ಕನ್ನಡಪ್ರಭ ವಾರ್ತೆ ಇಂಡಿ
ಸೋಮವಾರ ತಾಲೂಕಿನ ಇಂಗಳಗಿ ಗ್ರಾಮದ ಅಲ್ಲಮಪ್ರಭು ಹಾಗೂ ಹನುಮ ಜಯಂತಿ ಮತ್ತು ಗೈಬೂಸಾಬ್ ಜಾತ್ರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು. ಧರ್ಮದಲ್ಲಿ ರಾಜಕೀಯ ಇರಬಾರದು, ಆದರೆ ರಾಜಕಾರಣದಲ್ಲಿ ಧರ್ಮವಿರಬೇಕು. ಅದನ್ನು ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.
ಇಂಗಳಗಿ ಗ್ರಾಮಸ್ಥರು ಸಾಮೂಹಿಕ ವಿವಾಹದ ಜೊತೆಗೆ ಜಾತಿ, ಮತ, ಪಂಥ ಎನ್ನದೆ ಹಿಂದು-ಮುಸ್ಲಿಂ ಎರಡು ದೇವತೆಗಳ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಿರುವುದು ಸಂತಸ ತಂದಿದೆ. ನೂತನ ದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳು ಧರ್ಮದ ಹಾದಿಯಲ್ಲಿ ಸಂಸಾರ ನಡೆಸಿಕೊಂಡು ಹೋಗಬೇಕು. ಸಂಸಾರದಲ್ಲಿ ಬಿರುಕು ಮೂಡದಂತೆ ಜೀವನ ನಡೆಸಬೇಕೆಂದು ಕಿವಿಮಾತು ಹೇಳಿದರು.ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿ, ಸಾಮೂಹಿಕ ವಿವಾಹಗಳಲ್ಲಿ ಮದುವೆಯಾಗುವವರು ಭಾಗ್ಯಶಾಲಿಗಳು. ಒಂದೊಂದೇ ವಿವಾಹ ಮಾಡಿಕೊಂಡರೆ ಇಷ್ಟು ಜನಸಂಖ್ಯೆ ಸೇರಲು ಸಾಧ್ಯವಿಲ್ಲ. ಅಲ್ಲದೆ ಹತ್ತಾರು ಸ್ವಾಮೀಜಿಗಳ ಸಮ್ಮುಖದಲ್ಲಿ ಆಶೀರ್ವಾದ ಪಡೆದು ವಿವಾಹವಾದರೆ ಆ ದಾಂಪತ್ಯ ಜೀವನ ಉತ್ತಮವಾಗಿರಲಿದೆ. ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು ಧರ್ಮಕ್ಕೊಬ್ಬ, ದೇಶಕೊಬ್ಬ ನಮ್ಮನ್ನು ನೋಡಿಕೊಳ್ಳಲು ಒಬ್ಬ, ಸಾರ್ವಜನಿಕರ ಸೇವೆ ಮಾಡಲು ಒಬ್ಬ ಹೀಗೆ ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಿ ಎಂದು ಹರಸಿದರು.
ಪಿಕೆಪಿಎಸ್ ಅಧ್ಯಕ್ಷ ಪ್ರಭು ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಳಸಾರದ ಅಭಿನವ ಪುಂಡಲಿಂಗ ಮಾಹಾರಾಜರು, ಇಂಡಿ ಓಂಕಾರಶ್ರಮದ ಡಾ.ಸ್ವರೂಪಾನಂದ ಶ್ರೀಗಳು, ಖೇಡಗಿ ವಿರಕ್ತ ಮಠದ ಡಾ.ಶಿವ ಬಸವರಾಜೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು.
ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿಗಳು ಧರ್ಮಕ್ಕೊಬ್ಬ, ದೇಶಕೊಬ್ಬ ನಮ್ಮನ್ನು ನೋಡಿಕೊಳ್ಳಲು ಒಬ್ಬ, ಸಾರ್ವಜನಿಕರ ಸೇವೆ ಮಾಡಲು ಒಬ್ಬ ಹೀಗೆ ಕನಿಷ್ಠ ನಾಲ್ಕು ಮಕ್ಕಳಿಗೆ ಜನ್ಮ ನೀಡಿ. ಸ್ವಾಮೀಜಿಗಳ ಸಮ್ಮುಖದಲ್ಲಿ ಆಶೀರ್ವಾದ ಪಡೆದು ವಿವಾಹವಾದರೆ ಆ ದಾಂಪತ್ಯ ಜೀವನ ಉತ್ತಮವಾಗಿರಲಿದೆ.