- ಸಾಸ್ವೇಹಳ್ಳಿಯಲ್ಲಿ ಎಸ್‌ಐಆರ್ ಜನಜಾಗೃತಿ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ನೀಡಿದ್ದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಹಾಗೂ ಸಾಮಾಜಿಕ ಭದ್ರತೆಯಡಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ ಹಾಗೂ ಅಂಗವಿಕಲ ವೇತನವನ್ನು ಕಳೆದ ನಾಲ್ಕೈದು ತಿಂಗಳಿನಿಂದಲ್ಲೂ ನೀಡಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.ತಾಲೂಕಿನ ಸಾಸ್ವೇಹಳ್ಳಿ ಗ್ರಾಮದಲ್ಲಿ ಜುಲೈ 8ರಂದು ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆ ಹಾಗೂ ಎಸ್‌ಐಆರ್ ಬಗ್ಗೆ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ನಾವು ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿ ಎಸ್‌ಐಆರ್ ಬಗ್ಗೆ ಜನಜಾಗೃತಿ ಮೂಡಿಸುವ ವೇಳೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ಹಾಗೂ ಗೃಹಲಕ್ಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಬಾರದೇ ತೊಂದರೆ ಉಂಟಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆಗೆ ಮುಂಚೆ ಅಧಿಕಾರಕ್ಕೆ ಬರುವುದರ ಭರದಲ್ಲಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸುಳ್ಳು ಭರವಸೆ ನೀಡಿದ ಕಾಂಗ್ರೆಸ್ ಮುಖಂಡರು ಈಗ ಏಕಾಏಕಿ ಗೃಹಲಕ್ಷ್ಮಿ ಯೋಜನೆಯನ್ನೇ ನಿಲ್ಲಿಸಿದ್ದಾರೆ. ಅದನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಬಡ ಹಾಗೂ ಮಧ್ಯಮ ವರ್ಗದವರ ಪಾಡೇನು ಎಂದರು.
ಸರ್ಕಾರ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ ಸೇರಿದಂತೆ ವಿವಿಧ ನಿಗಮಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದಕ್ಕೆ ಬಿಜೆಪಿ ವಿರೋಧಿಸುತ್ತದೆ. ಖಾಸಗೀಕರಣ ಮಾಡಿದರೆ ವಿದ್ಯುತ್ ಬಿಲ್ ಹೆಚ್ಚಾಗುತ್ತದೆ. ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಸೌಲಭ್ಯ ರದ್ದಾಗುತ್ತದೆ. ಎಷ್ಟೋ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ ಇದೆ ಎಂದು ಹೇಳಿದರು.
- - -
- - -
ತಾಲೂಕು ಬಿಜೆಪಿ ಘಟಕದಿಂದ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ಹಾಗೂ ಎಸ್‌ಐಆರ್ ಜಾಗೃತಿ ಸಭೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿದರು.