-ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಬಿ. ಜಿ. ಗೋವಿಂದಪ್ಪ ಅಭಿಮತ
ಕನ್ನಡಪ್ರಭ ವಾರ್ತೆ ಹೊಸದುರ್ಗ
ಪಂಚ ಗ್ಯಾರಂಟಿ ಯೋಜನೆ ಪ್ರಯೋಜನೆ ಎಲ್ಲ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು. ಯಾರು ಕೂಡ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಿದೆ ಎಂದು ಶಾಸಕ ಬಿ. ಜಿ. ಗೋವಿಂದಪ್ಪ ಹೇಳಿದರು.ತಾಪಂ ಆವರಣದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೂತನ ಕಚೇರಿ ಉದ್ಘಾಟಿಸಿ, ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದರು. ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 56220, ಗೃಹ ಜ್ಯೋತಿ ಸಂಪರ್ಕ 61388, ಅನ್ನ ಭಾಗ್ಯ 54949, ಯುವನಿಧಿಯಡಿ 1917 ಫಲಾನುಭವಿಗಳು ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಪ್ರತಿ ತಿಂಗಳು 12000 ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ತಿಂಗಳು 21.59 ಕೋಟಿ ರು. ಹಾಗೂ ವರ್ಷಕ್ಕೆ 259.08 ಕೋಟಿ ರು. ಹಣ ತಾಲೂಕಿಗೆ ಬರುತ್ತಿದೆ ಎಂದರು.
----
17ಎಚ್. ಎಸ್. ಡಿ 2: