- 213ನೇ ಶಾಖೆ ಉದ್ಘಾಟಿಸಿ ಮಾಜಿ ಸಂಸದ ಸಿದ್ದೇಶ್ವರ್ ಅಭಿಮತ । ಶಾಸಕ ಯತ್ನಾಳ್ ಭಾಗಿ
ಕನ್ನಡಪ್ರಭ ವಾರ್ತೆ ಚನ್ನಗಿರಿ
ಸಿದ್ಧಸಿರಿ ಮಲ್ಟಿ-ಸ್ಟೇಟ್ ಮಲ್ಟಿ -ಪರ್ಪಸ್ ಕೋ ಅಪರೇಟಿವ್ ಸೊಸೈಟಿ ಲಿಮಿಟೆಡ್‌ನ 213ನೇ ಶಾಖೆಯು ಚನ್ನಗಿರಿ ಪಟ್ಟಣದಲ್ಲಿ ಆರಂಭ ಆಗಿರುವುದು ಈ ಭಾಗದ ಜನರಿಗೆ ವರದಾನವಾಗಿದೆ ಎಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.ಪಟ್ಟಣದ ಜಿ.ಎಂ.ಎಸ್. ಕಾಂಪ್ಲೆಕ್ಸ್‌ನಲ್ಲಿ 213ನೇ ಶಾಖೆ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಈ ಸಂಸ್ಥೆ ಅಧ್ಯಕ್ಷರಾಗಿರುವ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ದೂರದೃಷ್ಠಿ ಇಟ್ಟುಕೊಂಡು ಪ್ರಾರಂಭಿಸಿರುವ ಸಂಸ್ಥೆಯಾಗಿದೆ. ಸಂಸ್ಥೆ ಪ್ರಾರಂಭಗೊಂಡು 20 ವರ್ಷ ಕಳೆದಿದ್ದು ಈ ಅವಧಿಯಲ್ಲಿ 83843 ಜನ ಸದಸ್ಯರನ್ನು ಹೊಂದಿ ₹79.75 ಕೋಟಿ ಷೇರು ಬಂಡವಾಳ ಹೊಂದಿರುವುದು ಈ ಸೊಸೈಟಿ ಪ್ರಗತಿಗೆ ಹಿಡಿದ ಕೈಗನ್ನಡಿ. ಈ ಸಂಸ್ಥೆ ವತಿಯಿಂದ 5 ಸಾವಿರ ಕುಟುಂಬಗಳಿಗೆ ಉದ್ಯೋಗ ನೀಡಿರುವುದು ಶ್ಲಾಘನೀಯ ಎಂದರು.
ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು, ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು.
- - -
ಚನ್ನಗಿರಿ ಪಟ್ಟಣದ ಜಿ.ಎಂ.ಎಸ್. ಕಾಂಪ್ಲೆಕ್ಸ್‌ನಲ್ಲಿ 213ನೇ ಶಾಖೆ ಉದ್ಘಾಟನೆಯನ್ನು ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ನೆರವೇರಿಸಿದರು. ಸೊಸೈಟಿ ಸಂಸ್ಥಾಪಕ ಅಧ್ಯಕ್ಷ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇತರರು ಇದ್ದರು.