ಶಿಕ್ಷಣ ಕ್ಷೇತ್ರದಲ್ಲೂ ರಾಜ್ಯಸರ್ಕಾರ ಬಡವರ ಪರವಾಗಿದೆ: ರುದ್ರಪ್ಪ ಕಡ್ಲೇರ್

KannadaprabhaNewsNetwork |  
Published : Nov 16, 2025, 02:15 AM IST
ಫೋಟೊ:೧೪ಕೆಪಿಸೊರಬ-೦೩ : ಸೊರಬ ಪಟ್ಟಣದ ಪುರಸಭಾ ವ್ಯಾಪ್ತಿಯ ಪಿಎಂಶ್ರೀ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಪೋಷಕರು ಮತ್ತು ಶಿಕ್ಷಕರ ಮಹಾಸಭೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಉದ್ಘಾಟಿಸಿದರು. | Kannada Prabha

ಸಾರಾಂಶ

ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡುವ ದೃಷ್ಠಿಯಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಶಿಕ್ಷಣ ಕ್ಷೇತ್ರದಲ್ಲಿಯೂ ಸಹ ಸರ್ಕಾರ ಬಡವರ ಪರವಾಗಿದೆ ಎಂಬುದು ಸಾಬೀತಾಗಿದೆ ಎಂದು ತಾಲೂಕು ಶಿಕ್ಷಣ ಸುಧಾರಣಾ ಸಮಿತಿಯ ಅಧ್ಯಕ್ಷ ರುದ್ರಪ್ಪ ಕಡ್ಲೇರ್ ಹೇಳಿದರು.

ಕನ್ನಡಪ್ರಭ ವಾರ್ತೆ ಸೊರಬ

ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡುವ ದೃಷ್ಠಿಯಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಶಿಕ್ಷಣ ಕ್ಷೇತ್ರದಲ್ಲಿಯೂ ಸಹ ಸರ್ಕಾರ ಬಡವರ ಪರವಾಗಿದೆ ಎಂಬುದು ಸಾಬೀತಾಗಿದೆ ಎಂದು ತಾಲೂಕು ಶಿಕ್ಷಣ ಸುಧಾರಣಾ ಸಮಿತಿಯ ಅಧ್ಯಕ್ಷ ರುದ್ರಪ್ಪ ಕಡ್ಲೇರ್ ಹೇಳಿದರು.

ಶುಕ್ರವಾರ ಪಟ್ಟಣದ ಪುರಸಭಾ ವ್ಯಾಪ್ತಿಯ ಪಿಎಂಶ್ರೀ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಪೋಷಕರು ಮತ್ತು ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಅಜೀಮ್ ಪ್ರೇಮ್‌ಜಿ ಮತ್ತು ಇನ್ಫೋಸಿಸ್ ನಂತಹ ಸಂಸ್ಥೆಗಳ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವುದಲ್ಲದೆ ಶಾಲಾ ಅಭಿವೃದ್ಧಿಯ ಮೂಲಭೂತ ಅವಶ್ಯಕತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಯೋಜನೆಗಳು ರೂಪುಗೊಳ್ಳುತ್ತಿವೆ ಎಂದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಗ್ರಾಮೀಣ ಕೃಪಾಂಕ ಯೋಜನೆಯನ್ನು ಜಾರಿಗೆ ತಂದಿದ್ದರು. ಅದೇ ರೀತಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಮಾತನಾಡಿ, ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಕಾಣಲು ಶಿಕ್ಷಕರ ಜೊತೆ ಪೋಷಕರು ಸಹ ಕೈ ಜೋಡಿಸಬೇಕು ಎಂದರು. ಶಾಲಾ ಮುಖ್ಯ ಶಿಕ್ಷಕ ಪಿ.ಬಿ. ಗಣಪತಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕರ್ನಾಟಕ ಸರ್ಕಾರದ ವತಿಯಿಂದ ಬೆಂಗಳೂರಿನ ಟೌನ್ ಹಾಲಿನಲ್ಲಿ ನಡೆದ ಕಾರ್ಯಕ್ರಮವನ್ನು ಆನ್ಲೈನ್‌ ಪರದೆಯ ಮೂಲಕ ವೀಕ್ಷಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಕ್ಷೇತ್ರ ಸಮನ್ವಯ ಅಧಿಕಾರಿ ದಯಾನಂದ ಕಲ್ಲೇರ್, ಕ್ಷೇತ್ರ ಶಿಕ್ಷಣ ಸಂಯೋಜಕರಾದ ಸಂಜೀವ್ ಕುಮಾರ್, ಅರುಣ್‌ಕುಮಾರ್, ಪಿಎಂಶ್ರೀ ನೋಡಲ್ ಅಧಿಕಾರಿ ಸಿ.ಪಿ. ಸದಾನಂದ, ಸಿಆರ್‌ಪಿಗಳಾದ ಹರೀಶ್, ರುದ್ರೇಶ್, ಶಿಕ್ಷಕಿಯರಾದ ಅಕ್ಕ ನಾಗು, ರೇಖಾ, ಶಾಂತ ಗೌಡ, ಪ್ರಭಾವತಿ, ರವಿಕಿರಣ, ಎಸ್‌ಡಿಎಂಸಿ ಉಪಾಧ್ಯಕ್ಷೆ ಹೊನ್ನಮ್ಮ, ಸದಸ್ಯರಾದ ವೈ.ಜಿ. ಗುರುಮೂರ್ತಿ, ಜಬೇರಾ, ಪ್ರವೀಣ್‌ಗೌಡ್ರು, ಶಶಿಧರಗೌಡ್ರು, ಮಹಾಲಕ್ಷ್ಮೀ ಸೇರಿದಂತೆ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!