೌರವ ನೀಡುವುದನ್ನು ಕಲಿಸಬೇಕು ಎಂದು ಕಿವಿ ಮಾತು ಹೇಳಿದರು.ವಿಶೇಷ ಉಪನ್ಯಾಸ ನೀಡಿದ ಇನ್ ವಿಜಿಬಲ್ ಅಕಾಡೆಮಿ ಸಂಸ್ಥಾಪಕ ವಿನಯ್‌ಕುಮಾರ್‌, ಉನ್ನತ ಶಿಕ್ಷಣದಲ್ಲಿರುವ ವಿವಿಧ ಕೋರ್ಸ್‌ಗಳು ಹಾಗೂ ಅವುಗಳನ್ನು ಪಡೆಯಲು ಇರುವ ಮಾರ್ಗಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.ಕನಕ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಎಚ್.ಪ್ರಹ್ಲಾದ್‌ ಯಾವುದೇ ಸಮುದಾಯ ಅಭಿವೃದ್ಧಿಯಾಗಬೇಕಾದರೆ ಆ ಸಮಾಜದ ಮಕ್ಕಳು ವಿದ್ಯಾವಂತರಾಗಬೇಕು. ಹಾಗಾಗಿ ಸಮುದಾಯದ ಮಕ್ಕಳನ್ನು ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಉದ್ದೇಶ ದಿಂದ ಪ್ರತಿ ವರ್ಷ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.ಈವರೆಗೆ ಕನಕ ನೌಕರರ ಸಂಘದಿಂದ ಮಾತ್ರ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಈ ವರ್ಷ ಜಿಲ್ಲಾ ಕುರುಬರ ಸಂಘ, ಜಿಲ್ಲಾ ಕನಕ ನೌಕರರ ಸಂಘ ಮತ್ತು ಕನಕಶ್ರೀ ಮಹಿಳಾ ಸಂಘಗಳು ಒಗ್ಗೂಡಿ ಪ್ರತಿಭಾ ಪುರಸ್ಕರಿಸುತ್ತದೆ ಎಂದು ಹೇಳಿದರು.ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಎಸ್. ಶಾಂತೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 55 ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ 45 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಮುದಾಯದ ನಿವೃತ್ತ ನೌಕರರು, ಸಾಧಕರು ಸಮಾಜ ಸೇವಕರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ಎಂ.ಮಂಜುನಾಥ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಡಿ.ಎಸ್. ಚಂದ್ರೇಗೌಡ, ಕನಕಶ್ರೀ ಮಹಿಳಾ ಸಂಘದ ಅಧ್ಯಕ್ಷೆ ಶಾರದಮ್ಮ ಮಾಸ್ತೇಗೌಡ, ಸಮಾಜ ಸೇವಕ ಟಿ.ಜಿ. ಮಂಜುನಾಥ್, ರಾಜ್ಯ ಸಹ ಕಾರ್ಯದರ್ಶಿ ಪುಟ್ಟೇಗೌಡ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎನ್. ಪುಟ್ಟೇಗೌಡ, ಮಂಜುನಾಥ್, ಪುಷ್ಪರಾಜ್, ಪ್ರಸನ್ನ, ರೇವಣ್ಣ, ಮೋಹನ್, ಬಿ.ಎಸ್.ಸಿದ್ದೇಗೌಡ ಉಪಸ್ಥಿತರಿದ್ದರು. 14 ಕೆಸಿಕೆಎಂ 1ಚಿಕ್ಕಮಗಳೂರಿನ ಕನಕ ಸಮುದಾಯ ಭವನದಲ್ಲಿ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಎ.ವಿ. ಗಾಯತ್ರಿ ಶಾಂತೇಗೌಡ ಉದ್ಘಾಟಿಸಿದರು. ಎ.ಎನ್‌. ಮಹೇಶ್‌, ಪುಟ್ಟೇಗೌಡ, ಕೆ.ಎಂ. ಮಂಜುನಾಥ್‌, ವಿನಯ್‌ಕುಮಾರ್‌ ಇದ್ದರು.

PREV

Recommended Stories

ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ