ಆತ್ಮಹತ್ಯೆ ಭಾಗ್ಯ ಕರುಣಿಸಿದ ರಾಜ್ಯ ಸರ್ಕಾರ

KannadaprabhaNewsNetwork |  
Published : Jan 01, 2025, 12:00 AM IST
(ಪೊಟೋ 31ಬಿಕೆಟಿ9, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು) | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರು, ಅವರ ಆಪ್ತರಿಂದ ನೊಂದು ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದಂತೆ ಭಾವನೆ ಮೂಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರು, ಅವರ ಆಪ್ತರಿಂದ ನೊಂದು ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದಂತೆ ಭಾವನೆ ಮೂಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್ ತಾಲೂಕಿನ ಬಾಲ್ಕಿ ತಾಲೂಕಿನ ಗುತ್ತಿಗೆದಾರ ಸಚಿನ್ ಪಾಂಚಾಳ ಅವರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 7 ಪುಟದ ಮೃತ್ಯುಪತ್ರದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರ ಆಪ್ತನ ಹೆಸರನ್ನು ಉಲ್ಲೇಖಿಸಿದ್ದು, ಸಚಿನ್ ಸಹೋದರಿಯರು ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದಾಗ ಪೊಲೀಸರು ವಿನಾಕಾರಣ ಅಲೆದಾಡುವಂತೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಚಿವ ಪ್ರಭಾವ ಬಳಕೆಯಾಗಿರುವುದು ಸ್ಪಷ್ಟವಾಗಿದೆ. ಕೂಡಲೇ ಅವರ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.ಸಿದ್ದರಾಮಯ್ಯ ಅವರ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದ್ದು, ಭ್ರಷ್ಟಾಚಾರ ಬಯಲಾಗಿರುವುದರಿಂದ ವಾಲ್ಮೀಕಿ ನಿಗಮದ ಅಕೌಂಟೆಂಟ್ ಚಂದ್ರಶೇಕರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಜೆಪಿ ಹೋರಾಟಕ್ಕೆ ಮಣಿದು ಅಂದು ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕಾಯಿತು. ಬಳಿಕ ಲಕ್ಷ್ಮೀ ಹೆಬ್ಬಾಳ್ಕರ ಅವರ ಆಪ್ತಸಹಾಯಕನ ಹೆಸರು ಬರೆದಿಟ್ಟು ರುದ್ರಣ್ಣ ಯಡವಣ್ಣವರ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು. ದಾವಣಗೆರೆಯಲ್ಲಿ ಗುತ್ತಿಗೆದಾರರೊಬ್ಬರು ಬಾಕಿ ಹಣ ಬಾರದಕ್ಕೆ ಜೀವಬಿಟ್ಟಿದ್ದರೆ, ಮಾಗಡಿಯಲ್ಲಿ ಕ್ರಷರ್ ಮಾಲೀಕರೊಬ್ಬರು ಲಂಚ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇಷ್ಟೇ ಅಲ್ಲದೇ ಯಾದಗಿರಿಯಲ್ಲಿ ಸ್ಥಳೀಯ ಶಾಸಕನ ಪುತ್ರನ ಒತ್ತಡ ತಾಳದೆ ಪಿಎಸೈ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರ ಎತ್ತಿ ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.ಇದಲ್ಲದೇ ಮಹಾರಾಷ್ಟ್ರ ಸುಪಾರಿ ಕಿಲ್ಲರ್‌ಗಳನ್ನು ಬಳಸಿ ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಬಿಜೆಪಿ ಮುಖಂಡ ಚಂದು ಪಾಟೀಲ, ಮಣಿಕಂಠ ರಾಠೋಡ ಅವರ ಕೊಲೆಗೂ ಸಂಚು ರೂಪಿಸಲಾಗಿತ್ತು ಎಂದು ಸಚಿನ್ ಡೆತ್‌ನೋಟ್‌ನಲ್ಲಿ ಉಲ್ಲೇಖವಿದೆ. ಮಹಾರಾಷ್ಟ್ರದ ಸುಪಾರಿ ಕಿಲ್ಲರ್‌ಗಳನ್ನು ಬಳಸಿ ಸಿದ್ದಲಿಂಗ ಶ್ರೀಗಳ ಧ್ವನಿ ಅಡಗಿಸುವ ಗಂಭೀರ ವಿಚಾರ ಡೆತ್‌ನೋಟ್‌ನಲ್ಲಿ ಇರುವುದರಿಂದ ಸಿಬಿಐ ತನಿಖೆ ನಡೆಸಬೇಕು ಎಂದು ತಿಳಿಸಿದರು.

ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ಮಾಧ್ಯಮ ಸಂಚಾಲಕ ಶಿವಾನಂದ ಸುರಪುರ, ಕಾರ್ಯದರ್ಶಿ ಮುತ್ತು ಉಳ್ಳಾಗಡ್ಡಿ ಇತರರು ಇದ್ದರು.ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈಶ್ವರಪ್ಪನವರ ವಿರುದ್ಧ ಅಪವಾದ ಬಂದಾಗ ಅವರು ತಕ್ಷಣ ರಾಜೀನಾಮೆ ನೀಡಿದ್ದರು. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್‌ ಅವರು ರಾಜೀನಾಮೆ ನೀಡಿದ್ದರು. ಸಚಿನ್ ಪ್ರಕರಣದಲ್ಲಿ ಸತ್ಯ ಹೊರಬರಬೇಕಿದ್ದರೆ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡಬೇಕು. ಪೊಲೀಸ್ ಇಲಾಖೆ ಅವರ ಕೈಯಲ್ಲಿ ಇರುವುದರಿಂದ ನ್ಯಾಯ ಸಿಗುವ ಭರವಸೆ ನಮಗೆ ಇಲ್ಲ.

-ಶಾಂತಗೌಡ ಪಾಟೀಲ,

ಬಿಜೆಪಿ ಜಿಲ್ಲಾಧ್ಯಕ್ಷರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ