ಹಳ್ಳಿಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳ ರೂಪಿಸಿದೆ-ಶಾಸಕ ಬಣಕಾರ

KannadaprabhaNewsNetwork |  
Published : Sep 29, 2025, 03:02 AM IST
27ಎಚ್‌ಕೆಆರ್1ಹಿರೇಕೆರೂರ: ನೂಲಗೇರಿ ಗ್ರಾಮದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಯೋಜನೆಯಡಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಯು.ಬಿ.ಬಣಕಾರ ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಹಿರೇಕೆರೂರ:ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.ತಾಲೂಕಿನ ನೂಲಗೇರಿ ಗ್ರಾಮದಲ್ಲಿ 2024-25ನೇ ಸಾಲಿನ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ಯೋಜನೆಯಡಿ ₹ 10 ಲಕ್ಷ ವೆಚ್ಚದಲ್ಲಿ ಕಳಗೊಂಡ ರಸ್ತೆಯಿಂದ ಮಲ್ಲಮ್ಮ ಚಲವಾದಿ ಮನೆವರೆಗೆ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹತ್ತಾರು ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸು ಮೂಲಕ ಗ್ರಾಮೀಣ ಪ್ರದೇಶದ ಜನತೆಗೆ ಅನುಕೂಲ ಕಲ್ಪಿಸುತ್ತಿದೆ. ಗ್ರಾಮದಲ್ಲಿ ₹ 10 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಮೇಲುಸ್ತುವಾರಿ ನಡೆಸಿ ನಿಗದಿತ ಕಾಲ ಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ಗ್ರಾಪಂ ಉಪಾಧ್ಯಕ್ಷೆ ರೂಪಾ ನಿಂಬೆಗೊಂದಿ, ಸದಸ್ಯರಾದ ವಿನಯ ದಳವಾಯಿ, ಮನೋಹರ ಕಮ್ಮಾರ, ಉಮಾ ಚಕ್ರಸಾಲಿ, ತಾಪಂ ಮಾಜಿ ಸದಸ್ಯ ಮಲ್ಲಪ್ಪ ಚಲವಾದಿ, ವಿ.ಎಸ್. ಪುರದ, ರಾಜಶೇಖರ ಕೋರಿ, ಬಸವರಾಜ ಚಲವಾದಿ, ಉಜ್ಜಪ್ಪ ನಿಂಗಾಪುರ, ವಿರೂಪಾಕ್ಷಯ್ಯ ಮಠದ, ಸೋಮು ಪುರದ, ಈರನಗೌಡ ದಳವಾಯಿ, ಸಿದ್ಧಲಿಂಗಯ್ಯ ಹಿರೇಮಠ, ಗಣೇಶ ಚಲವಾದಿ, ಈರಪ್ಪ ಚಿಕ್ಕೇರಿ, ವೀರೇಶ ಕೋರಿ, ಬಿ.ಸಿ.ಚಿಕ್ಕೇರಿ, ಕರಬಸಪ್ಪ ಕೋರಿ, ರಮೇಶ ಹಿಂದಿನಮನಿ, ಮಾಲತೇಶ ಕಮ್ಮಾರ, ರಾಜಪ್ಪ ಬಂಗೇರ, ರಾಜು ಅರಳಿಕಟ್ಟಿ, ಸೋಮಯ್ಯ ಮಠದ ಸೇರಿದಂತೆ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ