ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ

KannadaprabhaNewsNetwork |  
Published : Oct 11, 2026, 04:00 AM IST
ವಿಜಯಂಧ್ರ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.ಸಿಂದಗಿ ನಗರದ ಮಾಂಗಲ್ಯ ಭವನದಲ್ಲಿ ಹಮ್ಮಿಕೊಂಡ ಸೇವಾ ಸಂಕಲ್ಪ ಹಾಗೂ ಬೂತ್ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೆ ಯುವಕರ ಭವಿಷ್ಯದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಇದರಿಂದ ಯುವಕರಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಹಿತ ಕಾಪಾಡುವಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ರೈತರ ಸಂಕಷ್ಟ ನಿವಾರಿಸುವ ನಿಟ್ಟಿನಲ್ಲಿ ₹ ೫ ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ಕೃಷಿ ಚಟುವಟಿಕೆಗಳಿಗೆ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.ಮೋದಿ ಅವರ ೨೫ವರ್ಷಗಳ ಸಾರ್ವಜನಿಕ ಜೀವನದ ಸಂಭ್ರಮಾಚರಣೆ ಸೆ.೧೭ ರಿಂದ ಅ.೧೭ರವರೆಗೆ ದೇಶಾದ್ಯಂತ ಹಾಗೂ ಕರ್ನಾಟಕದಲ್ಲಿ ಸೇವಾ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನರೇಂದ್ರ ಮೋದಿ ಅವರು ೨೦೦೧ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಸಾರ್ವಜನಿಕ ಜೀವನ ಆರಂಭಿಸಿ, ೨೦೧೪ರಲ್ಲಿ ದೇಶದ ಪ್ರಧಾನ ಮಂತ್ರಿಯಾದರು. ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಅವರ ೨೫ ವರ್ಷಗಳ ಸಾರ್ವಜನಿಕ ಜೀವನವನ್ನು ಸೇವಾ ಸಂಕಲ್ಪದೊಂದಿಗೆ ಆಚರಿಸಲಾಗುತ್ತಿದೆ ಎಂದರು.ಈ ವೇಳೆ ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ರಾಜ್ಯ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ. ರೈತ ಪರವಾಗಿರುವ ಯೋಜನೆಗಳು ಮತ್ತು ರೈತರ ಬದುಕಿನೊಂದಿಗೆ ರಾಜ್ಯ ಸರ್ಕಾರ ನಿತ್ಯ ಚೆಲ್ಲಾಟವಾಡುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.ಆಲಮೇಲ ತಾಲೂಕು ರಚನೆಯಾಗಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಪ್ರತ್ಯೇಕ ಬಿಜೆಪಿ ಮಂಡಲ ರಚನೆ ಮಾಡುವಂತೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸ್ಥಳೀಯ ಮುಖಂಡರು ಮನವಿ ಮಾಡಿದರು.ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ತೃಪ್ತಿಕರವಾಗಿಲ್ಲ. ಮುಂಬರುವ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಿಗೆ ಕಾರ್ಯಕರ್ತರು ಸಜ್ಜಾಗಬೇಕು. ಪಕ್ಷದ ಕಾರ್ಯಕರ್ತರೊಂದಿಗೆ ನಾವು ಸದಾ ಇರುತ್ತೇವೆ. ರಾಜ್ಯದಲ್ಲಿ ಮುಂದಿನ ೨೦೨೮ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಶಯವನ್ನೂ ವ್ಯಕ್ತಪಡಿಸಿದರು.ಈ ವೇಳೆ ಸಂತೋಷ ಪಾಟೀಲ ಡಂಬಳ ಪ್ರಾಸ್ತಾವಿಕ ಮಾತನಾಡಿದರು. ಗುರು ತಳವಾರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಅರುಣ ಶಹಾಪುರ, ಸೋಮನಗೌಡ ಪಾಟೀಲ ಸಾಸನೂರ, ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ವಿಜುಗೌಡ ಪಾಟೀಲ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಬಸವರಾಜ ಯಂಕಂಚಿ, ಉಮೇಶ ಕಾರಜೋಳ, ಪೀರೂ ಕೆರೂರ, ಚಂದ್ರಶೇಖರ ಕವಟಗಿ, ಸುರೇಶ ಬಿರಾದಾರ, ಈರಣ್ಣ ರಾವೂರ, ಶಂಭುಲಿಂಗ ಕಕ್ಕಳಮೇಲಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿನ ಬೆಲೆಗಾಗಿ ಕರ್ನಾಟಕ–ಮಹಾರಾಷ್ಟ್ರ ರೈತರ ಒಗ್ಗಟ್ಟು!
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ ಅರಿಯಿರಿ